AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಮುಂದೆ ಮುಖ್ಯ ಶಿಕ್ಷಕನ ಎರಡನೇ ಪತ್ನಿಯ ಹೈಡ್ರಾಮಾ: ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳು ಹೈರಾಣು

ಕೊಪ್ಪಳದ ಕೋಮಲಾಪೂರ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ಪ್ರತಿದಿನ ಶಾಲೆಗೆ ಬಂದು ಜಗಳವಾಡಿ ಪಾಠ ಪ್ರವಚನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಈ ಕೌಟುಂಬಿಕ ಕಲಹ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಗ್ರಾಮಸ್ಥರು ಶಿಕ್ಷಣ ಇಲಾಖೆ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಶಾಲೆ ಮುಂದೆ ಮುಖ್ಯ ಶಿಕ್ಷಕನ ಎರಡನೇ ಪತ್ನಿಯ ಹೈಡ್ರಾಮಾ: ಇಬ್ಬರ ಜಗಳದಲ್ಲಿ ವಿದ್ಯಾರ್ಥಿಗಳು ಹೈರಾಣು
ಮುಖ್ಯ ಶಿಕ್ಷಕನ ಎರಡನೇ ಪತ್ನಿ ಜಗಳ
ಶಿವಕುಮಾರ್ ಪತ್ತಾರ್
| Edited By: |

Updated on: Mar 04, 2026 | 2:50 PM

Share

ಕೊಪ್ಪಳ, ಮಾ.4: ಶಾಲೆಯೆಂದರೆ ಜ್ಞಾನ ದೇಗುಲ, ಇಲ್ಲಿ ಮಕ್ಕಳನ್ನು ಏನು ನೋಡುತ್ತಾರೆ ಅದನ್ನೇ ಕಲಿಯುತ್ತಾರೆ. ಆದರೆ ಈ ಶಾಲೆಯೊಂದರಲ್ಲಿ ಮಕ್ಕಳು ಮುಂದೆಯೇ ಶಿಕ್ಷಕರು ಹಾಗೂ ಅವರ ಎರಡನೇ ಪತ್ನಿ ಜಗಳ ಆಡುತ್ತಾರೆ. ಕೊಪ್ಪಳದ ಕೋಮಲಾಪೂರ ಗ್ರಾಮದ ಹಿರಿಯ ಪ್ರೌಢಶಾಲೆಯಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಿದೆ. ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ನಡೆಸುತ್ತಿರುವ ರಂಪಾಟದಿಂದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ. ಸಿದ್ದೇಶ ಶೆಟ್ಟರ್ ಎಂಬುವವರು ಕೋಮಲಾಪೂರ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿದ್ದೇಶ ಅವರಿಗೆ ಈಗಾಗಲೇ ಮೊದಲ ಪತ್ನಿ ಇದ್ದಾರೆ. ಆದರೂ ನಾಲ್ಕು ವರ್ಷಗಳ ಹಿಂದೆ ಚನ್ನಮ್ಮ ಎಂಬುವವರನ್ನು ಎರಡನೇ ಮದುವೆಯಾಗಿದ್ದರು. ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಕಳೆದ ನಾಲ್ಕೈದು ತಿಂಗಳಿಂದ ಎರಡನೇ ಪತ್ನಿ ಚನ್ನಮ್ಮ ಪ್ರತಿನಿತ್ಯ ಶಾಲೆಗೆ ಬರುತ್ತಿದ್ದಾರೆ. ಮುಖ್ಯ ಶಿಕ್ಷಕನ ಕೊಠಡಿಗೆ ನುಗ್ಗಿ ಜಗಳವಾಡುವುದು, ಕಿರುಚಾಡುವುದನ್ನು ಮಾಡುತ್ತಿದ್ದಾರೆ. ಇಂದು ಕೂಡ ಶಾಲೆಗೆ ನುಗ್ಗಿ ಹೈಡ್ರಾಮಾ ನಡೆಸಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು

ಇಲ್ಲಿದೆ ನೋಡಿ ವಿಡಿಯೋ;

ಶಿಕ್ಷಕನ ಕೌಟುಂಬಿಕ ಕಲಹ ಶಾಲಾ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಪ್ರತಿದಿನದ ಈ ಗಲಾಟೆಯಿಂದಾಗಿ ಮಕ್ಕಳಿಗೆ ಪಾಠ ಕೇಳಲು ಸಾಧ್ಯವಾಗುತ್ತಿಲ್ಲ. “ಇದು ಶಾಲೆಯೋ ಅಥವಾ ಜಗಳವಾಡುವ ಕಣವೋ?” ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಈ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!