ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ: ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 27, 2024 | 8:14 PM

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಂಪರ್ಕ ಮಾಡುವ ಪ್ರಯತ್ನ ನಡೆದಿದೆ. ಕೊಪ್ಪಳದಿಂದ ರೆಡ್ಡಿ ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಕುರಿತಾಗಿ ಮಾತನಾಡಿರುವ ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ, ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ: ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ
ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ
Follow us on

ಕೊಪ್ಪಳ, ಜನವರಿ 27: ಬಿಜೆಪಿ ಜತೆ ಕೆಆರ್​ಪಿಪಿ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧರಿದ್ದೇವೆ ಎಂದು ಕೆಆರ್​ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ (G. Janardhana Reddy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಮತ್ತೆ ಪ್ರಧಾನಿಯಾಗಬೇಕು. ಮೋದಿ ಪ್ರಧಾನಿಯಾಗಲು ಹೊಂದಾಣಿಕೆಗೆ ಕೆಆರ್​ಪಿಪಿ ಸಿದ್ಧ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ. ಬಿಜೆಪಿ ನಾಯಕರು ನನ್ನ ಜೊತೆ ಚರ್ಚೆ ಮಾಡುತ್ತಿದ್ದಾರೆ. ಕೆಆರ್​ಪಿಪಿಯಿಂದ 4-5 ಕಡೆ ಅಭ್ಯರ್ಥಿ ಹಾಕಬೇಕು ಅಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಂಪರ್ಕ ಮಾಡುವ ಪ್ರಯತ್ನ ನಡೆದಿದೆ. ಕೊಪ್ಪಳದಿಂದ ರೆಡ್ಡಿ ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ಸಂಪರ್ಕಿಸಿರುವ ಬಿಜೆಪಿ: ಮತ್ತೆ ಬಿಜೆಪಿಗೆ ಸೇರುತ್ತಾರಾ ಕೆಆರ್​ಪಿಪಿ ಸ್ಥಾಪಕ?

ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿ ಶಾಸಕರೂ ಆಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಲೋಕಸಭಾ ಚುನಾವಣಾ ದೃಷ್ಟಿ ಇಟ್ಟುಕೊಂಡು ಬಿಜೆಪಿ ಸೆಳೆಯುವ ಪ್ರಯತ್ನ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದ ಮೂರ್ನಾಲ್ಕು ಲೋಕಸಭಾ ಕ್ಷೇತ್ರಕ್ಕೆ ಲಾಭವಾಗುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿದೆ. ಆದರೆ ಜನಾರ್ದನ ರೆಡ್ಡಿ ಬಿಜೆಪಿಯ ನೇರಾ ನೇರ ಬೇಡಿಕೆಗೆ ಇನ್ನೂ ಪೂರ್ಣ ಒಪ್ಪಿಗೆ ಸೂಚಿಸಿಲ್ಲ.

ಕೆಆರ್ ಪಿಪಿ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡುವ ಬೇಡಿಕೆಯನ್ನು ಬಿಜೆಪಿ ನಾಯಕರು ಜನಾರ್ದನ ರೆಡ್ಡಿ ಮುಂದೆ ನೇರವಾಗಿ ಇಟ್ಟಿದ್ದಾರೆ. ವಿಲೀನ ಮಾಡುವ ಬದಲು ಸದ್ಯಕ್ಕೆ ಸಕಾರಾತ್ಮಕವಾಗಿ ಜನಾರ್ದನ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಹಕಾರದ ಮಾತುಗಳನ್ನಾಡಿರುವ ರೆಡ್ಡಿ ಕೊಪ್ಪಳ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷದಿಂದ ದೂರವಾಗಿರುವ ಗಾಲಿ ಜನಾರ್ಧನ ರೆಡ್ಡಿಯ ಮೇಲೂ ಬಿಜೆಪಿ ನಾಯಕರ ಕಣ್ಣಿದೆಯೇ?

ಕೆಆರ್​ಪಿಪಿ ಪಕ್ಷವನ್ನು ಬಿಜೆಪಿಯ ಜೊತೆ ವಿಲೀನ ಮಾಡಿಕೊಂಡು ಕೊಪ್ಪಳ ಕ್ಷೇತ್ರದಿಂದ ರೆಡ್ಡಿ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಚಿಂತಿಸಿದೆ. ವಿಧಾನಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಪರವಾದ ಅಭಿಪ್ರಾಯ ಹೊಂದಿದ್ದ ಜನಾರ್ದನ ರೆಡ್ಡಿ, ಇತ್ತೀಚೆಗೆ ಅದೇ ಅಭಿಪ್ರಾಯವನ್ನು ಉಳಿಸಿಕೊಂಡಿಲ್ಲ. ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ಅಭಿಪ್ರಾಯವನ್ನೂ ಜನಾರ್ದನ ರೆಡ್ಡಿ ವ್ಯಕ್ತಪಡಿಸಿದ್ದರು. ಅದನ್ನು ಬಹಿರಂಗವಾಗಿಯೂ ಹೇಳಿಕೊಂಡಿದ್ದರು.

ಲೋಕಸಭಾ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲಿ ಕೆಆರ್ ಪಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಉದ್ದೇಶಿಸಿದ್ದರು. ಅನಂತರದ ಬೆಳವಣಿಗೆಯಲ್ಲಿ ಮತ್ತೆ ಪಕ್ಷಕ್ಕೆ ಸೆಳೆಯುವ ಸಂಬಂಧ ಪ್ರಯತ್ನ ನಡೆದಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರ ಇನ್ನೂ ಜನಾರ್ದನ ರೆಡ್ಡಿ ಜೊತೆ ಚರ್ಚೆ ನಡೆಸಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.