AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹಣ ಕೊಂಡೊಯ್ಯಲು ಬಂದಾಕೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ನಾಲ್ವರಿಂದ ಅತ್ಯಾಚಾರ, ಕಾಮುಕರ ಬಂಧನ

ಕಳೆದ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ನಡೆದ ಗ್ಯಾಂಗ್ ರೇಪ್ ಇಡೀ ದೇಶದ್ಯಾಂತ ಸದ್ದು ಮಾಡಿತ್ತು. ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪ್ರಕರಣವನ್ನು ಕೊಪ್ಪಳ ಜಿಲ್ಲೆಯ ಜನ ಇನ್ನೂ ಮರೆತಿಲ್ಲ. ಅಂಥದ್ದರಲ್ಲಿ ಇದೀಗ ಅಂಥದ್ದೇ ಒಂದು ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮೇಲೆ ನಾಲ್ವರು ಕೀಚಕರು ಮತ್ತು ಬರಿಸುವ ಜ್ಯೂಸ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಕೊಪ್ಪಳ: ಹಣ ಕೊಂಡೊಯ್ಯಲು ಬಂದಾಕೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ನಾಲ್ವರಿಂದ ಅತ್ಯಾಚಾರ, ಕಾಮುಕರ ಬಂಧನ
ಕೊಪ್ಪಳ ಪೊಲೀಸ್
ಶಿವಕುಮಾರ್ ಪತ್ತಾರ್
| Edited By: |

Updated on: Nov 17, 2025 | 1:16 PM

Share

ಕೊಪ್ಪಳ, ನವೆಂಬರ್ 17: ಕೊಪ್ಪಳ (Koppal) ಜಿಲ್ಲೆ ಯಲಬುರ್ಗಾ ತಾಲೂಕಿನ ಮದ್ಲೂರ ಗ್ರಾಮದ ಬಳಿ 39 ವರ್ಷದ ಮಹಿಳೆ ಮೇಲೆ ಭಾನುವಾರ ಸಂಜೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಹೊಸಪೇಟೆಯಿಂದ ಕುಷ್ಟಗಿಗೆ ಪರಿಚದವರ ಬಳಿ ಹಣ ತಗೆದುಕೊಂಡು ಹೋಗಲು ಮಹಿಳೆ ಬಂದಿದ್ದರು. ಆದರೆ ಅಲ್ಲಿಂದ ಆ ಮಹಿಳೆಯನ್ನು ಕರೆದುಕೊಂಡ ಹೋದ ನಾಲ್ವರು ಕಿರಾತಕರು, ಮತ್ತು ಬರಿಸುವ ಜ್ಯೂಸ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆ. ಘಟನೆಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕೊಪ್ಪಳ ಡಿವೈಎಸ್​ಪಿ ಮುತ್ತಣ್ಣ ಸರವಗೋಳ ಭೇಟಿ ನೀಡಿದ್ದಾರೆ. ತಡರಾತ್ರಿ ಮಹಿಳೆ ಕೊಟ್ಟ ದೂರಿನನ್ವಯ ಲಕ್ಷ್ಮಣ ಎಂಬಾತ ಸೇರಿ ನಾಲ್ವರ ವಿರುದ್ದ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ನಾಲ್ವರು ಕಾಮುಕರನ್ನು ಯಲಬುರ್ಗಾ ಪೊಲೀಸರು ಬಂಧಿಸಿದ್ದಾರೆ. ಪರಿಚಿತರೇ ಆಗಿದ್ದ ಲಕ್ಷ್ಮಣ ಸೇರಿ ನಾಲ್ವರ ವಿರುದ್ದ ಸಂತ್ರಸ್ತ ಮಹಿಳೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕುಷ್ಟಗಿ ಹಾಗೂ ಮದ್ಲೂರ ಸೀಮಾದ ಪಾಳು ಬಿದ್ದ ಮನೆಯಲ್ಲಿ ಯಾವುದೋ ತರಹದ ಜ್ಯೂಸ್ ಕುಡಿಸಿ ಅತ್ಯಾಚಾರ ಎಸಗಿದ್ದಾರೆಂದು ದೂರು ನೀಡಿದ್ದಾರೆ.

ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಕಾಮುಕರ ಬಂಧನ

ದೂರು ದಾಖಲಾದ ಬಳಿಕ ಕೊಪ್ಪಳ ಎಸ್​ಪಿ ಮೂರು ತಂಡಗಳನ್ನು ರಚನೆ ಮಾಡಿದ್ದರು. ಕೆಲವೇ ಗಂಟೆಗಳಲ್ಲಿ ಆರೋಪಿಗಳಾದ ಲಕ್ಷ್ಮಣ, ಬಸವರಾಜ್, ಶಿವಕುಮಾರ್ ಹಾಗೂ ಭೀಮಪ್ಪರನ್ನು ಪೊಲೀಸರು ಬಂದಿಸಿದ್ದಾರೆ. ಲಕ್ಷ್ಮಣ ಹಾಗೂ ಬಸವರಾಜ್ ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದವರು. ಭೀಮಪ್ಪ ಹಾಗೂ ಶಶಿಕುಮಾರ್ ಯಲಬುರ್ಗಾ ತಾಲೂಕಿನ ಹನುಮಾಪೂರ ಗ್ರಾಮದವರು ಎನ್ನಲಾಗಿದೆ.

ಗ್ಯಾಂಗ್ ರೇಪ್ ಸುತ್ತ ಹಲವು ಅನುಮಾನ

ಗ್ಯಾಂಗ್ ರೇಪ್ ಸುತ್ತ ಹಲವು ಅನುಮಾನಗಳೂ ಹುಟ್ಟಿಕೊಂಡಿವೆ. ಮಹಿಳೆ ಹೊಸಪೇಟೆಯಿಂದ ಕುಷ್ಟಗಿಗೆ ಯಾಕೆ ಬಂದರು? ಅಲ್ಲಿಂದ ಯಲಬುರ್ಗಾ ತಾಲೂಕಿಗೆ ಕರೆತಂದಿದ್ದು ಯಾಕೆ ಎಂಬ ಅನುಮಾನ ಹುಟ್ಟಿಕೊಂಡಿದೆ. ಕೀಚಕರು ರೋಣ ತಾಲೂಕಿನಿಂದ ಕುಷ್ಟಗಿಗೆ ಬಂದಿದ್ದು ಯಾಕೆ ಎಂಬುದೂ ಯಕ್ಷ ಪ್ರಶ್ನೆಯಾಗಿದೆ. ಸಂತ್ರಸ್ತ ಮಹಿಳೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡತಿದ್ದರು ಎನ್ನಲಾಗಿದೆ. ಸಂತ್ರಸ್ತ ಮಹಿಳೆಯ ಬೂಟು, ಮೈಮೇಲೆ ಇರೋ ಬಟ್ಟೆ ಹೋಮ್ ಗಾರ್ಡ್ ಎಂಬುದಕ್ಕೆ ಸಾಕ್ಷ್ಯ ನೀಡಿವೆ. ಹೀಗಾಗಿ ಹೋಮ್ ಗಾರ್ಡ್ ಆಗಿ ಕೆಲಸಕ್ಕೆ ಬಂದ ಮಹಿಳೆ ಮೇಲೆ ಕಿರಾತಕರು ಅತ್​ಯಾಚಾರ ಮಾಡಿದ್ದಾರಾ ಎಂಬ ಅನುಮಾನವೂ ಇದೆ. ಆದರೆ, ಸಂತ್ರಸ್ತ ಮಹಿಳೆ ಹೋಮ್ ಗಾರ್ಡ್ ಅಲ್ಲ. ಹೋಮ್ ಗಾರ್ಡ್ ಕೆಲಸಕ್ಕೆ ಸೇರಲು ತಯಾರಿ ನಡೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತ ಮಹಿಳೆಯ ಪತಿಗೆ ಇದ್ಯಾವ ವಿಷಯವೂ ಗೊತ್ತೇ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಒಬ್ಬನನ್ನೇ ಮದುವೆಯಾಗಿದ್ದ ಶಿರಸಿಯ ಅಕ್ಕ-ತಂಗಿ! ಭೀಕರವಾಗಿ ಕೊಲೆಯಾದ ಎರಡನೇ ಹೆಂಡತಿ

ಒಟ್ಟಾರೆಯಾಗಿ, ಯಲಬುರ್ಗಾದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಹಲವು ಅನುಮಾನ ಹುಟ್ಟು ಹಾಕಿದೆ. ಸದ್ಯ ಸಂತ್ರಸ್ತ ಮಹಿಳೆಗೆ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು