ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್

ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಮ್ಮ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತೀರ್ಮಾನ ಮಾಡ್ತಾರೆ. ಆದರೆ ನಾನು ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್ ಮಾತ್ರ ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಬಯಸ್ತಿದ್ದೇವೆ ಎಂದು ಅವರು ತಮ್ಮ ಇಚ್ಛೆ ವ್ಯಕ್ತಪಡಿಸಿದರು.

ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್
ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್
Follow us
TV9 Web
| Updated By: guruganesh bhat

Updated on: Jun 21, 2021 | 10:29 PM

ಕೊಪ್ಪಳ: ನಮಗೆ ಕಾಂಗ್ರೆಸ್ ಹೈಕಮಾಂಡ್​ನಿಂದ ಯಾವುದೇ ಎಚ್ಚರಿಕೆ ಬಂದಿಲ್ಲ. ನಾನು ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದ ತಕ್ಷಣ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ, ನಮ್ಮ ಅಭಿಪ್ರಾಯ ನಾವು ಹೇಳಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದರು. ರಾಜ್ಯದ ಜನರ ಅಭಿಪ್ರಾಯ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದಿದೆ. ಜನರು ಮುಂದಿನ ಮುಖ್ಯಮಂತ್ರಿ ಯಾರಾಗಬೇಕ ಅಂತಾ ಕೇಳಿದ್ರೆ ಸಿದ್ದರಾಮಯ್ಯ ಅಂತಾರೆ‌‌. ಆದರೆ ಕಾಂಗ್ರೆಸ್​ನ ಮುಂದಿನ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಮ್ಮ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತೀರ್ಮಾನ ಮಾಡ್ತಾರೆ. ಆದರೆ ನಾನು ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ್ ಮಾತ್ರ ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಬಯಸ್ತಿದ್ದೇವೆ ಎಂದು ಅವರು ಕೊಪ್ಪಳದಲ್ಲಿ ತಮ್ಮ ಇಚ್ಛೆ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಸಹ ಕೊಪ್ಪಳದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಕುಕನೂರ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯ ಸುಧಾರಣೆ ಆಗಬೇಕಿದ್ದರೆ ಅಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು. ಸರ್ವ ಜನಾಂಗದ ಜನರಿಗೆ ಒಳ್ಳೆಯ ಆಡಳಿತ ಸಿಗಬೇಕಂದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳುವುದೇನು? ಒಂದೆಡೆ ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹೈಡ್ರಾಮ ನಡೆಸಿದ್ದರೆ, ಇನ್ನೊಂದು ಕಡೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್​ನಲ್ಲಿಯೂ ನಾಯಕತ್ವದ ಪ್ರಶ್ನೆ ಕಾಡತೊಡಗಿದೆ. ಈ ಹಿನ್ನೆಲೆಯಲ್ಲಿ ‘ಕಾಂಗ್ರೆಸ್​ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ; ಹಾಗಾಗಿ ಕರ್ನಾಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಗೆ ಹೇಳ್ತಾರೋ ಹಾಗೆ ನಾವು ಕೇಳಲೇಬೇಕು’ ಎಂದು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ. ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಅದು ಜಮೀರ್ ಅವರ ವೈಯಕ್ತಿಕ ಅಭಿಪ್ರಾಯ ಅಂತ ಸಿದ್ದರಾಮಯ್ಯನವರೇ ಹೇಳಿದ್ದಾರೆ. ನಮ್ ಜೊತೆ ಫಾಲೊವರ್ಸ್ ಅಂತಾ ಇರ್ತಾರೆ. ಅವರಿಗೆ ಆಸೆಗಳಿರುತ್ತವೆ. ನಮ್ ನಾಯಕರು ಹೀಗ್ ಆಗ್ಬೇಕು ಎಂಬ ಆಸೆ ಇರುತ್ತೆ. ಸಿದ್ದರಾಮಯ್ಯಮವರ ಜೊತೆ ಇರುವ ಜಮೀರ್ ಗೆ ಅವರು ಸಿಎಂ ಆಗ್ಬೇಕು ಎಂಬ ಆಸೆ ಇದೆ ಎಂದು ಕಾಂಗ್ರೆಸ್ಸಿನಲ್ಲಿನ ಹಾಲಿ ಬೆಳವಣಿಗೆಗಳ ಬಗ್ಗೆ ಡಾ.ಜಿ.ಪರಮೇಶ್ವರ್ ವ್ಯಾಖ್ಯಾನಿಸಿದರು.

ಮುಂದುವರಿದು ಮಾತನಾಡಿದ ಅವರು ಕೆಲವೊಮ್ಮೆ ನಾನೂ ಸಿಎಂ ಆಗ್ಬೇಕು ಎಂಬ ಆಸೆ ನಮ್ಮ ಬೆಂಬಲಿಗರದ್ದಾಗಿರುತ್ತೆ. ಆದ್ರೆ ಈ ಬಾರಿ ಪಕ್ಷವನ್ನ ಅಧಿಕಾರಕ್ಕೆ ತರುವಂತದ್ದಾನ್ನ ಪ್ರತಿಯೊಬ್ಬರೂ ಮಾಡ್ಬೇಕು. ಅದು ನಮ್ಮ ಜವಾಬ್ದಾರಿ. ಬಿಜೆಪಿಯವರು ಕೆಟ್ಟ ಆಡಳಿತವನ್ನ ಕೊಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ನಮ್ಮಲ್ಲಿ ಪಕ್ಷದ ವ್ಯವಹಾರ ಬಂದಾಗ ಕಾಂಗ್ರೆಸ್ಸಿನ ರಾಜ್ಯಾಧ್ಯಕ್ಷರೇ ಸುಪ್ರೀಂ ಆಗುತ್ತಾರೆ. ಯಾರೇ ಅಧ್ಯಕ್ಷರಿದ್ರೂ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಗೆ ಅವರೇ ಸುಪ್ರೀಂ. ಡಿ.ಕೆ ಶಿವಕುಮಾರ್ ಗೆ ಹೈ ಕಮಾಂಡ್ ಆ ಅಧಿಕಾರ ಕೊಟ್ಟಿದೆ. ಡಿ.ಕೆ ಶಿವಕುಮಾರ್ ಹೇಗೇಳ್ತಾರೋ ಹಾಗ್ ಕೇಳಲೇಬೇಕು ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.

ಜಮೀರ್ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಹಂತದವರೆಗೂ ವಿಚಾರ ಬಂದಿಲ್ಲ. ನಮ್ಮಲ್ಲಿ ಬಣ ರಾಜಕೀಯ ಇಲ್ಲ. ಆ ರೀತಿ ಏನಾದ್ರೂ ಇದ್ರೆ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಸುರ್ಜೆವಾಲ ಸರಿಪಡಿಸುತ್ತಾರೆ. ನಮ್ಮಲ್ಲಿ ಯಾವುದೇ ಬಣ ರಾಜಕೀಯ ಇಲ್ಲ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ: Bengaluru: ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ; ಒಟ್ಟಾರೆಯೂ ಬೆಂಗಳೂರೇ ಫಸ್ಟ್

Coronavirus 3rd Wave: ಸೆಪ್ಟೆಂಬರ್-ಅಕ್ಟೋಬರ್​ನಲ್ಲಿ ಕೊವಿಡ್ 3ನೇ ಅಲೆ: ಐಐಟಿ ಸಂಶೋಧನೆ ವರದಿ

(MLA Zameer Ahmed says Congress High Command did not warm him about his talk on Siddaramaiah as next cm)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ