AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

ಕೊಪ್ಪಳದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಡಿಯೋ ವೈರಲ್ ಆಗಿದೆ. ಯುವತಿಯನ್ನು ಬಲವಂತವಾಗಿ ಪ್ರೀತಿಸಲು ಮತ್ತು ಮದುವೆಯಾಗಲು ಪೀಡಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ತನ್ನ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡುವ ಸಂಚು ಮುಸ್ತಫಾನ ಅಸಲಿ ಮುಖವಾಡವನ್ನು ಬಯಲು ಮಾಡಿದೆ. ಸಾವಿರಾರು ಸಾಕ್ಷ್ಯಗಳಿದ್ದರೂ ಪೊಲೀಸರ ನಿಷ್ಕ್ರಿಯತೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನನ್ನನ್ನ ಯಾಕೆ ಮದುವೆಯಾಗಲ್ಲ?: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್
ವಿಡಿಯೋ
ಶಿವಕುಮಾರ್ ಪತ್ತಾರ್
| Edited By: |

Updated on: Apr 14, 2026 | 9:54 AM

Share

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ, ಮದುವೆಯಾಗಲ್ಲ ಅಂತೀಯಾ?” ಎಂದು ಪ್ರಶ್ನಿಸುತ್ತಾ ರಂಪಾಟ ಮಾಡಿದ್ದಾನೆ. ಅಷ್ಟೇ ಅಲ್ಲದೆ, “ನೀನು ಮತ್ತೊಬ್ಬ ಹುಡುಗನ ಜೊತೆ ಯಾಕೆ ಮಾತಾಡ್ತೀಯಾ?” ಎಂದು ಯುವತಿಯ ವೈಯಕ್ತಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದಾನೆ.ಮುಸ್ತಫಾನ ಕಿರುಕುಳಕ್ಕೆ ಬಗ್ಗದ ಯುವತಿ, “ನಿನ್ನ ಬಗ್ಗೆ ನನಗೆ ಈಗ ಪೂರ್ತಿ ಅರ್ಥವಾಗಿದೆ, ಹಾಗಾಗಿ ನಿನ್ನನ್ನು ಲವ್ ಮಾಡಲು ಸಾಧ್ಯವಿಲ್ಲ” ಎಂದು ನೇರವಾಗಿ ಹೇಳಿದ್ದಾಳೆ. ಅಲ್ಲದೆ, “ನನ್ನನ್ನು ಪ್ರಶ್ನಿಸಲು ನಿನಗೆ ಯಾವುದೇ ಹಕ್ಕಿಲ್ಲ (Rights)” ಎಂದು ಮುಸ್ತಫಾನಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾಳೆ.

ಇದನ್ನೂ ಓದಿ: ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಇಲ್ಲಿದೆ ನೋಡಿ ವಿಡಿಯೋ:

ಜಗಳವಾಡುವ ಸಂದರ್ಭದಲ್ಲೇ ಮುಸ್ತಫಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾನೆ. “ಈ ವಿಡಿಯೋ ಮುಂದೆ ಬೇಕಾಗುತ್ತೆ, ಮಾತಾಡು” ಎಂದು ಹೇಳಿರುವುದು ಆತ ಯುವತಿಯನ್ನು ಬ್ಲಾಕ್‌ಮೇಲ್ ಮಾಡಲು ಮೊದಲೇ ಸಂಚು ರೂಪಿಸಿದ್ದನೇ ಎಂಬ ಅನುಮಾನವನ್ನು ಬಲಪಡಿಸಿದೆ. ಈಗಾಗಲೇ ಸಾವಿರಾರು ವಿಡಿಯೋಗಳು ಈತನ ಮೊಬೈಲ್‌ನಲ್ಲಿ ಪತ್ತೆಯಾಗಿದ್ದು, ಪೊಲೀಸರು ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ