ಕೊಪ್ಪಳ ವಿವಿಯಿಂದ ಮಾದರಿ ಕಾರ್ಯ: ದೇವದಾಸಿ ಮಕ್ಕಳಿಗೆ, ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 14, 2024 | 6:23 PM

ಕಳೆದ ವರ್ಷದಿಂದ ಕಾರ್ಯಾರಂಭ ಮಾಡಿರುವ ಕೊಪ್ಪಳ ವಿಶ್ವವಿದ್ಯಾಲಯ(Koppal University) ತನ್ನ ಅನೇಕ ಕೆಲಸಗಳಿಂದ ಮೆಚ್ಚುಗೆಯನ್ನು ಪಡೆಯುತ್ತಿದೆ. ಅದರಂತೆ ಇದೀಗ ವಿವಿ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದು, ದೇವದಾಸಿಯರ ಮಕ್ಕಳು ಮತ್ತು ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲು ನಿರ್ಧಾರ ಕೈಗೊಂಡಿದೆ.

ಕೊಪ್ಪಳ ವಿವಿಯಿಂದ ಮಾದರಿ ಕಾರ್ಯ: ದೇವದಾಸಿ ಮಕ್ಕಳಿಗೆ, ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ
ಕೊಪ್ಪಳ ವಿವಿಯಿಂದ ಮಾದರಿ ಕಾರ್ಯ
Follow us on

ಕೊಪ್ಪಳ, ಜೂ.14: ಕಳೆದ ವರ್ಷದಿಂದ ಕಾರ್ಯಾರಂಭ ಮಾಡಿರುವ ಕೊಪ್ಪಳ ವಿಶ್ವವಿದ್ಯಾಲಯ(Koppal University) ತನ್ನ ಅನೇಕ ಕೆಲಸಗಳಿಂದ ಮೆಚ್ಚುಗೆಯನ್ನು ಪಡೆಯುತ್ತಿದೆ. ಹತ್ತಾರು ಸಂಕಷ್ಚಗಳ ನಡುವೆ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯ ಇದೀಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಹೌದು, ದೇವದಾಸಿಯರ ಮಕ್ಕಳು ಮತ್ತು ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲು ನಿರ್ಧಾರ ಕೈಗೊಂಡಿದೆ.

ಕುಕನೂರು ತಾಲೂಕಿನ ತಳಕಲ್​ನಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಜೂನ್ 12 ರಂದು ಸಿಂಡಿಕೇಟ್ ಸಭೆ ನಡೆಯಿತು. ಈ ಸಭೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ಪದವಿಯ ಪ್ರವೇಶಾತಿಯಲ್ಲಿ ದೇವದಾಸಿ ಮಕ್ಕಳಿಗೆ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲು ಸಿಂಡಿಕೇಟ್ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಯ ಸ್ನಾತಕೋತ್ತರ ಪದವಿಯ ಪ್ರವೇಶಾತಿ ಸಂದರ್ಭ ದೇವದಾಸಿ ಮಕ್ಕಳಿಗೆ ಹಾಗೂ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡಲಾಗುವುದು ಎಂದು ವಿವಿ ಕುಲಸಚಿವರಾದ ಪ್ರೊ.ಕೆ.ವಿ.ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ವಿಶ್ವವಿದ್ಯಾಲಯದಲ್ಲೂ ಧರ್ಮದ ಆಧಾರದಲ್ಲಿ ಮೀಸಲಾತಿ; ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಶಿಕ್ಷಣ ಪ್ರೇಮಿಗಳು ಮೆಚ್ಚುಗೆ

ಕಳೆದ ವರ್ಷ ಲಿಂಗತ್ವ ಅಲ್ಪಸಂಖ್ಯಾತರಿಗೆ ವಿಶ್ವವಿದ್ಯಾಲಯದಿಂದ ಉಚಿತ ಪ್ರವೇಶ ನೀಡಿತ್ತು. ಇದೀಗ ಆರ್ಥಿಕ ಕಾರಣಕ್ಕಾಗಿ ಉನ್ನತ ಶಿಕ್ಷಣದಿಂದ ವಂಚಿತರಾಗುವ ದೇವದಾಸಿಯರ ಮಕ್ಕಳು ಮತ್ತು ಅಂಧ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡುವ ಮೂಲಕ ಮತ್ತೊಂದು ಐತಿಹಾಸಿಕ ನಿರ್ಧಾರವನ್ನು ವಿವಿ ಕೈಗೊಂಡಿದೆ. ವಿವಿ ನಿರ್ಧಾರಕ್ಕೆ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ