AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನ

ಕೊಪ್ಪಳದಲ್ಲಿ ನಡೆದ ₹72 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್‌ಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಮತ್ತು ಗುತ್ತಿಗೆದಾರ ದೇವರಾಜ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಯಾವುದೇ ಕಾಮಗಾರಿ ನಡೆಸದೆ 339 ಯೋಜನೆಗಳ ಬಿಲ್ ಪಾವತಿಸಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಗರಣ ಐದು ವರ್ಷಗಳ ಹಿಂದೆ ನಡೆದಿತ್ತು.

72 ಕೋಟಿ ರೂ. ಅಕ್ರಮ ಪ್ರಕರಣ: ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನ
ನಿವೃತ್ತಿಗೆ 15 ದಿನ ಬಾಕಿ ಇರುವಾಗಲೇ ಕೆಆರ್‌ಡಿಎಲ್ ಇಂಜಿನಿಯರ್ ಬಂಧನImage Credit source: tv9
ಶಿವಕುಮಾರ್ ಪತ್ತಾರ್
| Edited By: |

Updated on: Jul 16, 2026 | 11:33 AM

Share

ಮುಖ್ಯಾಂಶಗಳು

  • 72 ಕೋಟಿ ರೂ. ಅಕ್ರಮಕ್ಕೆ ಇಬ್ಬರ ಬಂಧನ
  • ನಿವೃತ್ತಿಗೆ ಮುನ್ನ ಇಂಜಿನಿಯರ್‌ಗೆ ಶಾಕ್
  • 339 ಕಾಮಗಾರಿಗಳಲ್ಲಿ ಅಕ್ರಮ ಆರೋಪ

ಕೊಪ್ಪಳ, ಜುಲೈ 16: ಕೊಪ್ಪಳ (Koppal) ಜಿಲ್ಲೆಯಲ್ಲಿ ಸುಮಾರು ಐದು ವರ್ಷಗಳ ಹಿಂದೆ ನಡೆದಿದ್ದ ಎನ್ನಲಾದ 72 ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಕೆಆರ್‌ಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಹಾಗೂ ಗುತ್ತಿಗೆದಾರ ದೇವರಾಜ್ ಅವರನ್ನು ಬಂಧಿಸಲಾಗಿದೆ. ನಿವೃತ್ತಿಗೆ ಕೇವಲ 15 ದಿನ ಬಾಕಿ ಇರುವಾಗಲೇ ಅಧಿಕಾರಿಯ ಬಂಧನ ಆಗಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ಬಂದಿದೆ.

ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು ಹಲವು ದೂರು

ಲಭ್ಯ ಮಾಹಿತಿಯ ಪ್ರಕಾರ, 339 ಕಾಮಗಾರಿಗಳನ್ನು ಕೈಗೊಳ್ಳದೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸುಮಾರು 72 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಪ್ರಕರಣದ ಕೇಂದ್ರಬಿಂದುವಾಗಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಅಧಿಕಾರಿಗಳು ಆರೋಪಗಳಿಗೆ ಪೂರಕ ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಬಂಧನದ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿದ್ದ ಕಾರ್ಯನಿರ್ವಾಹಕ ಇಂಜಿನಿಯರ್ ಝಡ್.ಎಂ. ಚಿಂಚೋಳ್ಕರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು, ಗುತ್ತಿಗೆದಾರ ದೇವರಾಜ್ ಅವರನ್ನೂ ಬಂಧಿಸಲಾಗಿದೆ.

ಕಾಮಗಾರಿ ನಡೆಸದೆ ಬಿಲ್ ಸಲ್ಲಿಸಿ ಹಣ ಪಡೆದ ಆರೋಪ

ಕಾಮಗಾರಿ ನಡೆಸದೆ ಬಿಲ್‌ಗಳನ್ನು ಸಲ್ಲಿಸಿ ಹಣ ಪಡೆದಿರುವ ಆರೋಪದ ಜೊತೆಗೆ, ಸುಮಾರು 20 ಕೋಟಿ ರೂಪಾಯಿಗೂ ಅಧಿಕ ಜಿಎಸ್‌ಟಿ ಹಣದ ದುರುಪಯೋಗ ಮಾಡಿರುವ ಆರೋಪವೂ ವ್ಯಕ್ತವಾಗಿತ್ತು. ಈ ಸಂಬಂಧವೂ ಲೋಕಾಯುಕ್ತದಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸೇವೆಯಿಂದ ವಜಾಗೊಂಡಿದ್ದ ಚಿಂಚೋಳ್ಕರ್

ಕಳೆದ ವರ್ಷವೇ ಚಿಂಚೋಳ್ಕರ್ ವಿರುದ್ಧ ಕೆಆರ್‌ಡಿಎಲ್ ಅಧಿಕಾರಿಗಳು ಹಾಗೂ ಇತರ ದೂರುದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಹಿಂದೆ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತಾದರೂ, ಬಳಿಕ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದರು ಎಂದು ತಿಳಿದುಬಂದಿದೆ.

ಸದ್ಯ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಅಗತ್ಯವಿದ್ದರೆ ಚಿಂಚೋಳ್ಕರ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ