AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾವಳಿ: ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು!

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 16ನೇ ವಾರ್ಡ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ನೆಮ್ಮದಿ ಕಳೆದುಕೊಂಡ ಸ್ಥಳೀಯ ಮಹಿಳೆಯರು ಬೀದಿಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕಿರಾಣಿ ಅಂಗಡಿ ಹಾಗೂ ಮನೆಗಳಲ್ಲೇ ರಾಜಾರೋಷ್ಠಿಯಾಗಿ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಮತ್ತು ಪೊಲೀಸ್ ಇಲಾಖೆ ಮೌನ ವಹಿಸಿದೆ ಎಂದು ಮಹಿಳೆಯರು ಕಣ್ಣೀರು ಹಾಕಿದ್ದು, ತಕ್ಷಣವೇ ದಂಧೆಗೆ ಬ್ರೇಕ್ ಹಾಕುವಂತೆ ಆಗ್ರಹಿಸಿದ್ದಾರೆ.

ಕನಕಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾವಳಿ: ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು!
ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು
ಶಿವಕುಮಾರ್ ಪತ್ತಾರ್
| Edited By: |

Updated on: Jul 15, 2026 | 12:52 PM

Share

ಮುಖ್ಯಾಂಶಗಳು

  • ಕನಕಗಿರಿಯಲ್ಲಿ ಕಿರಾಣಿ ಅಂಗಡಿ, ಮನೆಗಳಲ್ಲೇ ಅಕ್ರಮ ಮದ್ಯ ಮಾರಾಟ ಹಾವಳಿ.
  • ಕುಡುಕರ ಕಾಟದಿಂದ ರೋಸಿಹೋಗಿ ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು.
  • ಅಕ್ರಮ ದಂಧೆಗೆ ಅಬಕಾರಿ ಇಲಾಖೆ ಅಧಿಕಾರಿಗಳ ಮೌನವೇ ಶ್ರೀರಕ್ಷೆ ಎಂಬ ಆರೋಪ.

ಕೊಪ್ಪಳ, ಜುಲೈ 15: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಮದ್ಯ ಮಾರಾಟ ಜಾಲ ಹೆಮ್ಮರವಾಗಿ ಬೆಳೆದಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಬದುಕು ನಡೆಸುವುದೇ ದುಸ್ತರವಾಗಿದೆ. ಪಟ್ಟಣದ 16 ನೇ ವಾರ್ಡ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಮನೆಗಳೇ ಈಗ ಮದ್ಯದ ಅಡ್ಡೆಗಳಾಗಿ ಮಾರ್ಪಟ್ಟಿವೆ. ಇದರಿಂದ ರೋಸಿಹೋದ ಸ್ಥಳೀಯ ಮಹಿಳೆಯರು ಇಂದು ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಗಲ್ಲಿ ಗಲ್ಲಿಗಳಲ್ಲೂ ರಾಜಾರೋಷವಾಗಿ ದಂಧೆ

ಕನಕಗಿರಿಯಲ್ಲಿ ಲೈಸೆನ್ಸ್ ಇಲ್ಲದಿದ್ದರೂ ಪ್ರತಿಯೊಂದು ಗಲ್ಲಿಗಳಲ್ಲಿ, ಸಣ್ಣ ಪುಟ್ಟ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಅಕ್ರಮ ದಂಧೆಯ ದೃಶ್ಯಗಳನ್ನು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಸಾರ್ವಜನಿಕವಾಗಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಾನೂನಿನ ಯಾವುದೇ ಭಯವಿಲ್ಲದೆ ಸಣ್ಣ ಮಕ್ಕಳ ಕೈಯಲ್ಲೂ ಮದ್ಯ ಸಿಗುವಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮನೆಗಳಲ್ಲಿ ಊಟಕ್ಕೂ ಗತಿಯಿಲ್ಲ

ಸ್ಥಳೀಯ ಮಹಿಳೆಯರು ಕಣ್ಣೀರು ಹಾಕುತ್ತಾ, ನಮ್ಮ ವಾರ್ಡ್‌ನಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ. ಮನೆ ಮನೆಗಳಲ್ಲೂ ಮದ್ಯ ಸಿಗುತ್ತಿರುವುದರಿಂದ ಪುರುಷರು ದುಡಿದ ಹಣವನ್ನೆಲ್ಲಾ ಕುಡಿತಕ್ಕೆ ಸುರಿಯುತ್ತಿದ್ದಾರೆ. ಇತ್ತ ಮನೆಯಲ್ಲಿ ಊಟಕ್ಕೂ ಗತಿಯಿಲ್ಲದಂತಾಗಿದೆ. ಸಂಜೆ ವೇಳೆಗೆ ಹೆಣ್ಣುಮಕ್ಕಳು, ವಿದ್ಯಾರ್ಥಿನಿಯರು ರಸ್ತೆಯಲ್ಲಿ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಈ ಅಕ್ರಮ ಮಾರಾಟವನ್ನು ಬಂದ್ ಮಾಡಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರ ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲೇ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ.

ಪ್ರತಿಭಟನೆಯಲ್ಲಿ ಸ್ಥಳೀಯ ನಿವಾಸಿಗಳಾದ ಶಿಲ್ಪಾ, ಪದಮ್ಮ, ಸಿದ್ದಲಿಂಗಮ್ಮ, ಅಯ್ಯಮ್ಮ, ಗೌರಮ್ಮ, ಚಾಂದಿನಿಬೇಗಂ, ಸಾವಿತ್ರಮ್ಮ, ಶಿವಮ್ಮ, ಲಕ್ಷ್ಮೀ, ದೂಡ್ಡಲಕ್ಷ್ಮೀ, ದುರಗಮ್ಮ, ರೇಣುಕಾ, ದೀಪಮ್ಮ, ಹುಲಿಗೆಮ್ಮ ಸೇರಿದಂತೆ ಹಲವರು ಭಾಗಿಯಾಗಿದ್ದರು. ಅಕ್ರಮ ಮದ್ಯದ ಅಡ್ಡೆಗಳ ಮೇಲೆ ತಕ್ಷಣ ದಾಳಿ ನಡೆಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ವಾರ್ಡ್‌ಗಳಲ್ಲಿ ಸೂಕ್ತ ಪೊಲೀಸ್ ಗಸ್ತು ವ್ಯವಸ್ಥೆ ಜಾರಿಗೊಳಿಸಬೇಕು ಎನ್ನುವುದು ಇವರ ಮುಖ್ಯ ಬೇಡಿಕೆಯಾಗಿದೆ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಈ ಅಕ್ರಮ ದಂಧೆಗೆ ಬ್ರೇಕ್ ಹಾಕುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?