AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!

ಕೊಪ್ಪಳ ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಅವರ ಅಮಾನತು ಕೇವಲ 10 ದಿನಗಳಲ್ಲಿ ಹಿಂಪಡೆಯಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಸುಮಾರು 10 ಕೋಟಿ ರೂ. ಅಕ್ರಮ ಆರೋಪದ ಮೇಲೆ ಲೋಕಾಯುಕ್ತ ತನಿಖೆಯಲ್ಲಿ ಅವ್ಯವಹಾರಗಳು ಬಯಲಾಗಿದ್ದವು. ಆದರೆ, ಸೋಮಲಿಂಗಪ್ಪ ಹೈಕೋರ್ಟ್ ತಡೆಯಾಜ್ಞೆ ಪಡೆದ ಕಾರಣ, ಪೌರಾಡಳಿತ ಇಲಾಖೆ ಆದೇಶ ಹಿಂಪಡೆದಿದೆ. ಈ ತ್ವರಿತ ಕ್ರಮ ಸಾರ್ವಜನಿಕರಲ್ಲಿ ಗಂಭೀರ ಅನುಮಾನಗಳನ್ನು ಹುಟ್ಟುಹಾಕಿದೆ.

ಕೋಟ್ಯಂತರ ಅಕ್ರಮದ ನಡುವೆಯೇ 10 ದಿನಗಳಲ್ಲಿ ನಗರ ಸಭೆ ಜೆಇ ಅಮಾನತು ವಾಪಸ್! ಅನುಮಾನಕ್ಕೆ ಎಡೆ ಮಾಡಿ‌ಕೊಟ್ಟ ಆದೇಶ!
ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ
ಶಿವಕುಮಾರ್ ಪತ್ತಾರ್
| Edited By: |

Updated on: Mar 27, 2026 | 11:41 AM

Share

ಕೊಪ್ಪಳ, ಮಾರ್ಚ್​ 27: ಅಕ್ರಮ ಹಣ ವ್ಯವಹಾರ ನಡೆಸಿದ ಆರೋಪದ ಹಿನ್ನೆಲೆ ಅಮಾನತುಗೊಂಡಿದ್ದ ಕೊಪ್ಪಳ (Koppal) ನಗರಸಭೆಯ ಜೂನಿಯರ್ ಇಂಜಿನಿಯರ್ ಸೋಮಲಿಂಗಪ್ಪ ಪ್ರಕರಣದಲ್ಲಿ ಹೊಸ ತಿರುವು ಎದುರಾಗಿದೆ. ಪೌರಾಡಳಿತ ಇಲಾಖೆ ಕೇವಲ 10 ದಿನಗಳಲ್ಲೇ ಅಮಾನತು ಆದೇಶವನ್ನು ಹಿಂಪಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನೂರಾರು ಕಾಮಗಾರಿಗಳಲ್ಲಿ ಲೋಪ

ಸೋಮಲಿಂಗಪ್ಪ ವಿರುದ್ಧ ಸುಮಾರು 10 ಕೋಟಿ ರೂಪಾಯಿ ಅಕ್ರಮ ಆರೋಪ ಕೇಳಿಬಂದಿತ್ತು. 2023-24 ಹಾಗೂ 2024-25ನೇ ಸಾಲಿನ ಸುಮಾರು 336 ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಮಾರ್ಚ್ 16ರಂದು ಪೌರಾಡಳಿತ ಇಲಾಖೆ ಅವರನ್ನು ಅಮಾನತು ಮಾಡಿತ್ತು.

ಹೈ ಕೋರ್ಟ್​ ತಡೆಯಾಜ್ಞೆ

ಆದರೆ, ಅಮಾನತು ಆದೇಶದ ವಿರುದ್ಧ ಸೋಮಲಿಂಗಪ್ಪ ಧಾರವಾಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ನ್ಯಾಯಾಲಯದಿಂದ ತಾತ್ಕಾಲಿಕ ತಡೆ ಸಿಕ್ಕ ಹಿನ್ನೆಲೆ, ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದರಿಂದ ಕೇವಲ 10 ದಿನಗಳೊಳಗೆ ಅಮಾನತು ವಾಪಸ್ ಪಡೆದಿರುವ ಕ್ರಮ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಲೋಕಾಯುಕ್ತ ತನಿಖೆಯಲ್ಲಿ ಗಂಭೀರ ಅಕ್ರಮಗಳು ಬಹಿರಂಗವಾಗಿದ್ದರೂ, ತ್ವರಿತವಾಗಿ ಆದೇಶ ಹಿಂಪಡೆಯಲ್ಪಟ್ಟಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದಲ್ಲಿ ಮುಂದಿನ ನ್ಯಾಯಾಲಯದ ತೀರ್ಪು ಹಾಗೂ ತನಿಖೆಯ ಫಲಿತಾಂಶವೇ ಸತ್ಯಾಂಶವನ್ನು ಬಹಿರಂಗಪಡಿಸುವುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ