AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!

ಇದೊಂಥರಾ ಯಾವ ಸಿನಿಮಾ ಕಥೆಗೂ ಕಮ್ಮಿ ಇಲ್ಲ ಎನ್ನಬಹುದು! ಅವರಿಬ್ಬರಿಗೆ ಪರಿಚಯವಾಗಿದ್ದು ಬಸ್ ಪ್ರಯಾಣದ ವೇಳೆ. ನಂತರ ಅದು ಪ್ರೀತಿ-ಪ್ರೇಮಕ್ಕೆ ತಿರುಗಿತು. ಇಂತಿಪ್ಪ ಕೊಪ್ಪಳದ ಕೇಶವ್ ಮತ್ತು ತಸ್ಲೀಮಾ ಜೋಡಿ ಕುಟುಂಬದವರ ವಿರೋಧದ ನಡುವೆಯೇ ದೇವಸ್ಥಾನದಲ್ಲಿ ಮದುವೆಯಾಗಿದೆ. ಕುಟುಂಬದವರಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ, ಈ ನವಜೋಡಿ ಇದೀಗ ರಕ್ಷಣೆ ಕೋರಿ ಎಸ್ಪಿ ಕಚೇರಿ ಮೆಟ್ಟಿಲೇರಿದ್ದಾರೆ. ಎಲ್ಲೆಡೆ ಲವ್ ಜಿಹಾದ್ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಈ ವಿವಾಹ ನೆರವರಿರುವುದು ಈಗ ಭಾರಿ ಸದ್ದು ಮಾಡುತ್ತಿದೆ.

ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!
ಕೊಪ್ಪಳ: ಬಸ್‌ನಲ್ಲಿ ಅರಳಿದ ಪ್ರೇಮ, ದೇವಸ್ಥಾನದಲ್ಲಿ ಮದುವೆಯಾದ ಜೋಡಿಗೆ ಈಗ ಜೀವಭಯ!Image Credit source: tv9
ಶಿವಕುಮಾರ್ ಪತ್ತಾರ್
| Edited By: |

Updated on:Apr 11, 2026 | 11:38 AM

Share

ಕೊಪ್ಪಳ, ಏಪ್ರಿಲ್ 11: ‘ಪ್ರೀತಿ ಕುರುಡು’ ಎನ್ನುತ್ತಾರೆ. ಹಾಗೆಯೇ ‘ಪ್ರೀತಿಗೆ ಧರ್ಮದ ಹಂಗಿಲ್ಲ’ ಎಂಬುದನ್ನು ಕೊಪ್ಪಳದ (Koppal) ಜೋಡಿಯೊಂದು ಸಾಬೀತುಮಾಡಿದೆ. ಆದರೆ, ಅದುವೇ ಈಗ ಅವರ ಜೀವಭಯಕ್ಕೂ ಕಾರಣವಾಗಿದೆ. ಬಸ್​​ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿರುವ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿಯ ನವಜೋಡಿ ಈಗ ರಕ್ಷಣೆಗಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಮೆಟ್ಟಿಲೇರಿದ್ದಾರೆ.

ಬಸ್ ಪ್ರಯಾಣದಿಂದ ದೇವಸ್ಥಾನದಲ್ಲಿ ಮದುವೆ ವರೆಗೆ…

ಕನಕಗಿರಿ ತಾಲೂಕಿನ ಹುಲಿಹೈದರ್ ನಿವಾಸಿ ಕೇಶವ್ ಹಾಗೂ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದ ತಸ್ಲೀಮಾ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬಸ್‌ನಲ್ಲಿ ಓಡಾಡುವಾಗ ಇವರ ಪರಿಚಯವಾಗಿತ್ತು. ಇತ್ತ ತಸ್ಲೀಮಾ ಮನೆಯಲ್ಲಿ ಆಕೆಗೆ ಬೇರೆಯವರ ಜೊತೆ ಮದುವೆ ಮಾಡಲು ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ, ಈ ಜೋಡಿ ಕನಕಗಿರಿಯ ಲಕ್ಷ್ಮೀ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಮದುವೆಯ ನಂತರ ಮುಸ್ಲಿಂ ಯುವತಿ ತಸ್ಲೀಮಾ ಹಣೆಗೆ ಕುಂಕುಮ ಇಟ್ಟು, ಅರಿಶಿಣ ಕೊಂಬು ಕಟ್ಟಿಕೊಂಡು ಹಿಂದೂ ಧರ್ಮದ ಸಂಪ್ರದಾಯದಂತೆ ಕೇಶವ್ ಕೈ ಹಿಡಿದಿದ್ದಾರೆ.

ಕೇಶವ್-ತಸ್ಲೀಮಾ ಹೇಳಿದ್ದೇನು ನೋಡಿ

ರಕ್ಷಣೆಗಾಗಿ ಎಸ್ಪಿ ಮೊರೆ

ಮದುವೆಯಾದ ಬೆನ್ನಲ್ಲೇ ತಮಗೆ ಕುಟುಂಬದವರಿಂದ ತೊಂದರೆಯಾಗಬಹುದು ಎಂಬ ಭೀತಿಯಲ್ಲಿರುವ ಈ ಜೋಡಿ, ವಕೀಲರೊಂದಿಗೆ ಕೊಪ್ಪಳ ಎಸ್ಪಿ ಕಚೇರಿಗೆ ಬಂದು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ‘ನಮ್ಮ ಮನೆಯವರಿಂದ ಏನಾದರೂ ತೊಂದರೆಯಾಗಬಹುದು ಎಂಬ ಭಯವಿದೆ. ಯಾರೂ ನಮಗೆ ಏನೂ ಮಾಡಬಾರದು, ನಮ್ಮ ಪಾಡಿಗೆ ನಮ್ಮನ್ನು ಬದುಕಲು ಬಿಡಬೇಕು’ ಎಂದು ತಸ್ಲೀಮಾ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಲವ್ ಜಿಹಾದ್‌ನಂತಹ ಪ್ರಕರಣಗಳ ಕುರಿತು ಭಾರಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಈ ಅನ್ಯ ಕೋಮಿನ ವಿವಾಹ ನೆರವೇರಿದ್ದು, ಕೊಪ್ಪಳದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Sat, 11 April 26

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದನ್ನು ಜನ ಒಪ್ಪಿದ್ದಾರೆ: ಚೇತನ್ ಅಹಿಂಸ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
ಮಳೆ ಅಬ್ಬರಕ್ಕೆ ಮಂತ್ರಾಲಯದಲ್ಲಿ ಪರದಾಡಿದ ಭಕ್ತರು: ಮಠದಿಂದ ಶೀಘ್ರ ಸ್ಪಂದನೆ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
4,500 ಕೋಟಿ ವಂಚನೆ ಕೇಸ್​: ಹೂಡಿಕೆಗಿಂತ ಹೆಚ್ಚು ಲಾಭ ಪಡೆದವರಿಗೂ ಈಗ ನಡುಕ
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಸ್ತ್ರೀ ಜಾತಕದಲ್ಲಿ ಯಾವ ಗ್ರಹ ಬಲವಾಗಿದ್ರೆ ಅದೃಷ್ಟ ಗೊತ್ತಾ?
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್