Koppala News: ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದಡಿ ಸರ್ಕಾರಿ ನೌಕರ ಅಮಾನತು
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ನಿರಂತರವಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಆರೋಪದಡಿ ಸರ್ಕಾರಿ ನೌಕರನಿಗೆ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ(Assembly Election) ವೇಳೆ ನಿರಂತರವಾಗಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಆರೋಪದಡಿ ಸರ್ಕಾರಿ ನೌಕರ(Government Employee)ನಿಗೆ ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ. ಹೌದು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಅಯ್ಯಣ್ಣ ಮರದೂರು ಎಂಬಾತ ಚುನಾವಣಾ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಎಂದು ಆರೋಪಿಸಿ ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆಯಿಂದ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ, ಕಲಬುರಗಿ ವಿಭಾಗದ ಆಯುಕ್ತ ಆನಂದ ಪ್ರಕಾಶ ಮೀನಾ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಪ್ರಚಾರ ಸಂಬಂಧ ಅಮಾನತ್ತಾದ ಅಧಿಕಾರಿಗಳು
ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕ ಅಮಾನತು
ಯಾದಗಿರಿ: ಇದೊಂದೆ ಅಲ್ಲ, ಅನೇಕ ಅಧಿಕಾರಿಗಳು ಚುನಾವಣೆ ವೇಳೆ ಪ್ರಚಾರದಲ್ಲಿ ತೊಡಗಿ ಅಮಾನತು ಹೊಂದಿದ್ದಾರೆ. ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕನ ಪರವಾಗಿ ಪ್ರಚಾರ ಮಾಡಿದ್ದ ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕ ಸೂರ್ಯಪ್ರಕಾಶ್ನನ್ನ ಅಮಾನತು ಮಾಡಲಾಗಿತ್ತು. ಇತ ಪ್ರಚಾರದಲ್ಲಿ ಭಾಗಿಯಾಗಿದ್ದ ಫೋಟೋ ವೈರಲ್ ಆಗುತ್ತಿದ್ದಂತೆ ಯಾದಗಿರಿ ವಿಭಾಗೀಯ ನಿಯಂತ್ರಣಾಧಿಕಾರಿ ಇತನನ್ನ ಅಮಾನತುಗೊಳಿಸಿದ್ದರು.
ಇದನ್ನೂ ಓದಿ:Koppala News: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ; ಪಿಡಿಓ ಅಮಾನತು
ವಾರ್ಡನ್ ಅಮಾನತು
ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಎನ್ನುವವರನ್ನ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಅವರನ್ನು ಅಮಾನತ್ತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದರು. ಮಾರ್ಚ್ 21 ರಂದು ಸೇಡಂ ತಾಲೂಕಿನ ಮಳಖೇಡ್ ಆದಿತ್ಯಾ ಕಾಲೋನಿಯಲ್ಲಿ ರಾಜಕೀಯ ಪಕ್ಷದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು. ಈ ಹಿನ್ನೆಲೆ ಅಮಾನತು ಮಾಡಲಾಗಿತ್ತು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ