ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ

Koppal News: ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಸಂದೇಶ ಸಾರುವ ಭಾವಚಿತ್ರಕ್ಕೆ ಕುಷ್ಟಗಿ ತಾಲೂಕಿನ ತಾವರಗೇರಾದ ಮನೆ ಆಯ್ಕೆ
ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಆಯ್ಕೆಯಾದ ಮನೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 14, 2023 | 8:26 PM

ಕೊಪ್ಪಳ, ಆಗಸ್ಟ್​ 14: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಭಾಗವಾಗಿ ಹರ್​ ಘರ್​ ತಿರಂಗಾ (Har Ghar Tiranga) ಅಭಿಯಾನ ನಡೆಸಲಾಗುತ್ತಿದೆ. ಹಾಗಾಗಿ ಆಗಸ್ಟ್​ 13 ರಿಂದ 15ರ ವರೆಗೆ ರಾಜ್ಯಾದ್ಯಂತ ರಾಷ್ಟ್ರಧ್ವಜಗಳನ್ನು ಹಾರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದ ಸಂದೇಶ ಸಾರುವ ಭಾವಚಿತ್ರಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದ ಪಟ್ಟಣದ ಮನೆ ಆಯ್ಕೆಯಾಗಿದೆ. ಈ ಕುರಿತು ಜಿಲ್ಲಾ ನಗರಾಭಿವೃಧ್ಧಿ ಕೋಶ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ 2016-17ನೇ ಸಾಲಿನ ಫಲಾನುಭವಿಯಾಗಿ ಮನೆ ನಿರ್ಮಿಸಿಕೊಂಡಿರುವ ಶಕುಂತಲಾ ಗಂಡ ಮಲ್ಲಪ್ಪ ನಾಲತ್ತವಾಡ ಅವರು ತಮ್ಮ ಮನೆಯ ಮೇಲೆ ಧ್ವಜಾರೋಹಣ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ತ್ರಿವರ್ಣ ಧ್ವಜ ಹಾರಿಸಿದ್ದರು. ಈ ಚಿತ್ರವು ಭಾರತ ಸರ್ಕಾರದ ಹರ್ ಘರ್ ತಿರಂಗಾ ಹಾಗೂ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ  ಆಯ್ಕೆಯಾಗಿದೆ. ಆ ಮೂಲಕ ಕೊಪ್ಪಳ ಜಿಲ್ಲೆಯ ಕೀರ್ತಿಯು ರಾಷ್ಟ್ರಾದ್ಯಂತ ಹಬ್ಬಿದಂತಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜಾನಾಧಿಕಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. 

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್