ಕೊಪ್ಪಳ: ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದರಿಂದ ಘರ್ಷಣೆ

| Updated By: ವಿವೇಕ ಬಿರಾದಾರ

Updated on: Aug 14, 2023 | 11:15 AM

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ನಡೆದಿದ್ದ ಗಲಾಟೆಗೆ ಟ್ವಿಸ್ಟ್​ ಸಿಕ್ಕಿದೆ. ಗಲಾಟೆ ಜೂಜು ಅಡ್ಡೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದ್ದರಿಂದ ನಡೆದಿದೆ ಎಂಬ ಅಂಶ ಬಹಿರಾಗವಾಗಿದೆ.

ಕೊಪ್ಪಳ: ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದರಿಂದ ಘರ್ಷಣೆ
ಬೂದುಗುಂಪಾ ಗ್ರಾಮ ಪಂಚಾಯಿತಿ
Follow us on

ಕೊಪ್ಪಳ (ಆ.14) : ಜಿಲ್ಲೆಯ ಕಾರಟಗಿ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ (Gram Panchayat) ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ನಡೆದಿದ್ದ ಗಲಾಟೆಗೆ (Clash) ಟ್ವಿಸ್ಟ್​ ಸಿಕ್ಕಿದೆ. ಗಲಾಟೆ ಜೂಜು ಅಡ್ಡೆ ಮೇಲೆ ಗ್ರಾಮಸ್ಥರು ದಾಳಿ ಮಾಡಿದ್ದರಿಂದ ನಡೆದಿದೆ ಎಂಬ ಅಂಶ ಬಹಿರಾಗವಾಗಿದೆ. ಲಕ್ಷ ಲಕ್ಷ ಹಣವಿಟ್ಟು ಇಸ್ಪೀಟ್ ಆಡುತ್ತಿದ್ದ ಜೂಜು ಅಡ್ಡೆ ಮೇಲೆ ಗ್ರಾಮಸ್ಥರು ಮತ್ತು ಪೊಲೀಸರು ಜೊತೆಗೂಡಿ ದಾಳಿ ಮಾಡಿದ್ದರು. ಈ ಸಿಟ್ಟಿನಿಂದ ದಂಧೆಕೋರರು ಗ್ರಾಮಸ್ಥರ ಜೊತೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಮೀಸಲಾತಿ ವಿಚಾರವಾಗಿ ಕಿರಿಕ್ ಮಾಡಿದ್ದರು. ಇದರಿಂದ ಎರಡೂ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇನ್ನು ಪೊಲೀಸರು ಇಸ್ಪೀಟ್ ಅಡ್ಡೆಗೆ ಭೇಟಿ ನೀಡಿದರೂ ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯವಹಿಸಿದ್ದೇಕೆ ? ಪೊಲೀಸರ ನಿರ್ಲಕ್ಷ್ಯವೇ ಗಲಾಟೆಗೆ ಕಾರವಾಯ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಬೂದಗುಂಪಾ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಶನಿವಾರ ಗಲಾಟೆ ನಡೆದಿತ್ತು. ಎರಡು ಗುಂಪುಗಳು ಕಟ್ಟಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದವು. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರ ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಕೊಪ್ಪಳ: ಬಟನ್ ರೋಸ್ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ ಹೊಸೂರು ಗ್ರಾಮದ ರೈತ

ಬೂದಗುಂಪಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್​​ಟಿ ಮೀಸಲಾತಿ ಬಂದಿತ್ತು. ಇದನ್ನು ಪ್ರಶ್ನಿಸಿ ಇತರೆ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ ನಿನ್ನೆ (ಆ.12) ರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆ ನಡೆದಿತ್ತು ಎನ್ನಲಾಗುತ್ತಿದೆ.

ಕೊಪ್ಪಳ ಎಸ್​ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದರು. ಡಿವೈಎಸ್​ಪಿ ನೇತೃತ್ವದಲ್ಲಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Mon, 14 August 23