Devadasi System: ಕೊಪ್ಪಳದಲ್ಲಿ ಅಮಾನವೀಯ ಘಟನೆ; ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

Devadasi System: ಕೊಪ್ಪಳದಲ್ಲಿ ಅಮಾನವೀಯ ಘಟನೆ; ಅನಾರೋಗ್ಯ ನಿವಾರಣೆಗೆ ಯುವತಿಗೆ ದೇವದಾಸಿ ಪಟ್ಟ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 28, 2022 | 11:13 AM

ಕೊಪ್ಪಳ: ಅನಾರೋಗ್ಯ ನಿವಾರಣೆಗೆಂದು ಯುವತಿಯೊಬ್ಬರಿಗೆ ಕುಟುಂಬದವರೇ ದೇವದಾಸಿ (Devadasi) ಪಟ್ಟ ಕಟ್ಟಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ (Koppal) ನಡೆದಿರುವುದು ಬೆಳಕಿಗೆ ಬಂದಿದೆ. ಯುವತಿಯನ್ನು ಇದೀಗ ರಕ್ಷಣೆ ಮಾಡಲಾಗಿದ್ದು, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಯುವತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಆರೈಕೆ ಮಾಡಲಾಗುತ್ತಿದೆ. ಘಟನೆ ಬಗ್ಗೆ ಗ್ರಾಮದ ದಲಿತ ಮುಖಂಡರು ದೂರು ನೀಡಿ ಗಮನ ಸೆಳೆದಿದ್ದರು.

ಪ್ರಕರಣದ ಹಿನ್ನೆಲೆ

ಕೊಪ್ಪಳ ತಾಲೂಕಿನ ಗ್ರಾಮವೊಂದರ 21 ವರ್ಷದ ಯುವತಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವು ದಿನಗಳಾದರೂ ಅನಾರೋಗ್ಯ ಕಡಿಮೆಯಾಗಿರಲಿಲ್ಲ. ಇದಕ್ಕೆ ದೇವರ ಶಾಪವೇ ಕಾರಣ. ದೇವದಾಸಿಯನ್ನಾಗಿ ಮಾಡಿದರೆ ಗುಣಮುಖಳಾಗುತ್ತಾಳೆ ಎಂಬ ಮೌಢ್ಯದಲ್ಲಿ ಕುಟುಂದವರು ಆಕೆಯನ್ನು ದೇವದಾಸಿಯನ್ನಾಗಿ ಮಾಡಿದ್ದಾರೆ. 7 ತಿಂಗಳ ಹಿಂದೆಯೇ ಜಿಲ್ಲೆಯ ಪ್ರಮುಖ ದೇವಸ್ಥಾನಕ್ಕೆ ಯುವತಿಯನ್ನು ಕರೆದ್ಯೊಯ್ದ ದೇವದಾಸಿ ಪದ್ಧತಿಯ ವಿಧಿವಿಧಾನ ಮಾಡಿಸಿರುವುದು ತಿಳಿದುಬಂದಿದೆ. ಯುವತಿಯ ನಡುವಳಿಕೆ, ವಿಚಿತ್ರ ವರ್ತನೆ ಕಂಡು ಗ್ರಾಮದ ದಲಿತ ಮುಖಂಡರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಾಜಿ ದೇವದಾಸಿಯರ ಮಾಸಾಶನ ಪಾವತಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಖಚಿತ ಮಾಹಿತಿ‌ ಮೇರೆಗೆ ಗ್ರಾಮಕ್ಕೆ ಭೇಟಿ‌ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಯುವತಿಯನ್ನು 7 ತಿಂಗಳ ಹಿಂದೆಯೇ ದೇವದಾಸಿಯನ್ನಾಗಿ ಮಾಡಿರುವ ವಿಷಯ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:39 am, Wed, 28 December 22

ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್