ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರ ಕಾರ್ಯಚರಣೆ: 8,5 ಲಕ್ಷ ಮೌಲ್ಯದ ಅಕ್ಕಿ ಮತ್ತು ಕಾರು ಜಪ್ತಿ

ಮುನಿರಾಬಾದ್ ಪೊಲೀಸರ ಕಾರ್ಯಚರಣೆಯಿಂದ 8,5 ಲಕ್ಷ ಮೌಲ್ಯದ 154 ಕ್ವಿಂಟಾಲ್ ಅಕ್ಕಿ ಮತ್ತು ಕಾರು ಜಪ್ತಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಜಪ್ತಿ ಮಾಡಲಾಗಿದೆ.

ಕೊಪ್ಪಳ ಜಿಲ್ಲೆ ಮುನಿರಾಬಾದ್ ಪೊಲೀಸರ ಕಾರ್ಯಚರಣೆ: 8,5 ಲಕ್ಷ ಮೌಲ್ಯದ ಅಕ್ಕಿ ಮತ್ತು ಕಾರು ಜಪ್ತಿ
ಅಕ್ಕಿ ಮತ್ತು ಕಾರು ಜಪ್ತಿ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 18, 2023 | 6:11 PM

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸರ ಕಾರ್ಯಚರಣೆಯಿಂದ 8,5 ಲಕ್ಷ ಮೌಲ್ಯದ 154 ಕ್ವಿಂಟಾಲ್ ಅಕ್ಕಿ ಮತ್ತು ಕಾರು ಜಪ್ತಿ (seize) ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಬೂದಗುಂಪಾ ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ಪ್ರಕಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಪ್ರಶಾಂತ ಮಣ್ಣೂರು, ಗೌತಮ ಬಳಗಾನೂರ, ಮೂಕಪ್ಪ ಹೊಗಾರ ಬಂಧಿತರು. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸ್ವತಂತ್ರ್ಯ ಅಭ್ಯರ್ಥಿಯ ಭಾವಚಿತ್ರ ಹೊಂದಿದ ದಿನಸಿ ವಸ್ತುಗಳನ್ನು ಪೊಲೀಸರು ಸೀಜ್​ ಮಾಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆ ಆಗಿದೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆಂಪರಾಜು ಭಾವಚಿತ್ರ ಹೊಂದಿದ್ದ ದಿನಸಿ ಕಿಟ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಯುಗಾದಿ ಹಬ್ಬದ ಪ್ರಯುಕ್ತ ದಿನಸಿ ನೀಡಲೆಂದು ಕಿಟ್​ಗಳನ್ನು ಇಡಲಾಗಿದೆ ಎನ್ನಲಾಗಿದೆ. ಗೋದಿ ಹಿಟ್ಟು, ಮೈದಾ ಹಿಟ್ಟು, ಕಡಲೇ ಹಿಟ್ಟು, ರವೆ, ಉಪ್ಪು ಸೇರಿದಂತೆ ಸಾವಿರಾರು ಚೀಲಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತದಾರರಿಗೆ ಹಂಚಲು ತಯಾರಿಸಿದ್ದ 2900 ಕುಕ್ಕರ್​ಗಳು ಜಪ್ತಿ

ರಾಮನಗರ: ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್​​ತಯಾರಿಕಾ ಕಾರ್ಖಾನೆ ಮೇಲೆ ತಹಶೀಲ್ದಾರ್​ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ. ವಿಶ್ವಾಸ್ ವೈದ್ಯ ಎಂಬುವರಿಗೆ ಕುಕ್ಕರ್​ಗಳು ಸೇರಿದ್ದು ಎನ್ನಲಾಗುತ್ತಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗುತ್ತಿದೆ. ಸದ್ಯ ಈ ಕುರಿತು ಇಬ್ಬರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ; ಶ್ರೀನಿವಾಸಗೌಡ

ಕುಕ್ಕರ್, ಮಿಕ್ಸರ್ ಗ್ರೈಂಡರ್, ಸೀರೆಗಳನ್ನು ಹಂಚುವ ಕಾರ್ಯ ಎಲ್ಲ ಪಕ್ಷದ ಶಾಸಕರು, ನಾಯಕರು, ಉಚ್ಚಾಟಿತ ನಾಯಕರು ಶುರವಿಟ್ಟುಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಹೊರದೊಬ್ಬಲ್ಪಟ್ಟಿರುವ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ ಅವರು ಇತ್ತೀಚೆಗೆ ಶಿವರಾತ್ರಿಯಂದು ತಮ್ಮ ಕ್ಷೇತ್ರದಲ್ಲಿ ಕುಕ್ಕರ್​ ಹಂಚಲು ಹೋಗಿ ಮತದಾರರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ತಲೆ ಮೇಲೆ ಹ್ಯಾಟು ಧರಿಸಿ ವಿದೇಶಿ ಮಹಿಳೆಯಂತೆ ಕಾಣುವ ಕಾರ್ಯಕರ್ತೆಯೊಬ್ಬರು ಶಾಸಕರ ಪರವಾಗಿ ಸ್ಥಳೀಯ ಕಾರ್ಯಕರ್ತರೊಂದಿಗೆ ಕುಕ್ಕರ್ ಹಂಚುತ್ತಾ ಈ ಮನೆಗೆ ಬಂದಾಗ ಅದರಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು, ತಮ್ಮ ಕಷ್ಟದ ಸಮಯದಲ್ಲಿ ನೆರವಾಗದ ಶಾಸಕ ಚುನಾವಣೆ ಸಮಯದಲ್ಲಿ ಕುಕ್ಕರ್ ಕಳಿಸಿದರೆ ಅದನ್ನು ತಗೋಬೇಕಾ? ನಮಗೇನೂ ಬೇಕಿಲ್ಲ, ನಿಮ್ಮ ಅರಿಶಿಣ ಕುಂಕುಮ ಕೂಡ ಬೇಡ ಅಂತ ಗದರುತ್ತಾ ಅಲ್ಲಿಂದ ಸಾಗಹಾಕಿದ್ದಾರೆ.

ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಹೆಚ್‌.ಡಿ.ದೇವೇಗೌಡ ರೋಡ್‌ಶೋ ರದ್ದು: ಹೆಚ್​​ಡಿ ಕುಮಾರಸ್ವಾಮಿ

ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

ಬೆಳಗಾವಿ: ಸ್ಟಾರ್ಟ್ ಅಪ್​ಗಳನ್ನು ಆರಂಭಿಸುವ ಯೋಚನೆಯಿರುವ ಯುವಕರು ರಾಜ್ಯ ವಿಧಾನ ಸಭಾ ಚುನಾವಣೆ ಮುಗಿಯುವವರೆಗೆ ಆ ಯೋಜನೆಯನ್ನು ಕೈಬಿಟ್ಟು ಬೆಳಗಾವಿ ಜಿಲ್ಲೆಯಲ್ಲಿ ಸೀರೆ ಮತ್ತು ಮಿಕ್ಸರ್ ಗ್ರೈಂಡರ್​ಗಳ ಸಗಟು ವ್ಯಾಪಾರ ಮಾಡುವುದರಲ್ಲಿ ಹೆಚ್ಚು ಲಾಭವಿದೆ ಅಂತ ನಮಗನಿಸುತ್ತಿದೆ. ಚುನಾವಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:09 pm, Sat, 18 March 23

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು