AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಕೊಪ್ಪಳದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ನವವಿವಾಹಿತೆ ಪತಿಯನ್ನು ಬಿಟ್ಟು ನಾಪತ್ತೆಯಾಗಿದ್ದಾರೆ. ಈ ವಿಷಯ ತಿಳಿದ ಯುವತಿಯ ಮಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆಯಾಗಿ ಕೇವಲ ಒಂದು ತಿಂಗಳೊಳಗೆ ನಡೆದ ಈ ದುರಂತ ಕುಟುಂಬದಲ್ಲಿ ತೀವ್ರ ಆಘಾತ ಮೂಡಿಸಿದೆ. ಪತ್ನಿಗಾಗಿ ಪತಿ ಹುಡುಕಾಟ ನಡೆಸುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ಕೂಡ ದಾಖಲಾಗಿದೆ.

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
ಮೃತ ಖಂಡೆಪ್ಪ ಮತ್ತು ನಾಪತ್ತೆಯಾದ ಯುವತಿImage Credit source: Tv9 Kannada
ಶಿವಕುಮಾರ್ ಪತ್ತಾರ್
| Edited By: |

Updated on: Mar 26, 2026 | 11:17 AM

Share

ಕೊಪ್ಪಳ, ಮಾರ್ಚ್​​ 26: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ ಎಂಬಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಮದುವೆಯಾಗಿ ಕೆಲ ದಿನಗಳ ಒಳಗೆಯೇ ನಾನಾ ಕಾರಣಕ್ಕೆ ದಾಂಪತ್ಯ ಸಂಬಂಧ ಹಳಸಿ ಅದೆಷ್ಟೋ ಕುಟುಂಬಗಳು ಸರ್ವನಾಶ ಆದ ಉದಾಹರಣೆಯನ್ನೂ ಕೇಳಿದ್ದೇವೆ. ಇಂತಹುದ್ದೇ ಮನಕಲಕುವ ಘಟನೆಯೊಂದೀಗ ಕರ್ನಾಟಕದ ಕೊಪ್ಪಳದಲ್ಲಿ ನಡೆದಿದೆ.

ಮೂಲತಃ ಕೊಪ್ಪಳದ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರ ವಿವಾಹ ರಾಯಚೂರ ಜಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆಯ ಜೊತೆ ಫೆಬ್ರವರಿ 8ರಂದು ನಡೆದಿತ್ತು. ಎರಡೂ ಕುಟುಂಬಳ ಪರಸ್ಪರ ಒಪ್ಪಿಗೆಯ ಮೇಲೆಯೇ ಕೊಪ್ಪಳದ ಪಾರ್ಥಾ ಕಲ್ಯಾಣ ಮಂಟಪದಲ್ಲಿ ಮದುವೆಕಾರ್ಯ ನೆರವೇರಿತ್ತು. ಆ ಬಳಿಕ ದಂಪತಿ ನಾಗರಾಜ್​​ ಅವರ ಮನೆಯ ಮೇಲಿನ ಮಹಡಿಯಲ್ಲಿ ವಾಸವಿದ್ದರು. ಈ ನಡುವೆ ಮಾರ್ಚ್​​ 21ರ ರಾತ್ರಿ ರಾತ್ರಿ 8.30ರ ಸುಮಾರಿಗೆ ಸಂಜನಾ ತನಗೆ ಆರೋಗ್ಯ ಸರಿ ಇಲ್ಲದ ಕಾರಣ ಔಷಧ ತರುವಂತೆ ಪತಿ ನಾಗರಾಜ್​​ಗೆ ತಿಳಿಸಿದ್ದಾಳೆ. ಹೀಗಾಗಿ ಮಾತ್ರೆ ತರಲೆಂದು ತೆರಳಿದ್ದ ನಾಗರಾಜ್​​ 15 ನಿಮಿಷಗಳ ಬಳಿಕ ಮನೆಗೆ ಹಿಂದಿರುಗಿದ್ದಾರೆ. ಆದರೆ ಆ ವೇಳೆ ಹೆಂಡತಿ ಸಂಜನಾ ಮನೆಯಲ್ಲಿ ಇಲ್ಲದಿರೋದು ಗಮನಕ್ಕೆ ಬಂದಿದೆ. ಹೀಗಾಗಿ ಕೆಳ ಮಹಡಿಯಲ್ಲಿರುವ ಸಹೋದರನ ಮನೆಗೆ ತೆರಳಿ ನಾಗರಾಜ್​​ ಪತ್ನಿ ಬಗ್ಗೆ ವಿಚಾರಿಸಿದ್ದಾರೆ. ಆದರೆ ಆಕೆ ಇಲ್ಲಿಗೆ ಬಂದಿಲ್ಲ ಎಂಬ ಉತ್ತರ ದೊರೆತಿದೆ. ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗಲೂ ಆಕೆಯ ಬಗ್ಗೆ ಮಾಹಿತಿ ಸಿಗದ ಕಾರಣ ಪತಿ ನಾಗರಾಜ್​​ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್; ಸಚಿವರಿಂದ ಮಹತ್ವದ ಭರವಸೆ

ಈ ನಡುವೆ ಮನಕಲಕುವ ಘಟನೆಯೊಂದು ನಡೆದಿದೆ. ಸೊಸೆ ನಾಪತ್ತೆಯಾಗಿರುವ ವಿಚಾರ ತಿಳಿದ ನಾಗರಾಜ್​​ ತಂದೆ ಖಂಡೆಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಜನಾ ವಿಚಾರವಾಗಿ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎನ್ನಲಾಗಿದೆ. ಇನ್ನು ನಾಪತ್ತೆಯಾಗಿರುವ ನವ ವಿವಾಹಿತೆ ತವರು ಮನೆಗೂ ತೆರಳಿಲ್ಲ ಎನ್ನಲಾಗಿದ್ದು, ಆಕೆಯ ಸಹೋದರ ಕೂಡ ಹುಡುಕಾಟ ನಡೆಸುತ್ತಿದ್ದಾರೆ. ಸಂಜನಾ ಕೈಯಲ್ಲಿ ರವಿ ಎಂಬ ಟ್ಯಾಟೂ ಇರೋದಾಗಿ ದೂರಿನಲ್ಲಿ‌ ಉಲ್ಲೇಖಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ