AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಸೋಲಾರ್ ಕಂಪನಿಗೆ ಜಮೀನು ನೀಡದ 8 ರೈತರ ವಿರುದ್ಧ ಎಫ್‌ಐಆರ್; ಯಾರು ನೆರವಿಗೆ ಬಂದಿಲ್ಲ ಎಂದು ಕಣ್ಣೀರು ಹಾಕಿದ ರೈತ ಕುಟುಂಬ

ಕೊಪ್ಪಳದ ಕುಕನೂರಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಸೋಲಾರ್ ಕಂಪನಿಯ ವಿದ್ಯುತ್ ಕಂಬ ಅಳವಡಿಕೆಗೆ ನಿರಾಕರಿಸಿದ ಕಾರಣ, ಎಂಟು ರೈತರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇದರಿಂದ ಆಕ್ರೋಶಗೊಂಡ ರೈತ ಕುಟುಂಬಗಳು ಕಣ್ಣೀರು ಹಾಕುತ್ತಾ ಪ್ರತಿಭಟಿಸಿವೆ. ಭೂಮಿ ನೀಡಲು ನಿರಾಕರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಇದು ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಖಾಸಗಿ ಸೋಲಾರ್ ಕಂಪನಿಗೆ ಜಮೀನು ನೀಡದ 8 ರೈತರ ವಿರುದ್ಧ ಎಫ್‌ಐಆರ್; ಯಾರು ನೆರವಿಗೆ ಬಂದಿಲ್ಲ ಎಂದು ಕಣ್ಣೀರು ಹಾಕಿದ ರೈತ ಕುಟುಂಬ
ಖಾಸಗಿ ಸೋಲಾರ್ ಕಂಪನಿಯ ಕಾಟಕ್ಕೆ ನೊಂದ ರೈತ ಕುಟುಂಬ
ಶಿವಕುಮಾರ್ ಪತ್ತಾರ್
| Edited By: |

Updated on: Nov 27, 2026 | 6:33 PM

Share

ಕೊಪ್ಪಳ, ನ.27: ಖಾಸಗಿ ಸೋಲಾರ್ ಕಂಪನಿಯ ಹೈಟೆನ್ಶನ್ ವಿದ್ಯುತ್ ಕಂಬ ಅಳವಡಿಕೆಗೆ ಜಮೀನು ನೀಡಲು ನಿರಾಕರಿಸಿದ ಕಾರಣಕ್ಕೆ ಎಂಟು ಮಂದಿ ರೈತರ ವಿರುದ್ಧ ಪೊಲೀಸ್ ದೂರು ದಾಖಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 27) ನಡೆದಿದೆ. ತಮ್ಮ ವಿರುದ್ಧವೇ ಕೇಸ್ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ರೈತ ಕುಟುಂಬಸ್ಥರು ಜಮೀನಿನಲ್ಲೇ ಗಳಗಳನೆ ಅತ್ತು ಕಣ್ಣೀರು ಹಾಕುತ್ತಾ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಮಂಗಳೂರ ಗ್ರಾಮದ ಚೂರಿ ಹಾಗೂ ಸೊಟ್ನಾರ್ ಎಂಬ ಎರಡು ರೈತ ಕುಟುಂಬಗಳಿಗೆ ಸೇರಿದ ಜಮೀನಿನಲ್ಲಿ ಖಾಸಗಿ ಸೋಲಾರ್ ಕಂಪನಿಯಾದ ‘ಟೊರೆಂಟೋ’ ಕಂಪನಿಯು 220 ಕೆವಿ ಸ್ಟೇಶನ್‌ನ ಮೂರು ಹೈಟೆನ್ಶನ್ ವಿದ್ಯುತ್ ಕಂಬಗಳನ್ನು ಅಳವಡಿಸಲು ಮುಂದಾಗಿತ್ತು. ಕಾಮಗಾರಿಗಾಗಿ ಕಂಪನಿ ಸಿಬ್ಬಂದಿ ಜಮೀನಿಗೆ ಜೆಸಿಬಿ ತಂದಿದ್ದರು.

ಯಾವುದೇ ಕಾರಣಕ್ಕೂ ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಹಾಕಲು ಬಿಡುವುದಿಲ್ಲ ಎಂದು ರೈತರು ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಕಂಪನಿ ಸಿಬ್ಬಂದಿ ಜಮೀನಿನಲ್ಲೇ ಜೆಸಿಬಿ ಬಿಟ್ಟು ತೆರಳಿದ್ದು, ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬೇವೂರ ಪೊಲೀಸ್ ಠಾಣೆಯಲ್ಲಿ ಎಂಟು ಮಂದಿ ರೈತರ ವಿರುದ್ಧ ದೂರು ದಾಖಲಿಸಿದ್ದಾರೆ. ಮುದಕಪ್ಪ ಚೂರಿ, ವೀರೇಶ್ ಚೂರಿ, ಶಿವು ಚೂರಿ, ಶಿವಪುತ್ರಪ್ಪ ಚೂರಿ, ಮಂಗಲೇಶಪ್ಪ ಸೊಟ್ನಾರ್, ನೀಲಪ್ಪ, ಮಂಜು ಹಾಗೂ ಬಸವರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜಲಮಂಡಳಿ ಅಧಿಕಾರಿಗಳ ಯಡವಟ್ಟು: ವಿಜಯನಗರದ ಹಂಪಿ ನಗರದಲ್ಲಿ ಕಾವೇರಿ ನೀರಿಗೆ ಸೇರಿತು ಕೊಳಚೆ ನೀರು

ಜಮೀನು ಕಳೆದುಕೊಳ್ಳುವ ಭೀತಿಯ ಜೊತೆಗೆ ಈಗ ಪೊಲೀಸ್ ಕೇಸ್ ಕೂಡ ದಾಖಲಾಗಿರುವುದರಿಂದ ಕಂಗಾಲಾದ ಮಂಗಳೂರ ಗ್ರಾಮದ ಚೂರಿ ಮತ್ತು ಸೊಟ್ನಾರ್ ಕುಟುಂಬ ಸದಸ್ಯರು ಕಣ್ಣೀರಿಡುತ್ತಾ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದ್ದಾರೆ. “ನಮ್ಮ ಕಷ್ಟ ಕೇಳಲು ಯಾವ ರಾಜಕಾರಣಿಯೂ ನಮ್ಮ ಸಹಾಯಕ್ಕೆ ಬಂದಿಲ್ಲ. ನಾವು ಯಾವುದೇ ಕಾರಣಕ್ಕೂ ಭೂಮಿ ಕೊಡುವುದಿಲ್ಲ. ಒಂದು ವೇಳೆ ಬಲವಂತವಾಗಿ ಜಮೀನಿನಲ್ಲಿ ಕಂಬ ಹಾಕಿದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ” ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಸದ್ಯ ಈ ಘಟನೆ ಕುಕನೂರ ತಾಲೂಕಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್