ಕೊಪ್ಪಳದಲ್ಲಿ ಲೋಕಾಯಕ್ತ ದಾಳಿ: ಲೇಔಟ್ಗೆ ಪರವಾನಗಿ ನೀಡಲು ಲಂಚ ಕೇಳಿದ್ದ ಅಧಿಕಾರಿ ಬಲೆಗೆ
ರವಿಚಂದ್ರ ಎಂಬವರಿಂದ ಮೂರು ಲಕ್ಷ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ರಮೇಶ್ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರಾಯಚೂರು ಲೋಕಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಕೊಪ್ಪಳ, ಮೇ 30: ಕೊಪ್ಪಳದಲ್ಲಿ (Koppal) ಲೋಕಾಯುಕ್ತ ಪೊಲೀಸರು (Lokayukta Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೇಔಟ್ಗೆ ಪರವಾನಗಿ ನೀಡಲು ಲಂಚ (Bribery) ಕೇಳಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ರಮೇಶ್ ಬಸವವಗೌಡ ಎಂದು ಗುರುತಿಸಲಾಗಿದೆ.
ರಮೇಶ್ ಇಲಾಖೆಯಲ್ಲಿ ಟೌನ್ ಪ್ಲ್ಯಾನರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಲೇಔಟ್ ಪರವಾನಗಿ ನೀಡಲು ಎಂಟು ವ್ಯಕ್ತಿಯೊಬ್ಬರ ಬಳಿ ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದರು. ಖಾಸಗಿ ಸಹಾಯಕನ ಮೂಲಕ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರ ಮೂಲದ ರವಿಚಂದ್ರ ಅನ್ನೋರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ರವಿಚಂದ್ರ ಎಂಬವರಿಂದ ಮೂರು ಲಕ್ಷ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ರಮೇಶ್ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ರಾಯಚೂರು ಲೋಕಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
ಇದನ್ನೂ ಓದಿ: ಕೊಪ್ಪಳ: ತನ್ನನ್ನು ಬಿಟ್ಟು ಸಹೋದರನನ್ನು ಮದ್ವೆಯಾಗಿದ್ದಕ್ಕೆ ಮೂವರನ್ನ ಕೊಂದ ಭಗ್ನ ಪ್ರೇಮಿ
ಎರಡು ದಿನ ಹಿಂದಷ್ಟೇ ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸ್, ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಕೆಲಸ ಕಾರ್ಯಗಳು ವಿಳಂಬವಾಗುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದ ಕಾರಣ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಇದೀಗ ಕೊಪ್ಪಳದಲ್ಲಿಯೂ ಅಧಿಕಾರಿಯನ್ನು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ