‘ಕೈ’ ಮುಖಂಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷನ ಮೇಲೆ ಹಲ್ಲೆ; ಕಟ್ಟಿಗೆಯಿಂದ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾದ ಕಿಡಿಗೇಡಿ
ಅಪರಿಚಿತ ವ್ಯಕ್ತಿಯೋರ್ವ ಕಾಂಗ್ರೆಸ್ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ ಅವರ ಮೇಲೆ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ದೊಡ್ಡಪ್ಪ ದೇಸಾಯಿ ಅವರು ಈ ಹಿಂದೆ ಸರ್ಕಾರಿ ಶಾಲೆಯ ಭೂಮಿಯ ಒತ್ತುವರಿ ಬಗ್ಗೆ ಹೋರಾಟ ಮಾಡಿದ್ದರು. ಹೀಗಾಗಿ ಹಲ್ಲೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಕೊಪ್ಪಳ, ಫೆ.07: ಕಾಂಗ್ರೆಸ್ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ (Doddappa Desai) ಅವರ ಮೇಲೆ ಹಲ್ಲೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷನಾಗಿರೋ ದೊಡ್ಡಪ್ಪ ದೇಸಾಯಿ ಅವರು ನಿನ್ನೆ ಸಂಜೆ ಮನೆಗೆ ತೆರಳುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಹಲ್ಲೆ (Assault) ನಡೆಸಿದ್ದಾನೆ. ಗಂಗಾವತಿ ಪಟ್ಟಣದ ಆನಗುಂದಿ ರಸ್ತೆಯಲ್ಲಿರುವ ಪಿಎಲ್ಡಿ ಬ್ಯಾಂಕ್ ಮುಂದೆ ಘಟನೆ ನಡೆದಿದೆ.
ದುಷ್ಕರ್ಮಿ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ. ಭೂಮಿ ಒತ್ತುವರಿದಾರರಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಸರ್ಕಾರಿ ಶಾಲೆಯ ಭೂಮಿಯ ಒತ್ತುವರಿ ಬಗ್ಗೆ ದೊಡ್ಡಪ್ಪ ದೇಸಾಯಿ ಅವರು ಹೋರಾಟ ಮಾಡಿದ್ದರು. ಹೀಗಾಗಿ ಅವರ ಮೇಲೆ ಹಲ್ಲೆ ನಡೆದಿರಬಹುದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಠಾಣೆ ಸಿಪಿಐ ಪ್ರಕಾಶ್ ಮಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಂಚ ಪಡೆಯುತ್ತಿದ್ದ KSRTC ಡಿಸಿ ‘ಲೋಕಾ’ ಬಲೆಗೆ
ಚಿಕ್ಕಮಗಳೂರು KSRTC ಡಿಸಿ ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಲಾಕ್ ಆಗಿದ್ದಾನೆ. ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚ ಸ್ವೀಕರಿಸುವಾಗ ಡಿಸಿ ಬಸವರಾಜು ಸಿಕ್ಕಿಬಿದ್ದಿದ್ದಾನೆ. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದು, ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಎಲ್ಲಾ ಸರ್ಕಾರಿ ಶಾಲೆಗಳಲ್ಲಿರುವ ಮಹಿಳಾ ಸಹಾಯಕರು, ಅಡುಗೆಯವರಿಗೆ 180 ದಿನಗಳ ಹೆರಿಗೆ ರಜೆ ನೀಡಲು ಸರ್ಕಾರ ನಿರ್ಧಾರ
ಜೈಲ್ ಆಫೀಸ್ನಲ್ಲಿದ್ದ ಪುಸ್ತಕದಲ್ಲಿ ಗಾಂಜಾ ಪತ್ತೆ
ಜೈಲಿನಲ್ಲಿ ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆ ಪ್ರಕರಣವೂ ಭಾರೀ ಸಂಚಲನ ಮೂಡಿಸಿತ್ತು. ಇದೀಗ ಜೈಲ್ ಆಫೀಸ್ನಲ್ಲಿದ್ದ ಪುಸ್ತಕದಲ್ಲಿ 3.5 ಗ್ರಾಂ ಗಾಂಜಾ ಪತ್ತೆಯಾಗಿದೆ ಎಂದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಾರೆ. ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳ ವಿರುದ್ಧ ದೂರು ದಾಖಲಾಗಿದೆ. ಜೊತೆಗೆ ಜೈಲು ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧವೂ ಕೇಸ್ ಬುಕ್ ಆಗಿದೆ. ತನಿಖೆ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಎಸ್ಪಿ ಉಮಾ ಮಾಹಿತಿ ನೀಡಿದ್ರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:05 am, Wed, 7 February 24