AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಆನೆಗೊಂದಿಯ ಕಡೆಬಾಗಿಲು ಬೆಟ್ಟದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ

ಗಂಗಾವತಿ(Gangavati) ತಾಲೂಕಿನಲ್ಲಿರುವ ಆನೆಗೊಂದಿಯ ಕಡೆಬಾಗಿಲು ಬೆಟ್ಟದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ. ಕಿಷ್ಕಿಂದಾ(Kishkindha) ಯುವ ಚಾರಣ ಬಳಗ ಬೆಟ್ಟದಲ್ಲಿ ಚಾರಣ ನಡೆಸಿದ ವೇಳೆ ಈ ಶಾಸನ ಪತ್ತೆಯಾಗಿದೆ. ಇದರಲ್ಲಿ ಕಿಷ್ಕಿಂದಾ ಪ್ರದೇಶದ ಸ್ಥಳಗಳನ್ನ ಉಲ್ಲೇಖಿಸಿ ಕೆತ್ತಲಾಗಿದೆ.

ಕೊಪ್ಪಳ: ಆನೆಗೊಂದಿಯ ಕಡೆಬಾಗಿಲು ಬೆಟ್ಟದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ
ವಿಜಯನಗರ ಕಾಲದ ಶಾಸನ ಪತ್ತೆ
ಸಂಜಯ್ಯಾ ಚಿಕ್ಕಮಠ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 07, 2024 | 11:19 AM

Share

ಕೊಪ್ಪಳ, ಏ.07: ಜಿಲ್ಲೆಯ ಗಂಗಾವತಿ(Gangavati) ತಾಲೂಕಿನಲ್ಲಿರುವ ಆನೆಗೊಂದಿಯ ಕಡೆಬಾಗಿಲು ಬೆಟ್ಟದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ. ಕಿಷ್ಕಿಂದಾ(Kishkindha) ಯುವ ಚಾರಣ ಬಳಗ ಬೆಟ್ಟದಲ್ಲಿ ಚಾರಣ ನಡೆಸಿದ ವೇಳೆ ಈ ಶಾಸನ ಪತ್ತೆಯಾಗಿದ್ದು, ಇಂದಿನ ಕಾಲಮಾನದ ಪ್ರಕಾರ 1527 ರ ಕಾಲಾವಧಿಯ ಶಿಲಾಶಾಸನ ಇದಾಗಿದೆ. ಇದರಲ್ಲಿ ಕಿಷ್ಕಿಂದಾ ಪ್ರದೇಶದ ಸ್ಥಳಗಳನ್ನ ಉಲ್ಲೇಖಿಸಿ ಕೆತ್ತಲಾಗಿದೆ.

ಶಾಸನದಲ್ಲಿನ ಮಹತ್ವ ಗುರುತಿಸಿದ ಇತಿಹಾಸ ತಜ್ಞ ಶರಣಬಸಪ್ಪ ಕೊಲ್ಕಾರ್‌‌

ಇನ್ನು ಶಾಸನದಲ್ಲಿನ ಮಹತ್ವವನ್ನ ಇತಿಹಾಸ ತಜ್ಞ ಶರಣಬಸಪ್ಪ ಕೊಲ್ಕಾರ್‌‌ ಗುರುತಿಸಿದ್ದಾರೆ. ಆನೆಗೊಂದಿಯ ಮಹಾ ಪ್ರಧಾನ ಲಕ್ಕಿಶೆಟ್ಟಿಯ ಮಗ ವಿಜಯನಾಥ, ಬೆಟ್ಟದ ಮೇಲಿನ ವೀರಭದ್ರ ದೇವರ ಆರಾಧಕನಾಗಿದ್ದರ ಬಗ್ಗೆ ಈ ಶಿಲೆಯಲ್ಲಿ ಉಲ್ಲೇಖ ಮಾಡಲಾಗಿದೆಯಂತೆ. ಜೊತೆಗೆ ಆನೆಗೊಂದಿಯನ್ನ ಹಸ್ತಿನಾತ ಎಂದು ಕರೆಯಲಾಗುತ್ತಿದ್ದರ ಬಗ್ಗೆಯೂ ಉಲ್ಲೇಖಿಸಲಾಗಿದೆ. ಮತ್ತು ಕಿಷ್ಕಿಂದೆ ಪರ್ವತದ ಬಗ್ಗೆ ಕೂಡ ಈ ಶಾಸನದಲ್ಲಿ ಕಾಣಬಹುದಾಗಿದೆ. ಈ ಶಿಲಾ ಶಾಸನದಲ್ಲಿ ರಾಮಾಯಣ ಕಾಲದ ಸ್ಥಳಗಳ ಬಗ್ಗೆ ಇರುವುದರಿಂದ ರಾಮಾಯಣ ಕಾಲದ ಸ್ಥಳಗಳನ್ನು ಪತ್ತೆ ಹಚ್ಚಲು ಅನುಕೂಲವಾಗಿದೆ.

ಇದನ್ನೂ ಓದಿ:ರಾಯಚೂರಿನಲ್ಲಿ ಶ್ರೀರಾಮನ ಕುರುಹು ಪತ್ತೆ: ಅಯೋಧ್ಯಾಪತಿ ಬಿಟ್ಟ ಬಾಣಕ್ಕೆ ಬಂಡೆಯಿಂದ ಚಿಮ್ಮಿತು ನೀರು

ಬೈಕ್​​ನಲ್ಲಿ ತೆರಳುತ್ತಿದ್ದವರ ಬ್ಯಾಗ್ ಪರಿಶೀಲನೆ; ದಾಖಲೆಯಿಲ್ಲದ ನಗದು ಪತ್ತೆ

ತುಮಕೂರು: ಮಧುಗಿರಿ ರಸ್ತೆಯಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದ 4 ಲಕ್ಷದ 80 ಸಾವಿರ ಹಣ ಜಪ್ತಿ ಮಾಡಲಾಗಿದೆ. ಖಾಸಗಿ ಬ್ಯಾಂಕ್​​ನಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಬೈಕ್​ನ್ನು ತಡೆದು ಪರಿಶೀಲನೆ ನಡೆಸಿದಾಗ ಆತನ ಬ್ಯಾಗ್​ನಲ್ಲಿ​ ಪತ್ತೆಯಾಗಿದೆ. ಆದರೆ, ಇದು ಖಾಸಗಿ ಬ್ಯಾಂಕ್​ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Sun, 7 April 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ