Tungabhadra Dam Crisis: ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ, ತಜ್ಞರಿಂದ ಆಘಾತಕಾರಿ ಮಾಹಿತಿ

ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನು ಬದಲಿಸುವ ಅವಶ್ಯಕತೆಯಿದೆ ಎಂದು ತಜ್ಞರು ಸೂಚಿಸಿದ್ದಾರೆ. 70 ವರ್ಷಗಳ ಹಿಂದೆ ಅಳವಡಿಸಲಾದ ಈ ಗೇಟ್​ಗಳು ಹಳೆಯದಾಗಿದ್ದು, ಭಾರಿ ಅಪಾಯವನ್ನುಂಟುಮಾಡುತ್ತಿವೆ. ರಾಜ್ಯ ಸರ್ಕಾರ ಮತ್ತು ತುಂಗಭದ್ರಾ ಜಲಾಶಯ ಮಂಡಳಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

Tungabhadra Dam Crisis: ತುಂಗಭದ್ರಾ ಜಲಾಶಯಕ್ಕೆ ಮತ್ತೊಂದು ಆತಂಕ, ತಜ್ಞರಿಂದ ಆಘಾತಕಾರಿ ಮಾಹಿತಿ
ತುಂಗಭದ್ರಾ ಜಲಾಶಯ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on:Dec 12, 2024 | 9:50 AM

ಕೊಪ್ಪಳ, ಡಿಸೆಂಬರ್ 12: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಕ್ರೆಸ್ಟ್​​ಗೇಟ್ ಕೊಚ್ಚಿಕೊಂಡು ಹೋಗಿ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಒಂದು ವಾರದ ನಿರಂತರ ಪ್ರಯತ್ನದ ಫಲವಾಗಿ ತಾತ್ಕಾಲಿಕ ಗೇಟ್ ಅಳವಡಿಕೆ ಮಾಡಲಾಗಿತ್ತು. ಇದೀಗ ಜಲಾಯಶದ ಇತರ ಕ್ರೆಸ್ಟ್​​ಗೇಟ್​ಗಳ ಬಗ್ಗೆಯೂ ತಜ್ಞರು ಆಘಾತಕಾರಿ ಮಾಹಿತಿ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್​ಗಳನ್ನೂ ಬದಲಾವಣೆ ಮಾಡಬೇಕು ಎಂದು ತಜ್ಞರು ಹೇಳಿದ್ದಾರೆ.

ತುಂಗಭದ್ರಾ ಜಲಾಶಯ ಕರ್ನಾಟಕದ 4 ಜಿಲ್ಲೆಗಳು, ನೆರೆಯ ತೆಲೆಂಗಾಣ, ಆಂಧ್ರಪ್ರದೇಶ ಲಕ್ಷಾಂತರ ಜನರ ಬದುಕಿಗೆ ಆಶ್ರಯವಾಗಿದೆ. ಕಳೆದ ವರ್ಷ ಬರಗಾಲದಿಂದಾಗಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಆಗಸ್ಟ್ ಮೊದಲ ವಾರದಲ್ಲಿಯೇ ಭರ್ತಿಯಾಗಿತ್ತು. ಆದರೆ 2024 ರ ಆಗಸ್ಟ್ 10 ರಂದು ರಾತ್ರಿ ಸಮಯದಲ್ಲಿ ಡ್ಯಾಂನ 19 ನೇ ಕ್ರೆಸ್ಟಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ನಂತರ ಹರಸಾಹಸ ಪಟ್ಟು ತಾತ್ಕಾಲಿಕ ಗೇಟ್ ಅಳವಡಿಸಲಾಗಿತ್ತು.

ಎಲ್ಲ 33 ಗೇಟ್‌ಗಳ ಬದಲಾವಣೆ ಬಗ್ಗೆ ಚರ್ಚೆ

ಯಾವುದೇ ಜಲಾಶಯದ ಕ್ರೆಸ್ಟ್​​ಗೇಟ್​ಗಳು, ಚೈನ್ ಲಿಂಕ್‌ಗಳನ್ನು ಪ್ರತಿ 50 ವರ್ಷಕ್ಕೊಮ್ಮೆ ಬದಲಾಯಿಸಬೇಕು. ಆದರೆ ತುಂಗಭದ್ರಾ ಜಲಾಶಯಕ್ಕೆ 70 ವರ್ಷಗಳ ಹಿಂದೆಯೇ ಕ್ರೆಸ್ಟ್​​ಗೇಟ್, ಚೈನ್ ಲಿಂಕ್​ಗಳನ್ನು ಅಳವಡಿಸಲಾಗಿದೆ. ಆ ನಂತರ ಈವರೆಗೆ ಒಮ್ಮೆಯೂ ಬದಲಾಯಿಸಿಲ್ಲ. ಹೀಗಾಗಿ ಎಲ್ಲಾ 33 ಕ್ರೆಸ್ಟ್​​ಗೇಟ್​​​ಗಳನ್ನು ಬದಲಿಸಬೇಕು ಎಂದು ಚರ್ಚೆಯಾಗುತ್ತಿದೆ.

ತಜ್ಞರ ತಂಡದಿಂದ ತುಂಗಭದ್ರಾ ಡ್ಯಾಂ ಪರಿಶೀಲನೆ

ತುಂಗಭದ್ರಾ ಜಲಾಶಯದ ತಾಂತ್ರಿಕ ತಜ್ಞರ ತಂಡ ಈಗಾಗಲೇ ಎರಡು ಬಾರಿ ಡ್ಯಾಂಗೆ ಬೇಟಿ ನೀಡಿ ಪರಿಶೀಲಿಸಿದೆ. ಕೇಂದ್ರ ಜಲಶಕ್ತಿ ಆಯೋಗದ ಅಧಿಕಾರಿಗಳ ತಂಡ ಕೂಡಾ ಕಳೆದ ವಾರ ಜಲಾಶಯಕ್ಕೆ ಬೇಟಿ ನೀಡಿ ಸ್ಥಿತಿಗತಿ ಅಧ್ಯಯನ ಮಾಡಿದೆ. ಈ ಬಗ್ಗೆ ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ.

ಜಲಾಶಯ ನಿರ್ವಹಣೆ ಮಾಡುವುದು ಹೈದರಾಬಾದ್​ನಲ್ಲಿರುವ ತುಂಗಭದ್ರಾ ಜಲಾಶಯ ಮಂಡಳಿ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ. ಹೀಗಾಗಿ ಮಂಡಳಿ ಗೇಟ್ ಬದಲಾವಣೆ ಮಾಡುವುದಾದರೆ ನಮ್ಮ ಪಾಲಿನ ಹಣವನ್ನು ನೀಡಲು ಸಿದ್ಧ ಎಂದು ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಗುಡ್​ನ್ಯೂಸ್: 2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೇಸಿಗೆ ಸಮಯದಲ್ಲಿ ಹೊಸ ಗೇಟ್‌ಗಳ ಅಳವಡಿಕೆ ಕಾರ್ಯ ಆರಂಭಿಸಲು ಬೇಕಾದ ಸಿದ್ದತೆಯನ್ನು ಈಗಿನಿಂದಲೇ ಆರಂಭಿಸಬೇಕಿದೆ. 33 ಗೇಟ್‌ಗಳ ಅಳವಡಿಕೆಗೆ ಸಾಕಷ್ಟು ಸಮಯ ಬೇಕಾಗಿರುವುದರಿಂದ ಈಗಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:45 am, Thu, 12 December 24

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!