ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಕೊಪ್ಪಳ ಲವ್ ಜಿಹಾದ್ ಆರೋಪಿ ಮುಸ್ತಫಾ ಖಾದ್ರಿ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ. ಗಾಂಜಾ ಸೇವನೆಯ ವಿಡಿಯೋಗಳು ವೈರಲ್ ಆಗಿದ್ದರೂ ನೋಟಿಸ್‌ಗೆ ಸೀಮಿತ. ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್ ಕಾಂಗ್ರೆಸ್ ಸರ್ಕಾರದ ಕೈವಾಡ ಆರೋಪಿಸಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆ ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ
ಲವ್ ಜಿಹಾದ್ ಪ್ರಕರಣ
Edited By:

Updated on: Apr 14, 2026 | 9:14 AM

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಮುಸ್ತಫಾ ಖಾದ್ರಿ ಎಂಬಾತನ ಲವ್ ಜಿಹಾದ್ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದಿದೆ. ಆರೋಪಿಯ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳು ಮತ್ತು ಅಕ್ರಮ ಚಟುವಟಿಕೆಗಳ ಸಾಕ್ಷ್ಯಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ.

ಬಂಧಿತನಾಗದ ಆರೋಪಿ ಮುಸ್ತಫಾ ಖಾದ್ರಿಯ ಮೊಬೈಲ್‌ನಲ್ಲಿ ಸುಮಾರು 9,000ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಮತ್ತು 7,000ಕ್ಕೂ ಅಧಿಕ ಫೋಟೋಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಇದಲ್ಲದೆ, ಈತ ರಾಜಾರೋಷವಾಗಿ ಹುಕ್ಕಾ ಮತ್ತು ಗಾಂಜಾ ಸೇವಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಪೊಲೀಸರು ಕೇವಲ ನೋಟಿಸ್ ನೀಡಿ ವಿಚಾರಣೆ ನಡೆಸುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಮುಖಂಡ ಬಸವರಾಜ್ ಕ್ಯಾವಟರ್, “ಈ ಲವ್ ಜಿಹಾದ್ ಪ್ರಕರಣದ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡವಿದೆ. ಜಿಲ್ಲೆಯ ಪ್ರಭಾವಿ ಶಾಸಕರು ಮತ್ತು ಸಂಸದರ ಒತ್ತಡಕ್ಕೆ ಮಣಿದು ಪೊಲೀಸರು ಆರೋಪಿಯನ್ನು ಬಂಧಿಸುತ್ತಿಲ್ಲ” ಎಂದು ದೂರಿದ್ದಾರೆ. ಇಷ್ಟೊಂದು ಸಾಕ್ಷ್ಯಗಳಿದ್ದರೂ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನ, 6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ

ದೂರು ದಾಖಲಾಗಿ ಎರಡು ದಿನಗಳಾದರೂ ಬಂಧನವಾಗದಿರುವುದು ಪ್ರಕರಣಕ್ಕೆ ಮತ್ತಷ್ಟು ಗಹನತೆ ತಂದಿದೆ. ಪೊಲೀಸರು ಈ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆಯೇ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿದಿದ್ದಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us