AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು!

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಆಡಿಟ್ ವರದಿ ವೇಳೆ ಬರೋಬ್ಬರಿ 8.43 ಕೋಟಿ ರೂಪಾಯಿ ವಂಚನೆ ಬಯಲಾಗಿದೆ. ನಿವೇಶನ ನೀಡುವುದಾಗಿ ನಂಬಿಸಿ ನಕಲಿ ಬ್ಯಾಂಕ್ ಖಾತೆಗಳ ಮೂಲಕ ಕೋಟಿ ಕೋಟಿ ಹಣ ಲೂಟಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಸರ್ಕಾರವನ್ನು 'ಎಟಿಎಂ' ಎಂದು ಕರೆದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂ. ಹಗರಣ: ಆಡಿಟ್‌ನಲ್ಲಿ ಕೋಟಿ ಕೋಟಿ ಲೂಟಿ ಬಯಲು!
ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ
ಶಿವಕುಮಾರ್ ಪತ್ತಾರ್
| Edited By: |

Updated on: Aug 16, 2026 | 11:12 AM

Share

ಮುಖ್ಯಾಂಶಗಳು

  • ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 8.43 ಕೋಟಿ ರೂಪಾಯಿ ವಂಚನೆ ಬಯಲಿಗೆ.
  • ನಿವೇಶನ ಕೊಡುವುದಾಗಿ ನಂಬಿಸಿ ನಕಲಿ ಖಾತೆ ಮೂಲಕ ಲೂಟಿ ಮಾಡಿದ ಸಿಬ್ಬಂದಿ.
  • ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ ಅಶೋಕ್.

ಕೊಪ್ಪಳ, ಆಗಸ್ಟ್ 16: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (KKRDB) ಅಕ್ರಮದ ಬೆನ್ನಲ್ಲೇ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ಬೃಹತ್ ಹಣಕಾಸು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ನಿವೇಶನ ಕೊಡುವುದಾಗಿ ನಂಬಿಸಿ ಪ್ರಾಧಿಕಾರದ ಅನಧಿಕೃತ ಬ್ಯಾಂಕ್ ಖಾತೆ ಸೃಷ್ಟಿಸಿ, ಬರೋಬ್ಬರಿ 8.43 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಹೊರಗುತ್ತಿಗೆ ನೌಕರನಿಂದ ಕೋಟಿ ಕೋಟಿ ವಂಚನೆ

ಪ್ರಾಧಿಕಾರದಲ್ಲಿ ಕಳೆದ 18 ವರ್ಷಗಳಿಂದ ದಿನಗೂಲಿ ಆಧಾರದ ಮೇಲೆ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬಾತ ಈ ಹಗರಣದ ಮುಖ್ಯ ರೂವಾರಿ ಎನ್ನಲಾಗಿದೆ. ಕೊಪ್ಪಳ ಕಿಮ್ಸ್ ಹಿಂಭಾಗದ ಸರೋಜಾ ಬಡಾವಣೆಯಲ್ಲಿ ನಿವೇಶನ ಕೊಡುವುದಾಗಿ ಸಾರ್ವಜನಿಕರನ್ನು ನಂಬಿಸಿ, ಪ್ರಾಧಿಕಾರದ ಹೆಸರಿನಲ್ಲೇ ಅನಧಿಕೃತ ಬ್ಯಾಂಕ್ ಖಾತೆ ತೆಗೆದು ಕೋಟ್ಯಂತರ ರೂಪಾಯಿ ಲೂಟಿ ಮಾಡಲಾಗಿದೆ. ಇತ್ತೀಚೆಗೆ ನಡೆದ ಆಡಿಟ್ ವರದಿಯಲ್ಲಿ ಈ ಕೋಟಿ ಕೋಟಿ ಅಕ್ರಮ ಬಹಿರಂಗಗೊಂಡಿದ್ದು, ಪ್ರಸ್ತುತ ಆಯುಕ್ತ ಶರಣಪ್ಪ ಅವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರವೀಂದ್ರನನ್ನು ಈಗಾಗಲೇ ಕೆಲಸದಿಂದ ವಜಾಗೊಳಿಸಲಾಗಿದೆ.

ಉನ್ನತಾಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಶಾಮೀಲು ಶಂಕೆ

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, “ಇದು ಕೇವಲ ಒಬ್ಬ ಸಿಬ್ಬಂದಿಯ ಕೆಲಸವಲ್ಲ. ಪ್ರಾಧಿಕಾರದ ಒಳಗಿನವರು, ಹೊರಗಿನವರು ಹಾಗೂ ಬ್ಯಾಂಕ್ ಸಿಬ್ಬಂದಿ ಶಾಮೀಲಾಗಿರುವ ಶಂಕೆ ಇದೆ. ನೌಕರ ರವೀಂದ್ರ ಕೆಲಸದಿಂದ ವಜಾಗೊಂಡ ಮೇಲೂ ಹಣ ವರ್ಗಾವಣೆಯಾಗಿದೆ. ಪ್ರಾಧಿಕಾರದ ಕೆಲ ಅಧಿಕಾರಿಗಳ ಸಹಿಗಳೂ ಪತ್ತೆಯಾಗಿದ್ದು, ಸಮಗ್ರ ಡಿಟೇಲ್ ರಿಪೋರ್ಟ್ ಸಿದ್ಧಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ‘ಎಟಿಎಂ’ ಆಗಿದೆ: ಆರ್. ಅಶೋಕ್ ವಾಗ್ದಾಳಿ

ಕೊಪ್ಪಳ ನಗರಾಭಿವೃದ್ಧಿ ಹಗರಣದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲದ ಇಲಾಖೆಯೇ ಇಲ್ಲ. ನಗರಾಭಿವೃದ್ಧಿ ಇಲಾಖೆಯು ಕಾಂಗ್ರೆಸ್ ನಾಯಕರ ಎಟಿಎಂ ಆಗಿದೆ. ಇದು ಕೇವಲ ಕೆಳಹಂತದ ಸಿಬ್ಬಂದಿಯ ಕೆಲಸವಲ್ಲ, ಸರ್ಕಾರದ ಸಾಂಸ್ಥಿಕ ಲೂಟಿ. ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ತಕ್ಷಣ ಜೈಲಿಗಟ್ಟಬೇಕು,” ಎಂದು ಸಿಎಂ  ಅವರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ