ಕೊಪ್ಪಳ: ನಗರಸಭೆ ವ್ಯಾಪ್ತಿಗೆ ಗ್ರಾಮಗಳನ್ನು ತರುವ ಜಿಲ್ಲಾಡಳಿತದ ಕ್ರಮಕ್ಕೆ ಗ್ರಾಮಸ್ಥರ ವಿರೋಧ

| Updated By: ವಿವೇಕ ಬಿರಾದಾರ

Updated on: Sep 23, 2023 | 3:18 PM

ಗ್ರಾಮಗಳ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಜಿಲ್ಲಾಡಳಿತ, ನಗರಸಭೆಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ದಾಖಲೆ ಪಡೆದುಕೊಳ್ಳಲು ಸಿದ್ದತೆ ನಡೆಸಿದೆ. ನಗರಸಭೆಯ ಈ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ: ನಗರಸಭೆ ವ್ಯಾಪ್ತಿಗೆ ಗ್ರಾಮಗಳನ್ನು ತರುವ ಜಿಲ್ಲಾಡಳಿತದ ಕ್ರಮಕ್ಕೆ ಗ್ರಾಮಸ್ಥರ ವಿರೋಧ
ಜಿಲ್ಲಾಡಳಿತ ಪತ್ರ
Follow us on

ಕೊಪ್ಪಳ ಸೆ.23: ಹತ್ತಾರು ಹಳ್ಳಿಗಳನ್ನು ನಗರಸಭೆ (Municipal Council) ವ್ಯಾಪ್ತಿಗೆ ಸೇರಿಸಲು ಮುಂದಾದ ಜಿಲ್ಲಾಡಳಿತ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಂಗಾವತಿ (Gangavati) ನಗರಸಭೆಯನ್ನು “ಎ” ಗ್ರೇಡ್ ನಗರಸಭೆಯನ್ನಾಗಿ ಪರಿವರ್ತನೆ ಮಾಡಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ. ಹೀಗಾಗಿ ಗಂಗಾವತಿ ತಾಲೂಕಿನ ವಡ್ಡರಹಟ್ಟಿ, ಸಂಗಾಪೂರ, ಮರಳಿ, ಜಂಗಮರಕಲ್ಗುಡಿ, ಚಿಕ್ಕಜಂತಗಲ್ ಗ್ರಾಮ ಪಂಚಾಯತಿಗಳನ್ನು ನಗರಸಭೆ ವ್ಯಾಪ್ತಿಗೆ ತರಲು ಜಿಲ್ಲಾಡಳಿತ ಮುಂದಾಗಿದೆ.

ಹೀಗಾಗಿ ಗ್ರಾಮಗಳ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಜಿಲ್ಲಾಡಳಿತ, ನಗರಸಭೆಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಗ್ರಾಮ ಪಂಚಾಯಿತಿ ಪಿಡಿಒಗಳಿಂದ ದಾಖಲೆ ಪಡೆದುಕೊಳ್ಳಲು ಸಿದ್ದತೆ ನಡೆಸಿದೆ. ನಗರಸಭೆಯ ಈ ನಡೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಮದ್ಯಪ್ರೀಯರ ಪ್ರತಿಭಟನೆ; ಕೂಡಲೇ ಬಾರ್​ ಓಪನ್​ ಮಾಡುವಂತೆ ಮನವಿ 

ನಗರಸಭೆಗೆ ನಮ್ಮ ಗ್ರಾಮಗಳು ಸೇರ್ಪಡೆಯಾದರೇ ತೆರಿಗೆ ಕಟ್ಟುವುದು ಜಾಸ್ತಿ ಆಗುತ್ತೆ. ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಪೈಪೋಟಿ ಜಾಸ್ತಿ ಆಗುತ್ತದೆ. ಅಲ್ಲದೇ ಈಗ ದೊರೆಯುತ್ತಿರುವ ಗ್ರಾಮೀಣ ಕೋಟಾ ಸಹ ಹೋಗುತ್ತದೆ. ನರೇಗಾದ ಕೆಲಸಗಳಿಗೆ ಬಡ ಜನರು ಸಿಗಲ್ಲ. ನಮಗೆ ನಗರಸಭೆ ಬೇಡ, ಗ್ರಾಮಪಂಚಾಯಿತಿ ಸಾಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಜಿಲ್ಲಾಡಳಿತ ತಲೆಕೆಡಿಸಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ