AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1098 ಕರೆ ಮಾಡಿ ಕಣ್ಣೀರಿಟ್ಟಿದ್ದ ವಿದ್ಯಾರ್ಥಿನಿಯರು: ಕೊಪ್ಪಳದಲ್ಲಿ ಶಿಕ್ಷಕನ ವಿರುದ್ಧ ದೂರು, ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಎಸ್ಕೇಪ್

ಕೊಪ್ಪಳದ ಶಾಲಾ ಶಿಕ್ಷಕ ಅಂದನಗೌಡ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದರು. ಪ್ರಕರಣ ಹೊರಬರುತ್ತಿದ್ದಂತೆ ಶಿಕ್ಷಕ ಅಮಾನತುಗೊಂಡಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿದ್ದಾರೆ. ಇದು ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

1098 ಕರೆ ಮಾಡಿ ಕಣ್ಣೀರಿಟ್ಟಿದ್ದ ವಿದ್ಯಾರ್ಥಿನಿಯರು: ಕೊಪ್ಪಳದಲ್ಲಿ ಶಿಕ್ಷಕನ ವಿರುದ್ಧ ದೂರು, ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಎಸ್ಕೇಪ್
ಶಾಲಾ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿದ ಶಿಕ್ಷಕ
ಶಿವಕುಮಾರ್ ಪತ್ತಾರ್
| Edited By: |

Updated on:Sep 28, 2026 | 9:28 AM

Share

ಕೊಪ್ಪಳ ಸೆ. 28: ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಅಂದನಗೌಡ ಎಂಬಾತನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ದೂರು ದಾಖಲಾಗಿದೆ. ಪ್ರಕರಣ ಹೊರಬೀಳುತ್ತಿದ್ದಂತೆ ಆರೋಪಿ ಶಿಕ್ಷಕನನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಕೊಪ್ಪಳ ಗ್ರಾಮೀಣ ಭಾಗದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಅಂದನಗೌಡ, ಶಾಲಾ ಕೊಠಡಿಯೊಳಗೆ ಬಾಲಕಿಯರನ್ನು ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು, ಅಸಭ್ಯವಾಗಿ ನಡೆದುಕೊಳ್ಳುವುದು ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಶಿಕ್ಷಕನ ಕಿರುಕುಳ ತಾಳಲಾರದೆ ವಿದ್ಯಾರ್ಥಿನಿಯರು ಸ್ವತಃ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ, “ನಮಗೆ ಶಿಕ್ಷಕನಿಂದ ಕಿರುಕುಳವಾಗುತ್ತಿದೆ, ದಯವಿಟ್ಟು ಬಂದು ನಮಗೆ ಸಹಾಯ ಮಾಡಿ” ಎಂದು ಮನವಿ ಮಾಡಿಕೊಂಡಿದ್ದರು. ಮಕ್ಕಳ ಸಹಾಯವಾಣಿಯಿಂದ ಮಾಹಿತಿ ಲಭ್ಯವಾಗುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ (DCPU) ಅಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಧೈರ್ಯವಾಗಿ ಮುಂದೆ ಬಂದ ಶಾಲಾ ಬಾಲಕಿಯರು, ಶಿಕ್ಷಕ ಅಂದನಗೌಡ ನಡೆಸುತ್ತಿದ್ದ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು.

ಇದನ್ನೂ ಓದಿ; 250 ಅಡಿ ಆಳದ ತೆರೆದ ಕೊಳವೆ ಬಾವಿಗೆ ಜಾರಿಬಿದ್ದ ಮಗು: ಎನ್‌ಡಿಆರ್‌ಎಫ್ ಕಾರ್ಯಾಚರಣೆ ಫಲಿಸಲಿಲ್ಲ, ಆಸ್ಪತ್ರೆಯಲ್ಲಿ ಸಾವು ದೃಢ

ಮಕ್ಕಳ ರಕ್ಷಣಾ ಘಟಕದ ತನಿಖೆ ಹಾಗೂ ನಿರ್ದೇಶನದ ಬಳಿಕ ಶಾಲೆಯ ಮುಖ್ಯ ಶಿಕ್ಷಕಿ ಅವರು ಘಟನೆ ನಡೆದ ನಾಲ್ಕು ದಿನಗಳ ನಂತರ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಅಂದನಗೌಡ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಆರೋಪಿ ಶಿಕ್ಷಕ ಅಂದನಗೌಡನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೇಸ್ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ.

ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಾಹಿಲ್ ಭಾಗ್ಲಾ, “ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಒಬ್ಬನೇ ಆರೋಪಿಯನ್ನು ಬಂಧಿಸಲು 3 ವಿಶೇಷ ಪೊಲೀಸ್ ಪಡೆಗಳನ್ನು (Teams) ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 am, Mon, 28 September 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು