AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹುಲಿಹೈದರ ಗುಂಪು‌ ಘರ್ಷಣೆ ಘಟನೆ ವೇಳೆ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಮೇಲೂ ಪ್ರಕರಣ ದಾಖಲಾಗಿ ಜೈಲಿಗೆ ಕಳಿಸುವ ಭೀತಿಯಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ನಂತರ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ನಾಗರಾಜ ಹನುಮಂತಪ್ಪ
Follow us
TV9 Web
| Updated By: ಆಯೇಷಾ ಬಾನು

Updated on: Nov 08, 2022 | 12:03 PM

ಕೊಪ್ಪಳ: ಹುಲಿಹೈದರ ಗುಂಪು‌ ಘರ್ಷಣೆ ಘಟನೆ ವೇಳೆ ಗ್ರಾಮ ತೊರೆದಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಳೆದ 3 ತಿಂಗಳಿನಿಂದ ನಾಗರಾಜ ಹನುಮಂತಪ್ಪ (25) ಎಂಬ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದ. ಆದ್ರೆ ಈಗ ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ದೇಹ ಪತ್ತೆಯಾಗಿದೆ.

ಹುಲಿಹೈದರ್ ಗಲಾಟೆಯಲ್ಲಿ ಮೃತನ ತಂದೆ ಮತ್ತು ಅಣ್ಣನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಕಳೆದ 3 ತಿಂಗಳಿನಿಂದ ಮೃತ ಯುವಕನ ಅಣ್ಣ ಗೋಸಲಪ್ಪ ಜೈಲಿನಲ್ಲಿದ್ದಾರೆ. ತನ್ನ ಮೇಲೂ ಪ್ರಕರಣ ದಾಖಲಾಗಿ ಜೈಲಿಗೆ ಕಳಿಸುವ ಭೀತಿಯಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Fire Accident: ರಾಯಚೂರು ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅನಾಹುತ, ಸ್ವಲ್ಪದರಲ್ಲಿ ತಪ್ಪಿದ ಭಾರೀ ಅವಘಡ

ಘಟನೆ ಹಿನ್ನೆಲೆ

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್​ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಅನ್ಯಕೋಮಿನ ನಡುವೆ ಗುಂಪು ಘರ್ಷಣೆ ನಡೆದಿತ್ತು. ಸಂಘರ್ಷಣೆಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂಬವರು ಸಾವನ್ನಪ್ಪಿದ್ದರು. ಹಾಗೂ ಹಲವರಿಗೆ ಗಾಯಗಳಾಗಿದ್ದವು.

ಘಟನೆಯ ನಂತರ ಘರ್ಷಣೆಯಲ್ಲಿ ಭಾಗಿಯಾಗಿದ್ದ ಅನೇಕರು ಬೇರೆ ಬೇರೆ ಜಿಲ್ಲೆಗಳಿಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದರು. ಗುಂಪು ಘರ್ಷಣೆ ಸಂಬಂಧ ಅನೇಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು. ತುಮಕೂರು, ಬಾಗಲಕೋಟೆ, ಬದಾಮಿ ಜಿಲ್ಲೆಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದಾಗಿ ಮಾಹಿತಿ ಸಿಕ್ಕಿದ ನಂತರ ಪೊಲೀಸರು ರಾಜ್ಯಾದ್ಯಂತ ಹುಡುಕಾಡಿ ಅನೇಕರನ್ನು ಬಂಧಿಸಿದ್ದರು. ಆರೋಪಿಗಳ ಬಂಧನಕ್ಕೆ ಕೊಪ್ಪಳ ಎಸ್​ಪಿ ಅರುಣಾಂಗ್ಷು ಗಿರಿ ಅವರು 6 ವಿಶೇಷ ತಂಡಗಳನ್ನು ರಚಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ