ಕೊಪ್ಪಳ: ನಗರದ ರೈಲ್ವೆ ನಿಲ್ದಾಣದಲ್ಲಿ (Koppal Railway Satation) ಮಸೀದಿ (Mosque) ಹೋಲುವ ಕಟ್ಟೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಇದನ್ನು ತೆರವುಗೊಳಿಸುವಂತೆ ಸಂಸದ ಸಂಗಣ್ಣ ಕರಡಿ (Sanganna Karadi) ನೈಋತ್ಯ ರೈಲ್ವೆ ಇಲಾಖೆ ಜನರಲ್ ಮ್ಯಾನೇಜರ್ (South Western Railway Department)ಅವರಿಗೆ ಪತ್ರ ಬರೆದಿದ್ದಾರೆ. ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 1 ರಲ್ಲಿ ದರ್ಗಾ ರೀತಿ ಹೊಲುವ ಕಟ್ಟೆ ನಿರ್ಮಾಣ ಮಾಡಲಾಗಿದೆ ಎಂದು ಸಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ಮೂಲಕ ರೈಲ್ವೆ ನಿಲ್ದಾಣದಲ್ಲಿ ಇಸ್ಲಾಮಿಕರಣ ಹೇರಲಾಗುತ್ತಿದೆ ಅಂತ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸಂಗಣ್ಣ ಕರಡಿ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಅರ್ಧಬಂರ್ಧ ತೆರೆವುಗೊಳಿಸಿದ್ದನ್ನು, ಕೂಡಲೆ ಪೂರ್ತಿ ತೆರವುಗೊಳಿಸುವಂತೆ ಪತ್ರ ಬರೆದಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:25 am, Mon, 20 March 23