ಕೊಪ್ಪಳ: ಶಾಸಕ ಯತ್ನಾಳ್​ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್​!

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಕನಕಗಿರಿ ತಾಲೂಕಿನ ಮುಸಲಾಪುರದ ಓರ್ವ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೆ ಯತ್ನಾಳ್​​ ಬೆಂಬಲಿಗರು ಆಕ್ರೋಶ ಹೊರಹಾಕಿದ್ದರು.

ಕೊಪ್ಪಳ: ಶಾಸಕ ಯತ್ನಾಳ್​ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್​!
ಪ್ರಾತಿನಿಧಿಕ ಚಿತ್ರ
Edited By:

Updated on: Aug 24, 2025 | 2:20 PM

ಕೊಪ್ಪಳ, ಆಗಸ್ಟ್​ 24: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basangouda patil yatnal) ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕನಕಗಿರಿ ಪೊಲೀಸರು ಬಂಧಿಸಿದ್ದಾರೆ (arrest). ಹುಸೇನಿ ಬಂಧಿತ ಯುವಕ. ಸದ್ಯ ಈತನ  ವಿರುದ್ಧ ಗುನ್ನೆ ನಂಬರ್ 162/2025, ಕಲಂ 353(1)ಸಿ, 353(2) ಬಿಎನ್ಎಸ್ 2003 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಯುವಕ ಹುಸೇನಿ, ಶಾಸಕ ಯತ್ನಾಳ್​ ವಿರುದ್ದ ಅವಹೇಳಕಾರಿ ಮಾತನಾಡಿ ವಿಡಿಯೋ ಹರಿಬಿಟ್ಟಿದ್ದ. ವಿಡಿಯೋ ವೈರಲ್ ಆದ ಬೆನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೆ ಯತ್ನಾಳ್​​ ಬೆಂಬಲಿಗರು ಆಕ್ರೋಶ ಹೊರಹಾಕಿದ್ದರು.

ಹುಸೇನಿ ಹೇಳಿದ್ದೇನು?

ಶಾಸಕ​ ಯತ್ನಾಳ್​ ಅಧಿವೇಶನದಲ್ಲಿ ಆಜಾನ್​​ ಕುರಿತಾಗಿ ಪ್ರಸ್ತಾಪಿಸಿದ್ದ ವಿಚಾರವಾಗಿ ವಿಡಿಯೋ ಹರಿಬಿಟ್ಟಿದ್ದ ಹುಸೇನಿ, ‘ನೀನು ಬೂಟು ನೆಕ್ಕಿದ ವಂಶಸ್ಥ’ ಎಂದು ನಾಲಿಗೆ ಹರಿಬಿಟ್ಟಿದ್ದ. ಈ ವಿಡಿಯೋ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮುಸಲಾಪುರ ಗ್ರಾಮದಲ್ಲಿ ಜಮಾವಣೆಗೊಂಡಿದ್ದ ಯತ್ನಾಳ್​​ ಬೆಂಬಲಿಗರು ಕ್ರಮಕ್ಕೆ ಒತ್ತಾಯಿಸಿದ್ದರು. ಬಳಿಕ ಹುಸೇನಿ ಕ್ಷಮೆ ಕೂಡ ಕೇಳಿದ್ದಾನೆ.

ಯತ್ನಾಳ್​ ವಿರುದ್ದ ಕೊಪ್ಪಳ ನಗರ ಠಾಣೆಯಲ್ಲಿ ಕೇಸ್ ದಾಖಲು

ಇನ್ನು ಇತ್ತೀಚೆಗೆ ಕೊಪ್ಪಳದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ ಆಡಿದ್ದ ಮಾತು ರಾಜ್ಯದಲ್ಲಿ ಕಿಡಿ ಹೊತ್ತಿಸಿತ್ತು. ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು: ಯತ್ನಾಳ್​

ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ನಿವಾಸಕ್ಕೆ ಭೇಟಿ ನೀಡಿ ಆತನ ಕುಟುಂಬಕ್ಕೆ ಸಾಂತ್ವನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನ ಮುಸ್ಲಿಂ ಸಮುದಾಯ ತೀವ್ರವಾಗಿ ಖಂಡಿಸಿತ್ತು. ಯತ್ನಾಳ್​ ಕಾರ್​ಗೆ ವಿಜಯಪುರದಲ್ಲಿ ಮುತ್ತಿಗೆ ಕೂಡ ಹಾಕಲಾಗಿತ್ತು.

ಘಟನೆ ನಡೆದು ಹತ್ತು ದಿನಗಳ ಬಳಿಕ ಕೊಪ್ಪಳ ನಗರ ಠಾಣೆಯಲ್ಲಿ ಯತ್ನಾಳ್​ ವಿರುದ್ದ ದೂರು ಕೂಡ ದಾಖಲಾಗಿತ್ತು. ಮುಸ್ಲಿಂ ಸಮುದಾಯದ ಮುಖಂಡ ಅಬ್ದುಲ್ ರಜಾಕ್ ದೂರು ನೀಡಿದ್ದರು. ಯತ್ನಾಳ್​ ರಾಜ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಅವರ ಮೇಲೆ ಕ್ರಮ ಆಗಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.