ಕೊಪ್ಪಳ: ವಿದ್ಯುತ್ ಸ್ಪರ್ಶಗೊಂಡು ಜ್ಞಾಪಕ ಶಕ್ತಿ ಕಳೆದುಕೊಂಡ ಬಾಲಕ, ಗುತ್ತಿಗೆದಾರನ ವಿರುದ್ಧ ದೂರು ದಾಖಲು

ವಿದ್ಯುತ್ ಸ್ಪರ್ಶದಿಂದ ಬಾಲಕನಿಗೆ ಗಂಭೀರ ಗಾಯಗಳಾದ ಘಟನೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮ ನಡೆದಿದ್ದು, ಗುತ್ತಿಗೆದಾರ ಮಹದೇವಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

ಕೊಪ್ಪಳ: ವಿದ್ಯುತ್ ಸ್ಪರ್ಶಗೊಂಡು ಜ್ಞಾಪಕ ಶಕ್ತಿ ಕಳೆದುಕೊಂಡ ಬಾಲಕ, ಗುತ್ತಿಗೆದಾರನ ವಿರುದ್ಧ ದೂರು ದಾಖಲು
ಅಕ್ರಮವಾಗಿ ವಿದ್ಯುತ್​ ಬಳಸಿ ನೀರಿನ ಟ್ಯಾಂಕ್ ನಿರ್ಮಾಣ; ವಿದ್ಯುತ್ ತಂತಿ ತಗುಲಿ ಜ್ಞಾಪಕ ಶಕ್ತಿ ಕಳೆದುಕೊಂಡ ಬಾಲಕ
Follow us
TV9 Web
| Updated By: Rakesh Nayak Manchi

Updated on:Dec 31, 2022 | 8:53 AM

ಕೊಪ್ಪಳ: ವಿದ್ಯುತ್ ಸ್ಪರ್ಶದಿಂದ (Electrocution) ಬಾಲಕ ಗಂಭೀರ ಗಾಯಗೊಂಡು ತನ್ನ ಜ್ಞಾಪಕ ಶಕ್ತಿಯನ್ನೇ ಕಳೆದುಕೊಂಡ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ವಿದ್ಯುತ್​ ಬಳಸಿ ನೀರಿನ ಟ್ಯಾಂಕ್ ನಿರ್ಮಾಣ ಮಾಡುತ್ತಿದ್ದ ಆಟದ ಮೈದಾನದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಗುತ್ತಿಗೆದಾರ ಮಹದೇವಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ ಮಾಡುತ್ತಿದ್ದಾರೆ.

ಮೈಲಾಪುರ ಗ್ರಾಮದಲ್ಲಿ ಗುತ್ತಿಗೆದಾರ ಮಹದೇವಪ್ಪ ಎಂಬವರು ಅನಧಿಕೃತ ವಿದ್ಯುತ್ ಬಳಸಿ‌ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಅಷ್ಟೇ ಅಲ್ಲದೆ ಬೇಕಾಬಿಟ್ಟಿ ಆಟದ ಮೈದಾನದಲ್ಲಿ ವಿದ್ಯುತ್ ವೈರ್​​ಗಳನ್ನು ಎಸೆದಿದ್ದರು. ಈ ಸ್ಥಳದಲ್ಲಿ ವೀರೇಶ್ (10) ಎಂಬ ಬಾಲಕ ಆಟವಾಡುತ್ತಿದ್ದಾಗ ವಿದ್ಯುತ್ ವೈರ್ ಸ್ಪರ್ಶಗೊಂಡು ವಿದ್ಯುತ್ ಪ್ರವಹಿಸಿದೆ. ಘಟನೆಯಲ್ಲಿ ಬಾಲಕನ ಕೈಗೆ ಗಾಯಗಳಾಗಿದ್ದು, ಜ್ಞಾಪಕ ಶಕ್ತಿ ಕೂಡ ಕಳೆದುಕೊಂಡಿದ್ದಾನೆ.

ಇದನ್ನೂ ಓದಿ: ಅಣೆಕಟ್ಟಿಗೆ ಪಂಪ್ ಮೋಟಾರ್ ಇರಿಸಲು ಹೋಗಿ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವು

ದುರ್ಘಟನೆ ಸಂಬಂಧ ಗುತ್ತಿಗೆದಾರ ಮಹಾದೇವಪ್ಪ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಪಂಚಾಯತ್ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ಶಾಲೆಯೊಂದರಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತದಾದರೂ ಓರ್ವ ಬಾಲಕ ಕೊನೆಯುಸಿರೆಳೆದಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:53 am, Sat, 31 December 22

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ