AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal News: ಕಲುಷಿತ ನೀರು ಪ್ರಕರಣ, ತಾಲೂಕಿಗೊಬ್ಬರು ನೋಡಲ್ ಅಧಿಕಾರಿ ನೇಮಿಸುವಂತೆ ಶಿವರಾಜ ತಂಗಡಗಿ ಸೂಚನೆ

ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ತಾಲೂಕಿಗೊಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Koppal News: ಕಲುಷಿತ ನೀರು ಪ್ರಕರಣ, ತಾಲೂಕಿಗೊಬ್ಬರು ನೋಡಲ್ ಅಧಿಕಾರಿ ನೇಮಿಸುವಂತೆ ಶಿವರಾಜ ತಂಗಡಗಿ ಸೂಚನೆ
ಸಚಿವ ಶಿವರಾಜ್​ ತಂಗಡಗಿ
ವಿವೇಕ ಬಿರಾದಾರ
|

Updated on:Jun 13, 2023 | 10:16 AM

Share

ಕೊಪ್ಪಳ: ಕಲುಷಿತ ನೀರು (Contaminated water) ಕುಡಿದು ಮೂವರು ಸಾವನ್ನಪ್ಪಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಅವರು ತಾಲೂಕಿಗೊಬ್ಬರು ನೋಡಲ್ ಅಧಿಕಾರಿಯನ್ನು (Nodal Officer) ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ಕುಡಿಯು ನೀರಿನ ಸಮಸ್ಯೆ ಆಗದಂತೆ ತಾಕೀತು ಮಾಡಿದ್ದಾರೆ. ಅಲ್ಲದೇ ಸಚಿವರು ನೋಡಲ್ ಅಧಿಕಾರಿ ನೇಮಿಸಿ ಅವರನ್ನು ಪ್ರತಿ ಹಳ್ಳಿ ಪ್ರವಾಸ ಮಾಡಿ, ಪ್ರತಿ ಹಳ್ಳಿಯ ಸಮಸ್ಯೆ ಬಗ್ಗೆ ಅರಿಯುವಂತೆ ಸೂಚನೆ ನೀಡಿದರು.

ಈ ಬಗ್ಗೆ ಸಭೆ ನಡೆಸಿದ ಸಚಿವ ಶಿವರಾಜ ತಂಗಡಗಿ ಒಂದು ವಾರದಲ್ಲಿ ಜಿಲ್ಲೆಯ ಎಲ್ಲಾ ಹಳ್ಳಿಗಳ ಕುಡಿಯುವ ನೀರಿನ‌ ಸಮಸ್ಯೆ ಬಗೆಹರಿಸಬೇಕು. ಪಿಡಿಓ, ಗ್ರಾಮ ಪಂಚಾಯತ್ ಅಧಿಕಾರಿಗಳ ಮೇಲೆ ಜವಬ್ದಾರಿ ಹಾಕದೆ, ಖುದ್ದು ತಹಶಿಲ್ದಾರರ ಮೇಲುಸ್ತವಾರಿ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಅನಾಹುತ ಮರುಕಳಿಸಿದರೆ ಸಿಇಒ ಸಸ್ಪೆಂಡ್ – ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ಕಳೆದ ಕೆಲವು ದಿನಗಳಿಂದ ಕಲುಷಿತ ನೀರು ಸೇವಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವರು ಅನಾರೋಗ್ಯದಿಂದ ಬಳಲಿದರು. ಈ ಸಂಬಂಧ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಘಟನೆಗಳ ಬಗ್ಗೆ  ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಪ್ರಕರಣ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಹಾಗೂ ನೀವು ಜನರನ್ನು ಸಾಯಿಸಲು ಇರೋದಾ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಈ ವೇಳೆ ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳ ಜಿ.ಪಂ. ಸಿಇಒಗೆ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದರು.  ಕಳಪೆ ಕಾಮಗಾರಿಯೇ ಕಲುಷಿತ ನೀರಿಗೆ ಕಾರಣ. ಮತ್ತೆ ಈ ರೀತಿಯ ಅನಾಹುತ ಮರುಕಳಿಸಿದರೆ ಕೊಪ್ಪಳ ಜಿ.ಪಂ. ಸಿಇಒ ನೇರಹೊಣೆಯಾಗುತ್ತಾರೆ. ಸಿಇಒ ಅಮಾನತು ಮಾಡುವುದಾಗಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.

ಮೊದಲ ಅನಾಹುತ ಸಂಭವಿಸಿದಾಗಲೇ ಯಾಕೆ ಎಚ್ಚೆತ್ತುಕೊಳ್ಳಲಿಲ್ಲ? ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ. ಮತ್ತೆ ಕಲುಷಿತ ನೀರಿನ ಅನಾಹುತವಾದರೇ ನೀವೇ ಹೊಣೆ ಆಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದರು. ಇನ್ನು ಈ ಬಗ್ಗೆ ತನಿಖೆ ನಡೆಸುವಂತೆ ಸಿಎಸ್​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 am, Tue, 13 June 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ