AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್​ ನ್ಯೂಸ್​: ತುಂಗಭದ್ರಾ ಡ್ಯಾಂನ 7 ಗೇಟ್​ಗಳಿಗೆ ಡ್ಯಾಮೇಜ್​; ಸಚಿವ ಶಿವರಾಜ್​ ತಂಗಡಗಿ

ತುಂಗಭದ್ರಾ ಡ್ಯಾಂ ನಾಲ್ಕು ಜಿಲ್ಲೆಗಳ ಜನರ ಜೀವನಾಡಿಯಾಗಿದೆ. ಈ ಜಲಾಶಯದಿಂದ ಲಕ್ಷಾಂತರ ರೈತರು ಬದಕು ಕಟ್ಟಿಕೊಂಡಿದ್ದಾರೆ. ಕಳೆದ ವರ್ಷ ಈ ಜಲಾಶಯದ 19 ನೇ ಗೇಟ್ ಕಿತ್ತು ಹೋಗಿತ್ತು. ಗೇಟ್ ಕಿತ್ತು ಹೋಗಿ ಒಂದು ವರ್ಷ ಕಳೆದರೂ ಇನ್ನೂವರೆಗೂ ಹೊಸ ಗೇಟ್ ಅಳವಡಿಸಿಲ್ಲ. ಆದರೆ, ಇದೀಗ ಇದೇ ಜಲಾಶಯದ ಕುರಿತು ಮತ್ತೊಂದು ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಶಾಕಿಂಗ್ ಮಾಹಿತಿಯನ್ನ ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೇ ಬಹಿರಂಗ ಪಡಿಸಿದ್ದಾರೆ.

ಶಾಕಿಂಗ್​ ನ್ಯೂಸ್​: ತುಂಗಭದ್ರಾ ಡ್ಯಾಂನ 7 ಗೇಟ್​ಗಳಿಗೆ ಡ್ಯಾಮೇಜ್​; ಸಚಿವ ಶಿವರಾಜ್​ ತಂಗಡಗಿ
ತುಂಗಭದ್ರಾ ಡ್ಯಾಂ, ಸಚಿವ ಶಿವರಾಜ್​ ತಂಗಡಗಿ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on:Aug 18, 2025 | 9:13 AM

Share

ಕೊಪ್ಪಳ, ಆಗಸ್ಟ್​ 15: ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು ಹಾಗೂ ಇಳಿಸಲು ಆಗುತ್ತಿಲ್ಲ. ಗೇಟ್ ನಂಬರ್ 4 ಅನ್ನು ಕೇವಲ ಎರಡು ಅಡಿ ಮಾತ್ರ ಮೇಲಕ್ಕೆ ಎತ್ತಬಹುದು. ಗೇಟ್ ನಂಬರ್ 4 ಸೇರಿದಂತೆ ಒಟ್ಟು ಏಳು ಗೇಟ್​ಗಳು ಡ್ಯಾಮೇಜ್ ಆಗಿವೆ ಎಂದು ತಿಳಿಸಿದರು.

ಒಂದು ಗೇಟ್ ಕೊಚ್ಚಿ ಹೋದಾಗಲೇ ಅಪಾರ ಪ್ರಮಾಣದ ನೀರು ಪೋಲಾಗಿತ್ತು. ಇದೀಗ ಏಳು ಗೇಟ್​ಗಳು ಬೆಂಡ್ ಆಗಿದ್ದು, ಯಾವಾಗ ಏನಾಗುತ್ತದೆ ಎಂಬ ಆತಂಕ ಕಾಡುತ್ತಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್​ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಚಿವ ಶಿವರಾಜ್​ ತಂಗಡಗಿ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ ಗೇಟ್ ನಂಬರ್ 19 ಕೊಚ್ಚಿ ಹೋಗಿತ್ತು. ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸಿಲ್ಲ. ಈ ನಡುವೆ ಇದೀಗ ಏಳು ಗೇಟ್​ಗಳು ಡ್ಯಾಮೇಜ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಗೇಟ್ ಕಿತ್ತು ಹೋದ ಸಮಯದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸ ಗೇಟ್ ಅಳವಡಿಸುವ ಕೆಲಸ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಒಂದು ವರ್ಷವಾದರೂ ಹೊಸ ಗೇಟ್ ಅಳವಡಿಸಿಲ್ಲ. ಇದರ ನಡುವೆ ಸಚಿವ ಶಿವರಾಜ್​ ತಂಗಡಗಿ ಅವರು ಬಹಿರಂಗಪಡಿಸಿದ ಮಾಹಿತಿ ನಾಲ್ಕು ಜಿಲ್ಲೆಯ ರೈತರನ್ನ ಚಿಂತೆಗೀಡು ಮಾಡಿದೆ.

ಇದನ್ನೂ ಓದಿ
Image
ನಿರ್ಬಂಧ ಉಲ್ಲಂಘಿಸಿ TB ಡ್ಯಾಂ ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ
Image
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ನಂತರ 7 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ
Image
ತುಂಗಭದ್ರಾ ಜಲಾಶಯದ ಆಯುಷ್ಯ ಮುಗಿದಿದೆ: ಜಲತಜ್ಞರು ನೀಡಿದ ಮಾಹಿತಿ ಇಲ್ಲಿದೆ
Image
ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ!

2024ರ ಆಗಸ್ಟ್ 10 ರಂದು ತುಂಗಭದ್ರಾ ಜಲಾಶಯದ 19 ನೇ ಕ್ರೆಸ್ಟ್​ ಗೇಟ್ ಕಿತ್ತು ಹೋಗಿತ್ತು.‌ ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿತ್ತು.‌ ಈ ವೇಳೆ ಡ್ಯಾಂನ ಎಲ್ಲ ಕ್ರೆಸ್ಟ್​ ಗೇಟ್​ಗಳನ್ನು ಬದಲಾವಣೆ ಮಾಡಬೇಕೆಂದು ವರದಿಯನ್ನು ತಜ್ಞರು ನೀಡಿದ್ದರು. ಆದರೆ, ಸರ್ಕಾರ ಮಾತ್ರ ಎಲ್ಲ ಗೇಟ್ ಬದಲಾವಣೆ ಇರಲಿ ಕನಿಷ್ಠ 19ನೇ ಕ್ರೆಸ್ಟ್​ ಗೇಟ್​ಗೆ ಹೊಸ ಗೇಟ್ ಅಳವಡಿಸುವ ಕೆಲಸ ಸಹ ಮಾಡಿಲ್ಲ. ಇದೀಗ 7 ಗೇಟ್​ಗಳು ಅಪಾಯದ ಅಂಚಿನಲ್ಲಿ ಇವೆ ಎಂಬ ವಿಚಾರ ತಿಳಿದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ತುಂಗಭದ್ರಾ ಜಲಾಶಯದಲ್ಲಿ 80 ಟಎಮ್​ಸಿ ನೀರು ಸಂಗ್ರಹವಾಗಿದೆ. ಮೂರು ಗೇಟ್​ಗಳಿಂದ 13 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಇದನ್ನೂ ಓದಿ: 105 TMC ಸಾಮರ್ಥ್ಯದ ಟಿಬಿ ಡ್ಯಾಂನಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹ: ಕಾರಣವೇನು? ಇಲ್ಲಿದೆ ವಿವರ

ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾದ ಹಿನ್ನಲೆ ಒಳಹರಿವು ಕಡಿಮೆಯಾಗಿದೆ. ಇಂದು 23 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದೆ. 33 ಗೇಟ್​ಗಳಲ್ಲಿ ಕೇವಲ 3 ಗೇಟ್​ಗಳ ಮೂಲಕ ನೀರು ಬಿಡಲಾಗುತ್ತಿದೆ. ನೀರು ಹೆಚ್ಚಾದರೆ ಜಲಾಶಯಕ್ಕೆ ಕಂಟಕ ತಪ್ಪಿದ್ದಲ್ಲ. ಸರಕಾರದ ನಿರ್ಲಕ್ಷ್ಯದಿಂದ ಡ್ಯಾಂಗೆ ಹಾನಿಯುಂಟಾಗುವ ಸಾಧ್ಯತೆ ಇದೆ ಎಂದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

1 ಲಕ್ಷ 50 ಸಾವಿರ ಕ್ಯೂಸೆಕ್ಸ್ ಒಳಹರಿವು ಬಂದರೆ ಜಲಾಶಯದ ಎಲ್ಲ 33 ಗೇಟ್​ಗಳನ್ನು ತೆರೆಯಬೇಕಾಗುತ್ತದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹೆಚ್ಚಿನ ಒಳಹರಿವು ಬಂದರೆ ಎಲ್ಲ ಗೇಟ್​ಗಳನ್ನು ತೆರೆಯಲು ಸಾಧ್ಯವಾಗದೆ ಡ್ಯಾಂಗೆ ಅಪಾಯವಾಗುವ ಸಾಧ್ಯತೆಗಳಿವೆ. ಸರಕಾರಕ್ಕೆ ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕೆನ್ನುವುದೇ ದೊಡ್ಡ ಚಿಂತೆಯಾಗಿದ್ದು, ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಮೂಲಕ ಡ್ಯಾಂ ಅನ್ನು ಅಪಾಯದಿಂದ ಪಾರು ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Fri, 15 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ