Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಪ್ಪಳದ ಮಹಿಳೆ: ಅಂಗಾಂಗ ದಾನ

ಒಂದಡೆ ಆಸ್ಪತ್ರೆಯ ಸಿಬ್ಬಂದಿಯಿಂದ ಗೌರವಪೂರ್ಣ ವಿದಾಯ, ಇನ್ನೊಂದಡೆ ಕುಟುಂಬದವರ ಆಕ್ರಂದನ. ಪಾರ್ಥಿವ ಶರೀರ ನೋಡಿ, ಅನೇಕರು ಕಣ್ಣೀರು ಹಾಕುತ್ತಿದ್ದರೇ, ಇನ್ನು ಕೆಲವರು ಕುಟುಂಬದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಇದಕ್ಕೆ ಕಾರಣ, ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟ ಮಹಿಳೆಯ ಅಂಗಾಂಗ ದಾನ. ಸ್ಟೋರಿ ಓದಿ.

ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಪ್ಪಳದ ಮಹಿಳೆ: ಅಂಗಾಂಗ ದಾನ
ಗೀತಾ ಸಂಗನಗೌಡರ್​
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Dec 25, 2024 | 12:22 PM

ಕೊಪ್ಪಳ, ಡಿಸೆಂಬರ್​ 25: ಕೆಲವರು ಇದ್ದಾಗಲೂ ತಮ್ಮ ಜೀವನವನ್ನು ಸಾರ್ಥಕವಾಗಿಸಿಕೊಳ್ಳುತ್ತಾರೆ. ಸತ್ತಮೇಲೂ ಕೂಡಾ ಸಾರ್ಥಕ ಮಾಡಿಕೊಳ್ಳುತ್ತಾರೆ. ಹೌದು, ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿ ಮೆದುಳು ನಿಷ್ಕ್ರಯಗೊಂಡು ಕೋಮಾಕ್ಕೆ ಜಾರಿದ್ದ ಕೊಪ್ಪಳದ (Koppal) ಭಾಗ್ಯ ನಗರದ ನಿವಾಸಿ, ಗೀತಾ ಸಂಗನಗೌಡರ (42) ಎಂಬುವರು ಸೋಮವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿಧನದ ಬಳಿಕವೂ ಅಂಗಾಂಗಗಳು ಜೀವಂತವಾಗಿ ಇರಲಿ ಅಂತ ಕುಟುಂಬ, ಗೀತಾ ಸಂಗನಗೌಡರ ಅವರ ಅಂಗಾಂಗಗಳನ್ನು ದಾನ ಮಾಡಿದೆ. ಅಂಗಾಂಗಗಳು ಏಳು ಜನರ ಜೀವಕ್ಕೆ ಆಧಾರವಾಗಿವೆ.

ಡಿಸೆಂಬರ್ 15 ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮಗಳನ್ನು ಮಾತನಾಡಿಸಿಕೊಂಡು, ಶಿವಮೊಗ್ಗ ಮಾರ್ಗವಾಗಿ ಗೀತಾ ಮತ್ತು ಅವರ ಪತಿ ಸೇರಿದಂತೆ ನಾಲ್ಕು ಜನರ ಕುಟುಂಬ ಮರಳಿ ಕೊಪ್ಪಳಕ್ಕೆ ಬರುತ್ತಿದ್ದರು.

ಆದರೆ, ಶಿವಮೊಗ್ಗ ಹೊರವಲಯದಲ್ಲಿ ಎದುರಿಗೆ ಬಂದಿದ್ದ ಇನ್ನೋವಾ ಕಾರು, ಗೀತಾ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಗೀತಾ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದರೇ, ಗೀತಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಗೀತಾ ಅವರ ಮೆದುಳು ನಿಷ್ಕ್ರೀಯಗೊಂಡಿದ್ದರಿಂದ, ಕೋಮಾಕ್ಕೆ ಜಾರಿದ್ದರು. ಹೀಗಾಗಿ, ಡಿಸೆಂಬರ್ 19 ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಯಿತು.

ಆದರೆ, ಮೆದುಳು ನಿಷ್ಕ್ರಿಯಗೊಂಡಿದ್ದರಿಂದ, ಗೀತಾರನ್ನು ಉಳಿಸಿಕೊಳ್ಳಲು ವೈದ್ಯರ ಪ್ರಯತ್ನ ಫಲ ನೀಡಲಿಲ್ಲ. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಆಸ್ಪತ್ರೆಯ ವೈದ್ಯರು, ಅಂಗಾಂಗ ದಾನದ ಬಗ್ಗೆ ಕುಟುಂಬದಸ್ಥರಿಗೆ ಹೇಳಿದರು. ಇದಕ್ಕೆ ಗೀತಾ ಕುಟುಂಬದವರು ಒಪ್ಪಿಗೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲೇ ಮೊದಲ ಬಾರಿಗೆ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಯುವಕ

ಹೀಗಾಗಿ, ಸೋಮವಾರ ಕಿಡ್ನಿ, ಲಿವರ್, ಹೃದಯ, ಕಣ್ಣುಗಳನ್ನು ತಗೆದು ಅವಶ್ಯಕತೆ ಇದ್ದ ಏಳು ಜನರಿಗೆ ಹಾಕಲಾಗಿದೆ. ಮಂಗಳವಾರ ಮುಂಜಾನೆ ಮೃತ ಗೀತಾರ ಪ್ರಾರ್ಥಿವ ಶರೀರಕ್ಕೆ ಗೌರವಪೂರ್ಣ ನಮನ ಸಲ್ಲಿಸಿ, ಪ್ರಾರ್ಥಿವ ಶರೀರವನ್ನು ಕೊಪ್ಪಳಕ್ಕೆ ಕಳುಹಿಸಿ ಕೊಟ್ಟರು. ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಾರ್ಥಿವ ಶರೀರವನ್ನು ಕೊಪ್ಪಳಕ್ಕೆ ತಂದ ಕುಟುಂಬ, ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಕುಟುಂಬದವರು ಮತ್ತು ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ಒಂದಡೆ ಗೀತಾಳನ್ನು ಕಳೆದುಕೊಂಡು ಕುಟುಂಬ ಕಂಗಾಲಾಗಿದ್ದರೇ, ಇನ್ನೊಂದಡೆ ಅವರ ಅಂಗಾಂಗಗಳು ಏಳು ಜನರಿಗೆ ಜೀವ ಉಳಿಸಿಕೊಳ್ಳಲು ನೆರವಾಗಿದ್ದು ಕುಟುಂಬದವರಿಗೆ ಸ್ವಲ್ಪ ತೃಪ್ತಿ ನೀಡಿದೆ. ಸಾವಿನಲ್ಲಿ ಸಾರ್ಥಕತೆ ಮೆರೆಯುವ ಮೂಲಕ ಗೀತಾ ಏಳು ಜನರ ಜೀವಕ್ಕೆ ನೆರವಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Wed, 25 December 24

ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ