ಕೊಪ್ಪಳ ಗ್ಯಾಂಗ್​ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ

| Updated By: ವಿವೇಕ ಬಿರಾದಾರ

Updated on: Mar 11, 2025 | 8:37 AM

ಕೊಪ್ಪಳ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಗಂಗಾವತಿ ಮತ್ತು ಸುತ್ತಮುತ್ತಲಿನ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ವಿದೇಶಿಗರ ಮಾಹಿತಿಯನ್ನು ನೀಡದಿರುವುದು ಮತ್ತು ಅಕ್ರಮ ಚಟುವಟಿಕೆಗಳ ಆರೋಪದ ಮೇಲೆ ಈ ದಾಳಿ ನಡೆದಿದೆ. ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.

ಕೊಪ್ಪಳ ಗ್ಯಾಂಗ್​ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
Follow us on

ಕೊಪ್ಪಳ, ಮಾರ್ಚ್​ 11: ಗಂಗಾವತಿ (Gangavati) ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚರಾ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಎಚ್ಚತ್ತ ಕೊಪ್ಪಳ ಜಿಲ್ಲಾ ಪೊಲೀಸ್​ (Koppal Police) ಇಲಾಖೆ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಸೋಮವಾರ (ಮಾ.10) ದಾಳಿ ಮಾಡಿದೆ.

ಹೋಂ ಸ್ಟೇ, ರೆಸಾರ್ಟ್​ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ರಾಮ್​ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಹೋಂ ಸ್ಟೇ, ರೆಸಾರ್ಟ್​ನಲ್ಲಿನ ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ​ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಮತ್ತು ಹೋಂ ಸ್ಟೇ, ರೆಸಾರ್ಟ್​ನಲ್ಲಿ ಅಕ್ರಮ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು. ಬಳಿಕ, ಹೋಂ ಸ್ಟೇ, ರೆಸಾರ್ಟ್​ಗಳಲ್ಲಿ ಅಕ್ರಮ ಚಟುವಟಿಕೆ ನಡೆಸಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲೂ ಎಚ್ಚರಿಕೆ ನೀಡಿದ್ದ ಎಸ್​ಪಿ

ಘಟನೆ ಬಳಿಕ ಸೋಮವಾರ (ಮಾ.10) ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ, ಗಂಗಾವತಿಯಲ್ಲಿ ರೆಸಾರ್ಟ್ ಮಾಲೀಕರ ಜೊತೆ ಸಭೆ ನಡೆಸಿದ್ದರು ಪಾರ್ಮ್ ಸಿಯನ್ನು ಕಡ್ಡಾಯವಾಗಿ ಭರ್ತಿ ಮಾಡಿ, ವಿದೇಶಿಗರ ಬಗ್ಗೆ ಮಾಹಿತಿ ನೀಡಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದು ಅಂತ ರೆಸಾರ್ಟ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ರೆಸಾರ್ಟ್​ಗಳಲ್ಲಿ ಗಾಂಜಾ ಪೂರೈಕೆ ಸೇರಿದಂತೆ ಯಾವುದೇ ಅಕ್ರಮ ದಂದೆ ನಡೆಸಿದರೇ ಅವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ
ಅಕ್ರಮ ದಂಧೆಗಳ ಅಡ್ಡೆಯಾದ ಕೊಪ್ಪಳದ ರೆಸಾರ್ಟ್, ಹೋಮ್ ಸ್ಟೇ, ಆರೋಪ
ಪ್ರವಾಸಿಗರ ಜೀವದ ಜೊತೆ ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರ ಚೆಲ್ಲಾಟ ಆರೋಪ
ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್​: ಪರಾರಿಯಾಗಿದ್ದ ಮತ್ತೋರ್ವ ಅರೆಸ್ಟ್

ಇದನ್ನೂ ಓದಿ: ವಿದೇಶಿ, ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಓರ್ವ ಪ್ರವಾಸಿಗ ನಾಪತ್ತೆ

ಅಕ್ರಮ ದಂದೆಗಳ ಅಡ್ಡೆಯಾಗುತ್ತಿರುವ ರೆಸಾರ್ಟ್​ಗಳು

ಜಿಲ್ಲೆಯಲ್ಲಿರುವ ಅನೇಕ ಹೋಮ್ ಸ್ಟೇ, ರೆಸಾರ್ಟ್​ಗಳು ವಿದೇಶಿಗರಿಗೆ ಮೋಜು ಮಸ್ತಿ ಹೆಸರಲ್ಲಿ ಅಕ್ರಮ ದಂದೆಯನ್ನು ಕೂಡ ಮಾಡುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿದ್ದವು. ವಿದೇಶಿಗರಿಗೆ, ಕೆಲ ರೆಸಾರ್ಟ್, ಹೋಮ್ ಸ್ಟೇಗಳಲ್ಲಿ ಅನಧಿಕೃತವಾಗಿ ಗಾಂಜಾ ಪೂರೈಕೆ, ಬೇಕಾದ ಮದ್ಯ ಪೂರೈಕೆ ಮಾಡುವ ಕೆಲಸ ಕೂಡಾ ನಡೆಯುತ್ತಿದೆ. ಹೆಚ್ಚಿನ ಹಣ ಪಡೆದು, ಅವರಿಗೆ ಬೇಕಾದ ಸೇವೆಯನ್ನು ನೀಡುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಗಾಂಜಾ ಮತ್ತು ಕುಡಿದ ಮತ್ತಿನಲ್ಲಿ ಈ ಭಾಗದಲ್ಲಿ ಅನೇಕ ಅಹಿತಕರ ಘಟನೆಗಳು ನೆಡದರೂ ಕೂಡ ಅವುಗಳನ್ನು ಮುಚ್ಚಿಹಾಕುವ ಕೆಲಸವನ್ನು ಕೂಡಾ ವ್ಯವಸ್ಥಿತವಾಗಿ ರೆಸಾರ್ಟ್ ಮಾಲೀಕರು ಮಾಡಿಕೊಂಡು ಬರುತ್ತಿ ದ್ದಾರೆ ಎಂಬ ಆರೋಪ ಕೇಳಿಬಂದಿದ್ದವು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ