AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು

ಕಿಡ್ನಿ ಸಮಸ್ಯೆಯ ಜೊತೆಗೆ ಕರುಳು ಹೊರಬಂದ ರೀತಿಯಲ್ಲಿ ಜನಿಸಿದ್ದ ಮಗು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಮೃತಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಕೊಪ್ಪಳದಿಂದ ಹುಬ್ಬಳ್ಳಿಗೆ ಶಿಶುವನ್ನು ಝೀರೋ ಟ್ರಾಫಿಕ್​​ನಲ್ಲಿ ಕರೆತರಲಾಗಿತ್ತು. ವೈದ್ಯರ ಸರ್ವ ಪ್ರಯತ್ನದ ಹೊರತಾಗಿಯೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ. ಗಂಡು ಮಗು ಜನಿಸಿದರೂ ಅದನ್ನು ಉಳಿಸಿಕೊಳ್ಳಲಾಗದ ಕಾರಣ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ: ಚಿಕಿತ್ಸೆ ಫಲಿಸದೆ ಕಂದಮ್ಮ ಕೊನೆಯುಸಿರು
ಮಗು ಸಾವು
ಶಿವಕುಮಾರ್ ಪತ್ತಾರ್
| Edited By: |

Updated on:Dec 30, 2025 | 3:38 PM

Share

ಕೊಪ್ಪಳ, ಡಿಸೆಂಬರ್​​ 30: ಹೆರಿಗೆ ವೇಳೆ ನವಜಾತ ಶಿಶುವಿನ ಕರುಳು ಹೊರಗೆ ಬಂದಿದ್ದ ಕೇಸ್​​ ಸಂಬಂಧ ವೈದ್ಯರ ಪ್ರಯತ್ನ ಕೊನೆಗೂ ಫಲಪ್ರದವಾಗಿಲ್ಲ. ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್​ನಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿಶುವನ್ನು ಕೊಪ್ಪಳದಿಂದ ಹುಬ್ಬಳ್ಳಿಗೆ ಕರೆತರಲಾಗಿತ್ತು, ಆದರೆ ನಿನ್ನೆ ರಾತ್ರಿ ಮಗು ಪ್ರಾಣ ಬಿಟ್ಟಿದೆ.

ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ, ವಿಜಯಲಕ್ಷ್ಮೀ ದಂಪತಿಗೆ ಶನಿವಾರ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಆದರೆ ದುರ್ದೈವ ಎಂಬಂತೆ ಹುಟ್ಟುವ ವೇಳೆಯೇ ಮಗುವಿನ ಕರುಳೆಲ್ಲ ಹೊರಗಡೆ ಬಂದಿದ್ದ ಕಾರಣ ತುರ್ತಾಗಿ ಆಪರೇಷನ್​​ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಕೊಪ್ಪಳದಿಂದ ತಾಯಿ ಮತ್ತು ಮಗುವನ್ನು 5 ಆಂಬ್ಯುಲೆನ್ಸ್​ಗಳ ಮೂಲಕ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​​ನಲ್ಲಿ ರವಾನಿಸಲಾಗಿತ್ತು.

ಇದನ್ನೂ ಓದಿ: ಪ್ರತ್ಯೇಕ ರಸ್ತೆ ಅಪಘಾತ; ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದಾರುಣವಾಗಿ ಸಾವು

ನವಜಾತ ಶಿಶುವಿಗೆ ಕಿಡ್ನಿ ಸಮಸ್ಯೆ ಕೂಡ ಇರುವ ಬಗ್ಗೆ ವೈದ್ಯರು ತಿಳಿಸಿದ ಕಾರಣ ಹತ್ತು ಗಂಟೆ ಹಿಂದೆ ಜನಿಸಿದ ಮಗುವನ್ನ ಆಂಬ್ಯುಲೆನ್ಸ್ ಚಾಲಕ ಪ್ರಕಾಶ್ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದರು. ನವಜಾತ ಶಿಶು ಪ್ರಾಣ ಉಳಿಸಲು ಪೊಲೀಸರು ಕೂಡ ಸಾಥ್ ನೀಡಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಶಿಶುವನ್ನು ಉಳಿಸಲು ಕಿಮ್ಸ್​​ ವೈದ್ಯರು ಸಾಕಷ್ಟು ಪ್ರಯತ್ನ ನಡೆಸಿದ ಹೊರತಾಗಿಯೂ ಮಗು ಅಸುನೀಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:37 pm, Tue, 30 December 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ