AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ?

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪುರ ಗ್ರಾಮ ಪಂಚಾಯಿತಿಯ ಡಿ ಗ್ರುಪ್ ನೌಕರ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಸಹೋದರಿ ಸೇರಿ ಐದಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಾಗಿದೆ.

ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ?
ಪ್ರಾತಿನಿಧಿಕ ಚಿತ್ರImage Credit source: google
ಶಿವಕುಮಾರ್ ಪತ್ತಾರ್
| Edited By: |

Updated on:Feb 16, 2026 | 10:39 PM

Share

ಕೊಪ್ಪಳ, ಫೆಬ್ರವರಿ 16: ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ನಡೆದಿದೆ. ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿರುವ ನೌಕರ. ಇಂದು ನಸುಕಿನ ಜಾವ ನೇಣುಬಿಗಿದುಕೊಂಡು ಗ್ರಾಮ ಪಂಚಾಯತ್​​ನಲ್ಲೇ ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ 

ರಮೇಶ್​ ವೈಯಕ್ತಿಕ ಕಾರಣದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಸ್ತಿ ವಿಚಾರಕ್ಕೆ ಕಳೆದ ಕೆಲದಿನಗಳಿಂದ ಸಹೋದರಿಯರು ಗಲಾಟೆ ಮಾಡುತ್ತಿದ್ದರಂತೆ. ಹೀಗಾಗಿ ಆಸ್ತಿ ವಿಚಾರವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಿನ್ನೆ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ಇಂದು ನಸುಕಿನ‌ ಜಾವ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ರಮೇಶ್ ಆತ್ಮಹತ್ಯೆ ಹಿನ್ನೆಲೆ ಅವರ ಸಹೋದರಿ ಸೇರಿ ಐದಕ್ಕೂ ಹೆಚ್ಚು ಜನರ ವಿರುದ್ಧ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಸ್ವಸ್ಥ ನಾಲ್ವರು ಗುತ್ತಿಗೆ ನೌಕರರಿಗೆ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಮತ್ತೊಂದು ಪ್ರಕರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ವರು ಗುತ್ತಿಗೆ ನೌಕರರಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಡಿಹೆಚ್​ಒ ಮಂಜುನಾಥ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಬೀದರ್ ಬ್ರಿಮ್ಸ್‌ ಆಸ್ಪತ್ರೆಗೇ ತಗುಲಿದೆ ದೊಡ್ಡ ರೋಗ! ಹೆಚ್ಚಿದ ಭ್ರಷ್ಟಾಚಾರ, 4 ತಿಂಗಳಿಂದ ಗುತ್ತಿಗೆ ನೌಕರರಿಗಿಲ್ಲ ವೇತನ

ಹಳೇ ನೌಕರರನ್ನೇ ಮುಂದುವರಿಸುವುದಾಗಿ ಡಿಹೆಚ್​ಒ ಭರವಸೆ ನೀಡಿದ್ದು, ಈ ವೇಳೆ ದಲಿತ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ಘಟನೆ ಹಿನ್ನೆಲೆ 

ಜಮಖಂಡಿಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸರ ಮಾಡುತ್ತಿದ್ದ ಗುತ್ತಿಗೆ ನೌಕರರ ಕೆಲಸ ತೆಗೆಯಲು ಮುಂದಾಗಿದ್ದ ವೇಳೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಭಾನುವಾರ ನಡೆದಿದೆ. ಘಟನೆ ವೇಳೆ ನಾಲ್ವರ ಬಾಯಿಯೊಳಗೆ ಪೆಟ್ರೋಲ್ ಹೋಗಿದ್ದರಿಂದ ಅಸ್ವಸ್ಥಗೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Mon, 16 February 26

Follow Us
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ