ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​

ಅಕ್ಟೋಬರ್ 10 ರಂದು ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಮನವಿ ಮಾಡಿದ್ದರು. ಮುಂದೇನಾಯ್ತು ಇಲ್ಲಿದೆ ಓದಿ..

ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ: ಕಾಂಗ್ರೆಸ್​ ಮಾಜಿ ಶಾಸಕನ ಆಡಿಯೋ ವೈರಲ್​​​
ಮಾಜಿ ಶಾಸಕ ಅಮರೇಗೌಡ ಬೈಯಾಪುರ
Updated By: ವಿವೇಕ ಬಿರಾದಾರ

Updated on: Nov 20, 2023 | 12:30 PM

ಕೊಪ್ಪಳ ನ.20: ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂದು ಕುಷ್ಟಗಿ (Kustagi) ಕ್ಷೇತ್ರದ ಕಾಂಗ್ರೆಸ್​ನ (Congress) ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ (Amaregouda Bayyapur) ಮಾತನಾಡಿರುವ ಫೋನ್​ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ.

ಅಕ್ಟೋಬರ್ 10 ರಂದು ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡರೂ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದರು. ಹೀಗಾಗಿ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ಎಸ್ಪಿಗೆ ದೂರು ನೀಡಿದ್ದರು. ಹಾಗೆ ನ್ಯಾಯಕೊಡಿಸುವಂತೆ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಮನವಿ ಮಾಡಿದರು.

ಇದನ್ನೂ ಓದಿ: ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ 

ಆದರೆ ಅಮರೇಗೌಡ ಬಯ್ಯಾಪುರ ಅವರು ಆರೋಪಿ ಪರವಾಗಿಯೇ ನಿಲುವು ತಾಳಿದ್ದು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಅವರಿಗೆ ದೂರು ನೀಡಬಾರದಿತ್ತು ಎಂದು ಯಮನೂರಪ್ಪ ಅವರಿಗೆ ಹೇಳಿದ್ದಾರೆ. ಅಲ್ಲದೆ “ನಿಮ್ಮ ಮರ್ಯಾದೆಯನ್ನು ನೀವೆ ಕಳೆದುಕೊಳ್ಳುತ್ತಿದ್ದೀಯಾ, ಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡಣ. ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಸೂಕ್ಷ್ಮ ವಿಚಾರ ಇದು, ಮರ್ಯಾದೆ ಪ್ರಶ್ನೆ ಇದೆ ಯೋಚಿಸು” ಎಂದು ಅಮರೇಗೌಡ ಬಯ್ಯಾಪುರ ಸಂತ್ರಸ್ತೆ ಮಾವನಿಗೆ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Mon, 20 November 23