ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: 98 ಜನರಿಗೆ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

ಕರ್ನಾಟಕದಾದ್ಯಂತ ಭಾರೀ ಸದ್ದು ಮಾಡಿದ್ದಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ. 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: 98 ಜನರಿಗೆ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆ
98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 24, 2024 | 7:23 PM

ಕೊಪ್ಪಳ್ಳ, (ಅಕ್ಟೋಬರ್ 24): ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.  2014ರಲ್ಲಿ ನಡೆದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು (ಅಕ್ಟೋಬರ್ 24) ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ  ಕೊಲೆ ಯತ್ನ, ದೋಂಬಿ ಸೇರಿದಂತೆ ಇನ್ನಿತರ ಸೆಕ್ಷನ್ ನಲ್ಲಿ ​ ಐದು ವರ್ಷ ಶಿಕ್ಷೆ ವಿಧಿಸಿದೆ.

ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ವಿಧಿಸಿದೆ.

2014 ರ ಆಗಸ್ಟ್ 28 ರಂದು ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇನ್ನು ಮೊನ್ನೇ ಅಂದರೆ ಅಕ್ಟೋಬರ್ 21 ರಂದು ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, 101 ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ​ ಇಂದಿಗೆ (ಅಕ್ಟೋಬರ್ 24) ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು.  ಇದೀಗ ಕೋರ್ಟ್​ ಅಂತಿಮ ತೀರ್ಪು ನೀಡಿದ್ದು, ಅಪರಾಧಿಗಳ ಕುಟುಂಬಸ್ಥರು ಕೋರ್ಟ್​ ಆವರಣದಲ್ಲೇ ಕಣ್ಣಿರು ಹಾಕಿದರು.

ಇದನ್ನೂ ಓದಿ: ಕೊಪ್ಪಳ: ಸವರ್ಣೀಯರು- ದಲಿತರ ನಡುವೆ ಘರ್ಷಣೆ, 101 ಆರೋಪಿಗಳು ಅಪರಾಧಿಗಳು

ಸವರ್ಣೀಯರು-ದಲಿತರ ನಡುವಿನ ಘರ್ಷಣೆಗೆ ಕಾರಣವೇನು?

ಮರಕುಂಬಿ ಗ್ರಾಮದಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ದೊಡ್ಡ ಮಟ್ಟದ ಘರ್ಷಣೆಗೆ ಕಾರಣ, ಗ್ರಾಮದಲ್ಲಿದ್ದ ಅಸ್ಪ್ರಶ್ಯತೆ. ಹೌದು.. ಗ್ರಾಮದಲ್ಲಿ ಸವರ್ಣೀಯರು ನಡೆಸುತ್ತಿದ್ದ ಅಸ್ಪ್ಪಶ್ಯತೆಯನ್ನು ಗ್ರಾಮದ ದಲಿತರು ಖಂಡಿಸಿದ್ದರು. ಇದರಿಂದ ಸವರ್ಣೀಯರು ಮತ್ತು ದಲಿತರ ನಡುವೆ ಆರೋಪ, ಪ್ರತ್ಯಾರೋಪ, ದೂರು ಪ್ರತಿದೂರು ನೀಡುವುದು ನಡದೇ ಇತ್ತು.

ಆದ್ರೆ ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಪವರ್ ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಜಗಳ ಆರಂಭವಾಗಿತ್ತು. ಮಂಜುನಾಥ್ ಮತ್ತು ಸ್ನೇಹಿತರು, ನಮ್ಮೂರಿನ ದಲಿತರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ ಅಂತ ಗ್ರಾಮದಲ್ಲಿ ಹೇಳಿದ್ದ. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣೀಯರು, ದಲಿತರ ಕೇರಿಗೆ ನುಗ್ಗಿ ದಾಂದಲೆ ಮಾಡಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:01 pm, Thu, 24 October 24

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!