
ಕೊಪ್ಪಳ, ಮಾರ್ಚ್ 12: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ನಡೆದಿದೆ. ಹುಲಿಗೆವ್ವ(9), ವಿಜಯಮ್ಮ(8) ಜೊತೆ ತಾಯಿ ಬಾಳವ್ವ(35) ಆತ್ಮಹತ್ಯೆ ಮಾಡಿಕೊಂಡವರು. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೇತನ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತದೇಹವನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ: ಮಡಿಕೇರಿ ಡಬಲ್ ಮರ್ಡರ್ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ
ಖಾಸಗಿ ಕಾಲೇಜಿನ ವ್ಯಾನ್ ಮೆನೇಜ್ಮೆಂಟ್ ನಿರ್ವಹಣೆ ಮಾಡುತ್ತಿದ್ದ ಚೇತನ್, ನಾನು ಮನೆ ಬಿಟ್ಟು ಹೋಗುತ್ತೇನೆ, ಇಲ್ಲಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸ್ನೇಹಿತನಿಗೆ ಮೆಸೇಜ್ ಮಾಡಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇತ್ತೀಚೆಗೆ ಮಡಿಕೇರಿ ನಗರದಲ್ಲಿ ನಡೆದಿತ್ತು. ಇಲ್ಲಿನ ಹಿಮವನ ಲೇಔಟ್ ನಿವಾಸಿ 40 ವರ್ಷದ ದೇವಿಪ್ರಸಾದ್ ಸಾವನ್ನಪ್ಪಿದ ವ್ಯಕ್ತಿ. ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಮೈಸೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು.
ಇದನ್ನೂ ಓದಿ: ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ
ಕಳೆದ ಕೆಲವು ದಿನಗಳಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿತ್ತು. ಇತ್ತೀಚೆಗೆ ತಮ್ಮ ಕೋವಿಯೊಂದಿಗೆ ಮನೆಯಿಂದ ಹೊರ ಬಂದು ರಸ್ತೆಬದಿಯಲ್ಲೇ ಗುಡುಂ ಹಾರಿಸಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ನಗರ ಢಾಣೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.