AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿಗಟ್ಟಲೇ ಆಸ್ತಿ ಪತ್ತೆ

ಕೆಆರ್​ಡಿಎಲ್(KRDL) ಕಾರ್ಯನಿರ್ವಾಹಕ ಇಂಜಿನಿಯರ್​(EE) ಝರಣಪ್ಪ ಚಿಂಚೋಳಿಕರ್ ಮನೆ ಮೇಲೆ ಬರೊಬ್ಬರಿ 26 ಗಂಟೆಗಳ ಕಾಲ ಲೋಕಾಯುಕ್ತ ದಾಳಿ ನಡೆಸಿದ್ದು, 3.5 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಕೆಆರ್​ಡಿಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿಗಟ್ಟಲೇ ಆಸ್ತಿ ಪತ್ತೆ
ಕೊಪ್ಪಳ ಲೋಕಾಯುಕ್ತ ದಾಳಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 01, 2023 | 11:28 AM

Share

ಕೊಪ್ಪಳ: ಕೆಆರ್​ಡಿಎಲ್(KRDL) ಕಾರ್ಯನಿರ್ವಾಹಕ ಇಂಜಿನಿಯರ್​(EE) ಝರಣಪ್ಪ ಚಿಂಚೋಳಿಕರ್ ಮನೆ ಮೇಲೆ ಬರೊಬ್ಬರಿ 26 ಗಂಟೆಗಳ ಕಾಲ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ಹೌದು ಝರಣಪ್ಪ ಚಿಂಚೋಳಿಕರ್ ಬಳಿ 3.5 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಕಲಬುರಗಿ ನಗರದಲ್ಲಿ 4 ಸಾವಿರ ಚದರ ಅಡಿ ನಿರ್ಮಾಣ ಹಂತದ ಮನೆ, ಬೀದರ್​​ನಲ್ಲಿ 2 ಅಂತಸ್ತಿನ ಮನೆ, ಫಾರ್ಮ್​ಹೌಸ್ ದಾಖಲೆ ಪತ್ರ ಸಿಕ್ಕಿದೆ. ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದ ಬಳಿಯ ಫಾರ್ಮ್​​ಹೌಸ್ ನಿರ್ಮಾಣ ಮಾಡಲಾಗಿದ್ದು, ಖಾಸಗಿ ಬ್ಯಾಂಕ್​​​ ಖಾತೆಯಲ್ಲಿ ಬರೊಬ್ಬರಿ 1.5 ಕೋಟಿ ನಿಶ್ಚಿತ ಠೇವಣಿ ಇಟ್ಟಿದ್ದಾರೆ.

ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

ತುಮಕೂರು/ಹಾವೇರಿ:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ(ಮೇ.31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ  ಮಾಡಿದ್ದರು. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ:ಕೆಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು: ಸುಮೋಟೋ ಕೇಸ್ ತನಿಖೆ ಚುರುಕುಗೊಳಿಸಿದ ಲೋಕಾಯುಕ್ತ

ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು.

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ

ಇನ್ನು ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಎರಡು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ನಗರದ ಬಸವೇಶ್ವರನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿತ್ತು. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ, ಕಡತಗಳ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ:Lokayukta Raid: ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿಯಾಗಿತ್ತು. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ಮಾಡಿ‌ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೂ ದಾಳಿ

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿಯಾಗಿತ್ತು. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:27 am, Thu, 1 June 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?