Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕಾನ್ವೆಗೆ ಎದುರಾಗಿ ಕಾರು ಚಾಲನೆ: ಜನಾರ್ದನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು

ಶಾಸಕ ಜನಾರ್ದನ ರೆಡ್ಡಿ ಅವರ ಕಾರು ಚಾಲಕ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಎಂ ಕಾನ್ವೆಗೆ ಎದುರಾಗಿ ಕಾರು ಚಾಲನೆ: ಜನಾರ್ದನ ರೆಡ್ಡಿ ಕಾರು ಚಾಲಕನ ವಿರುದ್ಧ ದೂರು
ಜನಾರ್ದನ್​ ರೆಡ್ಡಿ ಕಾರು
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Oct 06, 2024 | 9:46 PM

ಕೊಪ್ಪಳ, ಅಕ್ಟೋಬರ್​ 06: ಶಾಸಕ ಜನಾರ್ದನ ರೆಡ್ಡಿ (Janardhan Reddy) ಅವರ ಕಾರು ಚಾಲಕನ (Car Driver) ವಿರುದ್ಧ ದೂರು ದಾಖಲಾಗಿದೆ. ಶನಿವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಗಂಗಾವತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಝೀರೋ ಟ್ರಾಫಿಕ್ ಕಾನೂನು ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

ಶನಿವಾರ ರಾಯಚೂರು ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಹೀಗಾಗಿ ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ನಿಮಿಷ, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಶಾಸಕ ಜನಾರ್ದನ ರೆಡ್ಡಿ ಕಾರು

ಗಂಗಾವತಿ ನಗರದ ಸಿಬಿಎಸ್ ಸರ್ಕಲ್​ನಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡಾ ಸಿಲುಕ್ಕಿದ್ದರು. ಬಹಳ ಹೊತ್ತಾದರೂ ಕೂಡಾ ವಾಹನ ಸಂಚಾರಕ್ಕೆ ಅವಕಾಶ ನೀಡದೆ ಇದ್ದಿದ್ದರಿಂದ ರೋಡ್​ನ ಡಿವೈಡರ್ ಮೂಲಕ ಜನಾರ್ದನ್​ ರೆಡ್ಡಿ ಕಾರು ಚಾಲಕ, ಕಾನ್ವೇ ವಿರುದ್ದ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇದಕ್ಕೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:39 pm, Sun, 6 October 24

ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಪಾಕಿಸ್ತಾನ್ ಸೋಲುತ್ತಿದ್ದಂತೆ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ಪಾಕ್ ಅಭಿಮಾನಿ
ಪಾಕಿಸ್ತಾನ್ ಸೋಲುತ್ತಿದ್ದಂತೆ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ಪಾಕ್ ಅಭಿಮಾನಿ