AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ 23 ವರ್ಷಗಳ ಬಳಿಕ ಅರೆಸ್ಟ್

ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ಮದುವೆಯಾದ ವೃದ್ಧನೊಬ್ಬ ಕೊನೆಯ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಶವವನ್ನು ಬಸ್​​ನಲ್ಲಿ ಲಗೇಜ್ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ. ನಂತರ ತಲೆಮರೆಸಿಕೊಂಡಿದ್ದ ಆತನನ್ನು ಇದೀಗ ಘಟನೆ ನಡೆದ 23 ವರ್ಷಗಳ ಬಳಿಕ ಬಂಧಿಸುವಲ್ಲಿ ಗಂಗಾವತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಲಿಗೆ ಆ ವೃದ್ಧ ಮಾಡಿದ್ದೇನು? ನಿಜಕ್ಕೂ ನಡೆದಿದ್ದೇನು ಎಂಬುದರ ವಿವರ ಇಲ್ಲಿದೆ.

ಕೊಪ್ಪಳ: ಮೂರನೇ ಪತ್ನಿಯ ಕೊಲೆ ಮಾಡಿ ಬಸ್​ನಲ್ಲಿ ಲಗೇಜ್ ಎಂದು‌ ಕಳುಹಿಸಿ ಪರಾರಿಯಾಗಿದ್ದ ವೃದ್ಧ 23 ವರ್ಷಗಳ ಬಳಿಕ ಅರೆಸ್ಟ್
ಆರೋಪಿ ಹುಸೇನಪ್ಪ
ಶಿವಕುಮಾರ್ ಪತ್ತಾರ್
| Updated By: Ganapathi Sharma|

Updated on:Jun 27, 2025 | 10:30 AM

Share

ಕೊಪ್ಪಳ, ಜೂನ್ 27: ಅಪರೂಪದಲ್ಲೇ ಅಪರೂಪದ ಅಪರಾಧ ಕೃತ್ಯವೊಂದಕ್ಕೆ ಕೊಪ್ಪಳ (Koppal) ಜಿಲ್ಲೆ ಸಾಕ್ಷಿಯಾಗಿದೆ. ವ್ಯಕ್ತಿಯೊಬ್ಬ ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ ಪರಾರಿಯಾಗಿದ್ದಲ್ಲದೆ, ತಲೆಮರೆಸಿಕೊಂಡು ಹಾಯಾಗಿದ್ದ! ಇದೀಗ ಕೃತ್ಯ ಎಸಗಿ 23 ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ 75 ವರ್ಷದ ಹುಸೇನಪ್ಪನನ್ನು ಬಂಧಿಸಲಾಗಿದೆ.

ಸರ್ಕಾರಿ ನೌಕರ ಎಂದು ಹೇಳಿಕೊಂಡು ಮೂರನೇ ಮದುವೆಯಾಗಿದ್ದ ಹುಸೇನಪ್ಪ

ಪ್ರಾಥಮಿಕ ಆರೋಗ್ಯ ‌ಕೇಂದ್ರದಲ್ಲಿ ಕಿರಿಯ ಸಹಾಯಕ ಅಧಿಕಾರಿಯಾಗಿದ್ದ ಹುಸೇನಪ್ಪನ ಮೊದಲ ಪತ್ನಿ ತೀರಿಕೊಂಡಿದ್ದರು. ಅದಾದ ನಂತರ ಆತ, ಎರಡನೇ ವಿವಾಹವಾಗಿದ್ದ. ಆಕೆ ಜಗಳವಾಡಿ ಪತಿಯನ್ನು ತೊರೆದು ಹೋಗಿದ್ದಳು. ನಂತರ, ಸರ್ಕಾರಿ ನೌಕರ ಎಂದು ಹೇಳಿಕೊಂಡು ಕೊಪ್ಪಳ ‌ತಾಲೂಕಿನ‌ ಇಂದರಗಿ ನಿವಾಸಿ ರೇಣುಕಮ್ಮರನ್ನು ಮೂರನೇ ಮದುವೆಯಾಗಿದ್ದ. ಮದುವೆಯಾದ ಬಳಿಕ ಗಂಗಾವತಿಯ‌ ಲಕ್ಷ್ಮೀ ಕ್ಯಾಂಪ್‌ನಲ್ಲಿ ಪತ್ನಿ ಜೊತೆ ವಾಸ ಮಾಡತಿದ್ದ.

ಹೆಂಡತಿಯನ್ನು ಕೊಚ್ಚಿ‌ ಕೊಲೆ ಮಾಡಿದ್ದ ಹುಸೇನಪ್ಪ

2002 ರಲ್ಲಿ ಹೆಂಡತಿಯನ್ನು ಕೊಚ್ಚಿ‌ ಕೊಲೆ ಮಾಡಿದ್ದ ಹುಸೇನಪ್ಪ, ಶವವನ್ನು ಲಗೇಜ್ ಎಂದು‌ ಕಂಪ್ಲಿ ಬಸ್​ನಲ್ಲಿ ಕಳುಹಿಸಿದ್ದ. ಆ ಬಳಿಕ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ನಂತರ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ಆರೋಪಿಯನ್ನು ಪತ್ತೆಹೆಚ್ಚಿ ಬಂಧಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ
Image
ಕರ್ನಾಟಕದ ಪರೀಕ್ಷಾ ಮಾದರಿ ಅನುಸರಿಸಲು ನಿರ್ಧರಿಸಿದ ಸಿಬಿಎಸ್​ಇ!
Image
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ: ಮುಂಚೂಣಿಯಲ್ಲಿ ಈ ನಾಯಕರ ಹೆಸರು!
Image
ಕಾಂಗ್ರೆಸ್ ಶಾಸಕರ ಅಸಮಾಧಾನದ ಬೆಂಕಿಗೆ ತುಪ್ಪ ಸುರಿದ ಕೆಎನ್ ರಾಜಣ್ಣ
Image
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಇದನ್ನೂ ಓದಿ: ಯುವಕನ ಹಿಂದೆ ಬಿದ್ದು ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು

ಆರು ತಿಂಗಳ ಹಿಂದೆ ಆರೋಪಿ ಸ್ವಗ್ರಾಮ ಹಾಲದಾಳಕ್ಕೆ ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ದೊರೆತಿತ್ತು. ಅದರ ಆಧಾರದಲ್ಲಿ ಪೊಲೀಸರು ಆರೋಪಿಯ ಜಾಡು ಹಿಡಿದಿದ್ದರು. ನಂತರ ಕಾರ್ಯಾಚರಣೆ ನಡೆಸಿದ ಗಂಗಾವತಿ ಪೊಲೀಸರು, ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಹುಸೇನಪ್ಪನನ್ನು ಬಂಧಿಸಿದ್ದಾರೆ. ಇದರೊಂದಿಗೆ, 23 ವರ್ಷ ಹಳೆಯ ಕೊಲೆ ಪ್ರಕರಣವೊಂದನ್ನು ಪೊಲೀಸರು ಬಯಲಿಗೆಳೆದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Fri, 27 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ