ಕೊಪ್ಪಳ: ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು

Koppal News: ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ಅರ್ಚಕ ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಟಗಿ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಕೊಪ್ಪಳ: ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು
ದಲಿತ ವ್ಯಕ್ತಿ ದೇಗುಲ ಪ್ರವೇಶ ಮಾಡಿದ್ದಕ್ಕೆ ದಂಡ; ಎಂಟು ಜನರ ವಿರುದ್ಧ ಪ್ರಕರಣ ದಾಖಲು
Follow us
TV9 Web
| Updated By: ganapathi bhat

Updated on: Sep 25, 2021 | 4:11 PM

ಕೊಪ್ಪಳ: ನಾಗನಕಲ್ ಗ್ರಾಮದಲ್ಲಿ ದಲಿತ ವ್ಯಕ್ತಿ ದೇವಸ್ಥಾನ‌ ಪ್ರವೇಶ ಮಾಡಿದ್ದಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂಡ ಹಾಕಿದ ಎಂಟು ಜನರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ಅರ್ಚಕ ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರಟಗಿ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ನಾಗನಕಲ್ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ದಲಿತ ವ್ಯಕ್ತಿ ಪ್ರವೇಶಿಸಿದ್ದರು. ಈ ಹಿನ್ನಲೆ ದಲಿತ ವ್ತಕ್ತಿ ಕರಿಮಾರಪ್ಪನಿಗೆ ಅರ್ಚಕ, ಹಾಗೂ ದೇವಸ್ಥಾನದ ಆಡಳಿತ ಮಂಡಳಿ ದಂಡ ಹಾಕಿದ್ದರು. ಇದಕ್ಕೆ ಪ್ರತಿಯಾಗಿ ದಂಡ ಹಾಕಿಲ್ಲ ಕಾಣಿಕೆ ನೀಡಿದ್ದೇವೆ ಎಂದು ದಲಿತ ಮುಖಂಡರು ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ವರದಿಯಾದ ನಂತರ ಎಂಟು ಜನರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.

ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ಎಚ್ಚೆತ್ತ ಅಧಿಕಾರಿಗಳು ಎಂಟು ಜನರ ವಿರುದ್ದ ಪ್ರಕರಣ ದಾಖಿಸಿದ್ದಾರೆ. ದೇವಸ್ಥಾನದ ಅರ್ಚಕ ಬಸವರಾಜ್ ಬಡಿಗೇರ್, ರೇವಣಯ್ಯ ಸ್ವಾಮಿ, ಶೇಖಪ್ಪ, ಶರಣಪ್ಪ, ಪ್ರಶಾಂತ್, ಬಸವರಾಜ್, ಕಾಡಪ್ಪ ಹಾಗೂ ದುರಗೇಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸೆಕ್ಷನ್ 504, 149 SC, ST-2005 ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೊಪ್ಪಳ: ದಲಿತ ಬಾಲಕ ದೇವಸ್ಥಾನ ಪ್ರವೇಶ ಮಾಡಿದ ಎಂದು ದಂಡ ಹಾಕಿದ್ದ ಐವರ ಬಂಧನ

ಇದನ್ನೂ ಓದಿ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನಿಗೆ ದಂಡ ಹಾಕಿದ ಗ್ರಾಮಸ್ಥರು, ಸಭೆ ಮಾಡಿ ದೇಗುಲ ಪ್ರವೇಶಿಸಿದ ದಲಿತ ಸಮುದಾಯದ ಜನ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್