ಕೊಪ್ಪಳ: ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಕೇಸ್

ಕೊಪ್ಪಳದ ಗವಿ ಸಿದ್ದಪ್ಪ ನಾಯಕ ಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದೆ. ಗವಿ ಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿಯ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿಯ ಪ್ರತಿಭಟನೆ ನಂತರ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಕೊಪ್ಪಳ: ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಕೇಸ್
ಕೊಲೆಯಾದ ಗವಿಸಿದ್ದಪ್ಪ
Edited By: ವಿವೇಕ ಬಿರಾದಾರ

Updated on: Aug 17, 2025 | 9:58 PM

ಕೊಪ್ಪಳ, ಆಗಸ್ಟ್​ 17: ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾದ ಗವಿಸಿದ್ದಪ್ಪ (Gavisiddappa) ಸೇರಿದಂತೆ ನಾಲ್ವರ ವಿರುದ್ಧ ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ (Pocso) ದಾಖಲಾಗಿದೆ. ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಹತ್ಯೆಯಾದ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಗವಿಸಿದ್ದಪ್ಪ ನಾಯಕ್​ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಬಿಜೆಪಿ ಆಗ್ರಹಿಸಿದ ಮರುದಿನವೇ ಬಾಲಕಿಯ ತಾಯಿ ಪ್ರತ್ಯಕ್ಷವಾಗಿದ್ದು, ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಗವಿಸಿದ್ದಪ್ಪನ ಹತ್ಯೆಯಲ್ಲಿ ನನ್ನ ಮಗಳ ಪಾತ್ರ ಇಲ್ಲವೆಂದು ಧರಣಿ ಕೂತಿದ್ದರು. ಇದೀಗ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.

ಏನಿದು ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣ?

ಆಗಸ್ಟ್ ಮೂರರಂದು ರಾತ್ರಿ ಕೊಪ್ಪಳದ ವಾರ್ಡ್ ನಂಬರ್ ಮೂರರ ಮಸೀದಿ ಮುಂಭಾಗ ಗವಿಸಿದ್ದಪ್ಪ ನಾಯಕ ಎಂಬ 27 ವರ್ಷದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸಾದಿಕ್ ಎಂಬಾತ ಈ ಕೃತ್ಯ ಎಸಗಿ ಪೊಲೀಸರಿಗೆ ಶರಣಾಗಿದ್ದ. ನಂತರ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ
ಕೊಪ್ಪಳ ಗವಿಸಿದ್ದಪ್ಪ ಕೊಲೆಗೆ ಟ್ವಿಸ್ಟ್: ಆ ಹುಡುಗಿ ಕಥೆ ಬಿಚ್ಚಿಟ್ಟ SP
ತೀವ್ರ ಸ್ವರೂಪ ಪಡೆದ ಗವಿಸಿದ್ದಪ್ಪ ಕೊಲೆ: ಹಿಂದೂ ಸಂಘಟನೆಗಳ ಸಭೆ
ಯುವಕನ ಭೀಕರ ಕೊಲೆಗೆ ಬೆಚ್ಚಿಬಿದ್ದ ಜನ: ಮುಳುವಾಯ್ತು ಪ್ರೀತಿ!
ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ

ಮುಸ್ಲಿಂ ಬಾಲಕಿ ಜೊತೆಗಿನ ಪ್ರೇಮ ಪ್ರಕರಣವೇ ಕೊಲೆಗೆ ಕಾರಣ ಎಂದು ಆರಂಭದಲ್ಲಿ ಹೇಳಲಾಗಿತ್ತು. ನಂತರ ಎಸ್‌ಪಿ ಮತ್ತೊಂದು ಹೇಳಿಕೆ ನೀಡಿ, ಮಾಜಿ ಪ್ರೇಯಸಿಗೆ ಗವಿಸಿದ್ದಪ್ಪ ಟಾರ್ಚರ್ ಕೊಡುತ್ತಿದ್ದುದೇ ಕೊಲೆಗೆ ಕಾರಣ ಎಂದು ಎಸ್‌ಪಿ ಹೇಳಿದ್ದರು. ಎಸ್‌ಪಿ ಪದೇ ಪದೇ ಹೇಳಿಕೆ ಬದಲಾಯಿಸಿದ್ದು ಆಕ್ಷೇಪಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಕೊಪ್ಪಳ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣ: ಎನ್​ಐಎ ತನಿಖೆಗೆ ವಿಜಯೇಂದ್ರ ಆಗ್ರಹ

ಅಲ್ಲದೆ, ಕೊಲೆಯಾದ ಯುವಕ ವಾಲ್ಮೀಕಿ ಸಮುದಾಯಕ್ಕೆ ಸೇರಿದವನಾಗಿದ್ದುದರಿಂದ, ಸಮಾಜದವರು ಕೂಡ ಸಭೆ ನಡೆಸಿ ನ್ಯಾಯಕ್ಕಾಗಿ ಹೋರಾಟ ಮಾಡಲು ಮುಂದಾಗಿದ್ದರು. ಆನಂತರ ಬಿಜೆಪಿ ನಾಯಕ ಶ್ರೀರಾಮುಲು ಕೂಡ ಸಂತ್ರಸ್ತನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬಳಿಕ ಘಟನೆ ಕುರಿತು ರಾಜಕೀಯ ಚರ್ಚೆಗಳು ಜೋರಾಗಿದ್ದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us