Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ

ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಲೋನ್ ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ, ಮೈಕ್ರೋಫೈನಾನ್ಸ್​ ಸಿಬ್ಬಂದಿಗೆ ಥಳಿತ
ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿಯನ್ನು ಥಳಿಸುತ್ತಿರುವ ಮಹಿಳೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Sep 16, 2023 | 8:50 AM

ಕೊಪ್ಪಳ, ಸೆ.16: ಸಾಲು ಕೊಡುವ ನೆಪದಲ್ಲಿ ಮಹಿಳೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ ಮೈಕ್ರೋಫೈನಾನ್ಸ್ ಸಿಬ್ಬಂದಿಗೆ ಥಳಿಸಿದ ಘಟನೆ ಕೊಪ್ಪಳ (Koppal) ತಾಲೂಕಿನ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ. ನಾಗಮ್ಮ ಎಂಬುವರು ಸಿಬ್ಬಂದಿ ಯಮನೂರಪ್ಪಗೆ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗೋದಾವರಿ ಮೈಕ್ರೋ ಫೈನಾನ್ಸ್​ ಸಿಬ್ಬಂದಿ ಯಮನೂರಪ್ಪ ಅವರು ಲೋನ್ ಕೊಡುವ ನೆಪದಲ್ಲಿ ಮೈಕ್ರೋಫೈನಾನ್ಸ್ ಮಹಿಳಾಗುಂಪಿನ ಸದಸ್ಯೆಯಾಗಿರುವ ವಿವಾಹಿತ ಮಹಿಳೆ ಮೇಲೆ ಕೆಟ್ಟದೃಷ್ಟಿ ಇಟ್ಟಿದ್ದಾರೆ. ನಾಗಮ್ಮಳಿಗೆ ಗುಂಪಿನ ಅನುಸಾರವಾಗಿ ಲೋನ್ ಮಂಜೂರು ಆಗಿತ್ತಂತೆ. ಆದರೆ ಯಮನೂರಪ್ಪ ನಾಗಮ್ಮಳಿಗೆ ಲೋನ್ ಕೊಡಲು ತಕರಾರು ಎತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಉದ್ಯಮಿ ಗೋವಿಂದ ಪೂಜಾರಿ ರೀತಿಯಲ್ಲೆ ಟಿಕೆಟ್​ಗಾಗಿ ಲಕ್ಷ ಲಕ್ಷ ಕಳೆದುಕೊಂಡ ಬಿಜೆಪಿ ಮುಖಂಡ

ಲೋನ್ ಕೊಡುವ ನೆಪದಲ್ಲಿ ತನ್ನ ಜೊತೆ ಒಂದು ದಿನ ಕಾಲಕಳೆಯಲು ಕರೆದಿದ್ದಾನೆಂದು ಯಮನೂರಪ್ಪ ವಿರುದ್ಧ ನಾಗಮ್ಮ ಆರೋಪ ಮಾಡಿದ್ದಾರೆ. ಅಲ್ಲದೆ, ಯಮನೂರಪ್ಪ ವರ್ತನೆಗೆ ರೊಚ್ಚಿಗೆದ್ದ ನಾಗಮ್ಮ ಹಾಗೂ ಆಕೆಯ ತಾಯಿ, ಯಮನೂರಪ್ಪಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಇದ್ದರೆ ನಮ್ಮ ಬಳಿ ಹೇಳಬೇಕಿತ್ತು ಎಂದು ಆಕ್ಷೇಪಿಸಿ ಮಹಿಳೆಯ ಮನೆ ಬಳಿ ಒಂದಷ್ಟು ಜನರು ಜಮಾಯಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್