ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ

ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುತ್ತದೆ.

ಮಿಶ್ರತಳಿ ಹಸು ಘಟಕ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ; ಇಲ್ಲಿದೆ ವಿವರ
ಕೊಪ್ಪಳ
Follow us
| Edited By: Kiran Hanumant Madar

Updated on: Nov 18, 2023 | 4:01 PM

ಕೊಪ್ಪಳ, ನ.18: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊಪ್ಪಳ ಜಿಲ್ಲೆಯ ಹಾಲು‌ ಉತ್ಫಾದಕರಿಗೆ ಸಿಹಿ ಸುದ್ದಿ ನೀಡಿದೆ. ಕೊಪ್ಪಳ ಜಿಲ್ಲೆಯಲ್ಲಿ 2023-24 ನೇ ಸಾಲಿನ ಹಾಲು ಉತ್ಪಾದಕರಿ(Milk Producers)ಗೆ ಉತ್ತೇಜನ ನೀಡುವ ಉದ್ದೇಶದಿಂದ ‘ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಲ್ಲಿ ಏನೇನಿದೆ?

ಒಂದು ಮಿಶ್ರತಳಿ ಹಸು ಘಟಕದಲ್ಲಿ ಒಂದು ಮಿಶ್ರ ತಳಿ ಹಸು ವಿತರಿಸಲಾಗುವುದು. ಈ ಘಟಕದ ವೆಚ್ಚ 65 ಸಾವಿರ ರೂಪಾಯಿ ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90) ಅಂದರೆ,  58,500 ರೂ. ಸಹಾಯಧನ ಮತ್ತು (ಶೇ.10) 6500 ರೂ. ಫಲಾನುಭವಿಗಳ ವಂತಿಕೆ ಅಥವಾ ಬ್ಯಾಂಕ್​ನಿಂದ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.

ಇದನ್ನೂ ಓದಿ:ಹಾಸನ: ಹಾಲು ಉತ್ಪಾದಕರ ಸಂಘದಲ್ಲಿ ಹಣ ದುರ್ಬಳಕೆ ಆರೋಪ; ಸಾವಿರಾರು ಲೀಟರ್ ಹಾಲು ಚೆಲ್ಲಿ ರೈತರ ಆಕ್ರೋಶ

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಇದಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರರು FRUITS ID (ಗುರುತಿನ ಸಂಖ್ಯೆ) ಹೊಂದಿರಬೇಕು. ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಮತ್ತು ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳು ಕಡ್ಡಾಯವಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು ಅಥವಾ ಸದಸ್ಯತ್ವ ಕಡ್ಡಾಯವಾಗಿ ಪಡೆಯಬೇಕು. ಆಯ್ಕೆಗೊಂಡ ಫಲಾನುಭವಿ, ಸ್ವತ್ತು ಪಡೆದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಹಾಲು ಪೂರೈಸುವ ಷರತ್ತಿಗೆ ಒಳಪಟ್ಟು ಮುಚ್ಚಳಿಕೆಯನ್ನು ವ್ಯವಸ್ಥಾಪಕರು/ಪ್ರತಿನಿಧಿಯವರಿಂದ ಧೃಢೀಕರಿಸಿ ಸಲ್ಲಿಸಬೇಕು.

ಇನ್ನು ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ:DBT: 339 ಕೋಟಿ ಬಾಕಿ ಪ್ರೋತ್ಸಾಹಧನ ಶೀಘ್ರವೇ ನೇರವಾಗಿ ಹಾಲು ಉತ್ಪಾದಕರ ಬ್ಯಾಂಕ್ ಖಾತೆಗೆ ಪಾವತಿ -ರಾಜ್ಯ ಸರ್ಕಾರ ಸ್ಪಷ್ಟನೆ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) / ಮುಖ್ಯ ಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಕೊಪ್ಪಳ / ಗಂಗಾವತಿ / ಯಲಬುರ್ಗಾ / ಕುಷ್ಟಗಿ / ಕನಕಗಿರಿ / ಕಾರಟಗಿ ಮತ್ತು ಕುಕನೂರು ಕಛೇರಿಗಳಿಗೆ ಸಂಪರ್ಕಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲೆಯ ರೈತರಲ್ಲಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಪಿ.ಎಂ.ಮಲ್ಲಯ್ಯ ಅವರು ಪ್ರಕಟಣೆ ಮೂಲಕ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್