Koppal Contaminated Water: ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ? ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಪ್ರಾಣ ಬಿಟ್ಟ 10 ವರ್ಷದ ಬಾಲಕಿ

ವಾಂತಿ ಭೇದಿಗೆ ತುತ್ತಾಗಿದ್ದ ನಿರ್ಮಲಾ ಈರಪ್ಪ ಬೆಳಗಲ್‌ ಎಂಬ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ‌ ಆಸ್ಪತ್ರೆಗೆ ದಾಖಲಾಗಿದ್ರು.

Koppal Contaminated Water: ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ? ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಪ್ರಾಣ ಬಿಟ್ಟ 10 ವರ್ಷದ ಬಾಲಕಿ
ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿ?
Follow us
ಆಯೇಷಾ ಬಾನು
|

Updated on: Jun 08, 2023 | 12:29 PM

ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ(Contaminated Water) ಮತ್ತೊಂದು ಬಲಿಯಾಗಿದೆ?. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ(Girl) ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿದ್ದು ಒಂದೂವರೆ ವರ್ಷದ ಮಗು ತಾವರಗೇರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ಹಾಗೂ ಹೊನ್ನಮ್ಮ ಎಂಬ ವೃದ್ದೆ ಸಾವನ್ನಪ್ಪಿದ್ರು. ಆದ್ರೆ ವೃದ್ಧೆಗೆ ಬೇರೆ ಬೇರೆ ಕಾಯಿಲೆಗಳಿದ್ದವು ಎಂದು ಕೊಪ್ಪಳ ಡಿಹೆಚ್​ಓ ತಿಳಿಸಿದ್ದರು. ಇದರ ನಡುವೆ ಈಗ ಜಿಲ್ಲೆಯಲ್ಲಿ ಕಲುಷಿತ ನೀರಿಗೆ ಬಾಲಕಿ ಬಲಿಯಾಗಿದ್ದಾಳೆ.

ವಾಂತಿ ಭೇದಿಗೆ ತುತ್ತಾಗಿದ್ದ ನಿರ್ಮಲಾ ಈರಪ್ಪ ಬೆಳಗಲ್‌ ಎಂಬ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ‌ ಆಸ್ಪತ್ರೆಗೆ ದಾಖಲಾಗಿದ್ರು. ಇನ್ನು ಮೃತ ಬಾಲಕಿಗೆ ನಿನ್ನೆ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯ್ತು. ಆದರೆ ಮನೆಯಲ್ಲಿಯೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಗೆ ಕರೆದುಕೊಂಡು ಬರುವ ಮೊದಲೇ ಮೃತಪಟ್ಟಿದ್ದಳು. ಕಲುಷಿತ ನೀರು ಸೇವನೆಯಿಂದಲೇ ವಾಂತಿ ಬೇಧಿ ಉಂಟಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Koppal: ಬಸರಿಹಾಳ ಗ್ರಾಮದ ಹೊನ್ನಮ್ಮ ಸಾವಿಗೆ ಕಲುಷಿತ ನೀರು ಕಾರಣವಲ್ಲ -ಡಿಹೆಚ್​ಓ ಸ್ಪಷ್ಟನೆ

ಬಸರಿಹಾಳ ಗ್ರಾಮದ ಘಟನೆ ಬಳಿಕ ಕೊಪ್ಪಳ ಜಿಲ್ಲಾ ಪಂಚಾಯತ ಸಿಇಓ ರಾಹುಲ್ ರತ್ನಂ ಪಾಂಡೆ, ನಿರಂತರವಾಗಿ ಅಧಿಕಾರಿಗಳ ಸಭೆ ನಡೆಸಿದ್ದರು. ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಮಟ್ಟದ ಆರೋಗ್ಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳಿಂದ ವರದಿ ಕೇಳಿದ್ದರು. ಬಸರಿಹಾಳ ಗ್ರಾಮದಲ್ಲಿನ ನೀರನ್ನ ಲ್ಯಾಬ್ ಕಳಿಸಿ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಮೊನ್ನೆಯಷ್ಟೆ ಗ್ರಾಮಕ್ಕೆ ಭೇಟಿ ನೀಡಿ ಬಸರಿಹಾಳ ಗ್ರಾಮದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಆದ್ರೆ ಈಗ ಕೊಪ್ಪಳ ಜಿಲ್ಲೆಯಲ್ಲೇ ಮತ್ತೊಂದು ಜೀವ ಬಲಿಯಾಗಿದೆ. ಜಿಲ್ಲೆಯಾದ್ಯಂತ ಎಲ್ಲಾ ಕಡೆಗಳಲ್ಲಿಯೂ ಆರೋಗ್ಯ ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಸಿಇಓ ರಾಹುಲ್ ತಿಳಿಸಿದ್ದರು ಎನ್ನಲಾಗಿದೆ. ಆದ್ರೆ ಇಷ್ಟೆಲ್ಲಾ ಕ್ರಮದ ನಡುವೆಯೂ ಈ ರೀತಿಯ ಖಂಡನೆ ಆಕ್ರೋಶಕ್ಕೆ ಕಾರಣವಾಗಿದೆ.

ಕೊಪ್ಪಳದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ