AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal Gavisiddeshwara: ಅದ್ದೂರಿಯಾಗಿ ಜರುಗಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಅಜ್ಜನ ದರ್ಶನ ಪಡೆದು ಪಾವನರಾದ ಭಕ್ತಸಾಗರ

ದಕ್ಷಿಣ ಭಾರತದ ಕುಂಬಮೇಳವೆಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ಅಜ್ಜನ ಜಾತ್ರೆ ಅದ್ಧೂರಿಯಾಗಿ ಜರುಗಿತು.

Koppal Gavisiddeshwara: ಅದ್ದೂರಿಯಾಗಿ ಜರುಗಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಅಜ್ಜನ ದರ್ಶನ ಪಡೆದು ಪಾವನರಾದ ಭಕ್ತಸಾಗರ
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ
TV9 Web
| Updated By: ವಿವೇಕ ಬಿರಾದಾರ|

Updated on:Jan 08, 2023 | 7:31 PM

Share

ಕೊಪ್ಪಳ: ದಕ್ಷಿಣ ಭಾರತದ ಕುಂಬಮೇಳವೆಂದೇ ಪ್ರಸಿದ್ಧಿಯಾಗಿರುವ ಕೊಪ್ಪಳದ ಗವಿಸಿದ್ದೇಶ್ವರ(Koppal Gavisiddeshwara Jatre) ಅಜ್ಜನ ಜಾತ್ರೆ ಅದ್ಧೂರಿಯಾಗಿ ಜರುಗಿತು. ಲಕ್ಷಾಂತರ ಭಕ್ತರು ಗವಿಸಿದ್ದೇಶ್ವರನ ದರ್ಶನ ಪಡೆದು ಪಾವನರಾದರು. ಇಂದು (ಜ.8) ಸಂಜೆ ಸರಿಯಾಗಿ 5:30ಕ್ಕೆ ಅಜ್ಜನ ಮಹಾರಥೋತ್ಸವ ಜರುಗಿತು. ಗವಿಮಠದ ಕೈಲಾಸ ಮಂಟಪದಲ್ಲಿ ಜಾತ್ರೆಗೆ ಈಶಾ ಫೌಂಡಶೇನ್‍ನ ಸದ್ಗುರು ಜಗ್ಗಿ ವಾಸುದೇವ್ ಚಾಲನೆ‌ ನೀಡಿದರು. ಕರ್ನಾಕಟದಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿರುವ ಈ ಜಾತ್ರೆ ಕಳೆದ 2 ವರ್ಷ ಕರೋನಾ ಕಾರಣದಿಂದ ಬಹಳ ಸರಳವಾಗಿ ನಡೆದಿತ್ತು. ಈ ಬಾರಿ ಕರೋನಾ ಸೋಂಕು ಕಡಿಮೆಯಾದ ಹಿನ್ನೆಲೆ ವಿಜೃಂಭಣೆಯಿಂದ ನಡೆದಿದೆ. ಜಾತ್ರೆಯಲ್ಲಿ ಜಾತಿ, ಮತ, ಪಂಥ ಮತ್ತು ಧರ್ಮದ ಭೇದವಿಲ್ಲಿದೆ 5 ರಿಂದ 6 ಲಕ್ಷ ಜನರು ಸೇರಿದ್ದರು. ಗವಿಮಠದ 18 ನೇ ಪಿಠಾಧೀಪತಿ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು (Abhinav Gavisiddeshwara Swamiji) ತಮ್ಮ ಪ್ರವಚನ, ಸಾಮಾಜಿಕ ಕಳಕಳಿ ಕಾರ್ಯಗಳ ಮೂಲಕ ಜನರ ಹೃದಯ ಮಂದಿರದಲ್ಲಿ ನೆಲಸಿದ್ದಾರೆ.

ಜಾತ್ರೆಯ ವಿಶೇಷತೆ

ಕೊಪ್ಪಳ ಗವಿಮಠದ ಜಾತ್ರೆ ಸುಮಾರು 1 ತಿಂಗಳು ನಡೆಯುತ್ತದೆ. ಪ್ರತಿದಿನ ದಾಸೋಹವೂ ಇರುತ್ತದೆ. ವಿಶೇಷ ದಾಸೋಹಕ್ಕಾಗಿ ಸುತ್ತಲಿನ ಜನರು ದವಸ-ಧಾನ್ಯ ನೀಡುತ್ತಾರೆ. ರೊಟ್ಟಿ, ಸಿಹಿತಿಂಡಿಗಳನ್ನೂ ಮಠಕ್ಕೆ ಅರ್ಪಿಸುತ್ತಾರೆ. ಒಟ್ಟಾರೆ ಒಂದು ತಿಂಗಳ ಕಾಲ ಉತ್ಸವ-ದಾಸೋಹದ ಸಂಭ್ರಮ ನಿರಂತರವಾಗಿ ಇರುತ್ತದೆ. 2019ರಲ್ಲಿ ಸುಮಾರು 8 ಲಕ್ಷ ಮಂದಿ ದಾಸೋಹದಲ್ಲಿ ಪ್ರಸಾದ ಸ್ವೀಕರಿಸಿದ್ದರು.

ಇನ್ನು ಪ್ರತಿವರ್ಷವೂ ವಿಶೇಷ ಅತಿಥಿಗಳು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದರು. 2019ರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಮಾಲತಿ ಹೊಳ್ಳ ಚಾಲನೆ ನೀಡಿದ್ದರೇ, ಎರಡು ವರ್ಷಗಳ ಹಿಂದೆ ವಿದೇಶಿ ದಂಪತಿ ರಥೋತ್ಸವಕ್ಕೆ ಚಾಲನೆ ನೀಡಿ ಗಮನ ಸೆಳೆದಿದ್ದರು. ಈ ಜಾತ್ರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ವಿಪಕ್ಷನಾಯಕ ಸಿದ್ದರಾಮಯ್ಯನವರೂ ಪಾಲ್ಗೊಂಡಿದ್ದರು. ಹಾಗೇ ಅಮಿತ್​ ಶಾ, ರಾಹುಲ್​ ಗಾಂಧಿಯವರೂ ಹಿಂದೊಮ್ಮೆ ಮಠಕ್ಕೆ ಭೇಟಿ ನೀಡಿದ್ದರು. ಈ ಬಾರಿ ಜನವರಿ 4ರಿಂದ 10ರ ತನಕ 6 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯು ನಡೆಯಲಿದೆ.

ಇದನ್ನೂ ಓದಿ: ಕೊಪ್ಪಳ ಗವಿಮಠ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರಿಗೆ ಅನ್ನದಾಸೋಹ

ಸಾಮಾಜಿಕ ಕಳಕಳಿ ಹೊಂದಿರುವ ಜಾತ್ರೆ

ಪ್ರತಿವರ್ಷವೂ ಲಕ್ಷವೃಕ್ಷೋತ್ಸವ, ರಕ್ತದಾನ, ನೇತ್ರದಾನದಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷ ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ.

ಗವಿಮಠ ಸಂಸ್ಥಾನ ಹಾಗೂ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಶ್ರೀ ಗವಿಸಿದ್ದೇಶ್ಚರ ಜಾತ್ರಾ ಮಹೋತ್ಸವ ಅಂಗವಾಗಿ ಅಂಗಾಂಗ ದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಜನವರಿ 4ರಿಂದ ಆಯೋಜಿಸಲಾಗಿದೆ. ಜಾತ್ರೋತ್ಸವ ಮುಗಿಯುವವರೆಗೂ ಒಂದು ಸ್ಟಾಲ್ ಹಾಕಿ ಜಾಗೃತಿಗೆ ಮತ್ತು ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ.

ಗವಿಮಠದ ಇತಿಹಾಸದಲ್ಲಿ ಮೊದಲ ಬಾರಿಗೆ ಗಂಗಾರತಿ

ಗವಿಮಠದ ಇತಿಹಾಸದಲ್ಲಿ ಮೊದಲ ಬಾರಿಗೆ ಗಂಗಾರತಿ ಮಾಡಲಾಯಿತು. ಕೆರೆಯ ಮಧ್ಯಭಾಗದಲ್ಲಿರುವ ಈಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಶಿಸ್ತುಬದ್ಧವಾಗಿ ನಿಂತಿದ್ದ ಐದು ಜನ, ಭಕ್ತರತ್ತ ಮುಖ ಮಾಡಿ ಸಂಭ್ರಮದಿಂದ ಗಂಗೆಗೆ ಆರತಿ ಮಾಡಿದ್ದಾರೆ.

ಹಲವು ಮೊದಲುಗಳಿಗೆ ಸಾಕ್ಷಿಯಾದ ಜಾತ್ರೆ

ಈ ಬಾರಿ 5 ಲಕ್ಷ ಶೇಂಗಾ ಹೋಳಿಗೆ , 275 ಕ್ವಿಂಟಲ್ ಮಾದಲಿ (Madali), 22 ಲಕ್ಷ ಜೋಳದ ರೊಟ್ಟಿಯನ್ನು ತಯಾರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:25 pm, Sun, 8 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ