AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಯಲ್ಲಾಲಿಂಗ ಕೊಲೆ ಕೇಸ್​​: ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ 9 ಆರೋಪಿಗಳು ಖುಲಾಸೆ

ಕೊಪ್ಪಳದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷ 8 ತಿಂಗಳ ನಂತರ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆ ಕೇಸ್ ಖುಲಾಸೆಗೊಳಿಸಲಾಗಿದೆ. 2015 ಜನವರಿ 11ರಂದು ನಡೆದಿದ್ದ ಘಟನೆ ಸಾಕಷ್ಟು ಸುದ್ದಿಯಾಗಿತ್ತು. ಇದೇ ಕೇಸ್​ನಲ್ಲಿ ಸಚಿವರ ತಲೆದಂಡ ಕೂಡ ಆಗಿತ್ತು.

ಕೊಪ್ಪಳ ಯಲ್ಲಾಲಿಂಗ ಕೊಲೆ ಕೇಸ್​​: ಸಚಿವ ಶಿವರಾಜ ತಂಗಡಗಿ ಆಪ್ತ ಸೇರಿ 9 ಆರೋಪಿಗಳು ಖುಲಾಸೆ
ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ
ಶಿವಕುಮಾರ್ ಪತ್ತಾರ್
| Edited By: |

Updated on: Oct 03, 2025 | 4:30 PM

Share

ಕೊಪ್ಪಳ, ಅಕ್ಟೋಬರ್​ 03: ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಚರ್ಚೆಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ (Yallaling murder case) ಸಂಬಂಧಿಸಿದಂತೆ ಇದೀಗ ಅಂತಿಮ ತೀರ್ಪು ಪ್ರಕಟವಾಗಿದೆ. ಸಚಿವ ಶಿವರಾಜ ತಂಗಡಗಿ (Shivaraj Tangadagi) ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಎಲ್ಲಾ 9 ಆರೋಪಿಗಳನ್ನು ಕೇಸ್​ನಿಂದ ಖುಲಾಸೆ ಮಾಡಲಾಗಿದೆ. ಸೂಕ್ತ ಸಾಕ್ಷ್ಯಾಧಾರ ಇಲ್ಲದ ಹಿನ್ನೆಲೆಯಲ್ಲಿ ಕೇಸ್ ಖುಲಾಸೆ ಮಾಡಿ ಕೊಪ್ಪಳ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರ ಆದೇಶ ಹೊರಡಿಸಲಾಗಿದೆ.

ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್, ಮಹಾಂತೇಶ್ ನಾಯಕ್, ಮನೋಜ್ ಪಾಟೀಲ್, ಬಾಳನಗೌಡ, ಕಾಡ ಮಂಜ, ಯಮನೂರಪ್ಪ, ದುರ್ಗಪ್ಪ, ನಂದೀಶ್, ಪರಶರಾಮ್ ಕೇಸ್​ನಿಂದ ಖುಲಾಸೆಗೊಂಡವರು.

ಶಿವರಾಜ್ ತಂಗಡಗಿ ಸಲುವಾಗಿ ನನ್ನ ಜೈಲಿಗೆ ಹಾಕಿದ್ರು: ಹನುಮೇಶ್ ನಾಯಕ್​ 

ಈ ಕುರಿತಾಗಿ ಟಿವಿ9 ಜೊತೆಗೆ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್​ ಮಾತನಾಡಿದ್ದು, ನ್ಯಾಯದೇವತೆ ನಮಗೆ ನ್ಯಾಯ ಒದಗಿಸಿದ್ದಾಳೆ. ಬಹಳ ಸಂತೋಷ ಆಗಿದೆ. ಇದು ಸುಳ್ಳು ಕೇಸ್. ಶಿವರಾಜ್ ತಂಗಡಗಿ ಗೆದ್ದಿದ್ದು ನನ್ನ ಕ್ಷೇತ್ರದಿಂದ. ನನ್ನ ಮೇಲೆ ಸುಳ್ಳು ಆರೋಪ ಮಾಡಿದರು. ಶಿವರಾಜ್ ತಂಗಡಗಿ ಸಲುವಾಗಿ ನನ್ನ ಜೈಲಿಗೆ ಹಾಕಿದ್ದರು ಎಂದರು.

ಯಲ್ಲಾಲಿಂಗನದು ಕೊಲೆ ಅಲ್ಲ, ಆತ್ಮಹತ್ಯೆ: ಆತನ ಅಣ್ಣನೇ ಸಾಕ್ಷಿ ಹೇಳಿದ್ದಾನೆ ಎಂದ ವಕೀಲ

ಇನ್ನು ಹನುಮೇಶ್ ನಾಯಕ್​ ಪರ ವಕೀಲ ಗಂಗಾಧರ್​ ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿ ಯಲ್ಲಾಲಿಂಗ ಕೇಸ್​​ ಇದು ಕೊಲೆಯಲ್ಲ, ಆತ್ಮಹತ್ಯೆ. ಯಲ್ಲಾಲಿಂಗನ ಅಣ್ಣನೇ ನ್ಯಾಯಾಲಯಕ್ಕೆ ಹೇಳಿದ್ದಾನೆ‌. ಅದೇ ಆಧಾರದ ಮೇಲೆ ಆರೋಪಿಗಳು ನಿರ್ದೋಷಿ ಆಗಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ಕೊಲೆಯಲ್ಲಿ ಹನುಮೇಶ್ ನಾಯಕ ಪತ್ರ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ; ಪ್ರಕರಣದಲ್ಲಿ ನಾವು ಭಾಗಿಯಾದ್ದರೆ ನಮ್ಮ ಕುಟುಂಬವೇ ನಾಶವಾಗಲಿ ಎಂದು ಬರೆದುಕೊಂಡ ಹನುಮೇಶ್ ನಾಯಕ್‌ ಕುಟುಂಬ

ಪೊಲೀಸರು ಹನುಮೇಶ್ ನಾಯಕ್ ಹಾಗೂ ಸಂಗಡಿಗರ ಮೇಲೆ ಚಾರ್ಜ್ ಶೀಟ್ ಹಾಕಿದ್ದರು. ಸುದೀರ್ಘ ವಿಚಾರಣೆ ಬಳಿಕ ಇಂದು ನ್ಯಾಯಾಲಯ ನಿರಾಪರಾಧಿ ಎಂದು ತೀರ್ಪು ನೀಡಿದೆ. 76 ಜನರ ಪೈಕಿ 50 ಸಾಕ್ಷಿ ಅಭಿಯೋಜಕರ ಪರವಾಗಿ ಹೇಳಿಲ್ಲ. ಇದನ್ನ ನ್ಯಾಯಾಲಯ ಮನಗಂಡು ತೀರ್ಪು ನೀಡಿದೆ ಎಂದು ವಕೀಲ ಗಂಗಾಧರ್ ಹೇಳಿದ್ದಾರೆ.

ಪ್ರಕರಣ ಹಿನ್ನಲೆ 

ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ನಿವಾಸಿಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ, ತಮ್ಮೂರಿನ ಭ್ರಷ್ಟಾಚಾರ ಕುರಿತು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದ. ಬಳಿಕ 2015 ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗ ಮೃತದೇಹ ಪತ್ತೆ ಆಗಿತ್ತು. ಮೊದಲಿಗೆ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.

ಯಲ್ಲಾಲಿಂಗ ಕೊಲೆಗೆ ಕಾರಣರಾದವರ ಹೆಸರನ್ನು ಡೆತ್ ನೋಟ್​ನಲ್ಲಿ ಬರೆದಿದ್ದ, ಆದರೆ ಪೊಲೀಸರು ಈ ವಿಷಯ ಮುಚ್ಚಿ ಹಾಕಿದ್ದರು. ಮೊದಲು ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಕೊಪ್ಪಳ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಯಾವಾಗ ದೂರಿನಲ್ಲಿ ತಂಗಡಗಿ ಆಪ್ತ ಹನುಮೇಶ್ ನಾಯಕ್ ಹೆಸರು ಕೇಳಿಬರುತ್ತೋ, ಅಲ್ಲಿಂದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿತ್ತು.

ಇದನ್ನೂ ಓದಿ: ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿ ಮದುವೆಯಲ್ಲಿ ಪೊಲೀಸರು ಭಾಗಿ

ಬಳಿಕ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ್ ನಾಯಕ್, ಮಹಾಂತೇಶ್ ನಾಯಕ್, ಮನೋಜ್ ಪಾಟೀಲ್, ಬಾಳನಗೌಡ, ಕಾಡ ಮಂಜ, ಯಮನೂರಪ್ಪ, ದುರ್ಗಪ್ಪ, ನಂದೀಶ್ ಮತ್ತು ಪರಶರಾಮ್ ವಿರುದ್ಧ ಕೇಸ್ ದಾಖಲಾಗಿತ್ತು. ಈ ಹಿಂದೆ ಇದೇ ಕೇಸ್​ನಲ್ಲಿ ಶಿವರಾಜ ತಂಗಡಗಿ ಸಚಿವಸ್ಥಾನ ಕಳೆದುಕೊಂಡಿದ್ದರು. ಇದೀಗ 10 ವರ್ಷ 8 ತಿಂಗಳ ನಂತರ ಸೆಷನ್ಸ್ ಕೋರ್ಟ್ 9 ಆರೋಪಿಗಳನ್ನು ಕೇಸ್​ನಿಂದ ಖುಲಾಸೆಗೊಳಿ ತೀರ್ಪು ಪ್ರಕಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ