ಜೆಜೆಎಂ ಕಾಮಗಾರಿಯಲ್ಲಿ ನನ್ನ ಸೇರಿಸಿ‌ ಜನಪ್ರತಿನಿಧಿಗಳು ಭ್ರಷ್ಟಾಚಾರ ನಡೆಸಿದ್ದಾರೆ: ಒಪ್ಪಿಕೊಂಡ ಬಿಜೆಪಿ ಸಂಸದ

ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ ಅವರು ತಾವು ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ಹೇಳಿಕೆ ನೀಡಿದ್ದಾರೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ನಾವೇನೂ ಹರಿಶ್ಚಂದ್ರರಲ್ಲ, ನ್ಯಾಯ ಅನ್ಯಾಯವನ್ನು ನೋಡಬೇಕು ಎಂದಿದ್ದಾರೆ.

ಜೆಜೆಎಂ ಕಾಮಗಾರಿಯಲ್ಲಿ ನನ್ನ ಸೇರಿಸಿ‌ ಜನಪ್ರತಿನಿಧಿಗಳು ಭ್ರಷ್ಟಾಚಾರ ನಡೆಸಿದ್ದಾರೆ: ಒಪ್ಪಿಕೊಂಡ ಬಿಜೆಪಿ ಸಂಸದ
ಸಂಸದ ಸಂಗಣ್ಣ ಕರಡಿ
Edited By:

Updated on: Dec 02, 2023 | 11:05 AM

ಕೊಪ್ಪಳ, ಡಿ.02: ನಿಷ್ಠಾವಂತ, ಪ್ರಾಮಾಣಿಕ, ಜನರಿಗಾಗಿ ದುಡಿಯುವ ರಾಜಕಾರಣಿಗಳನ್ನು ಇತ್ತೀಚಿನ ದಿನಗಳಲ್ಲಿ ನೋಡುವುದೇ ಅಪರೂಪ. ಅದರಲ್ಲೂ ಯಾವೊಬ್ಬ ರಾಜಕಾರಣಿನೂ ತಾನು ಎಷ್ಟೇ ಹಣ ಲೂಟಿ ಹೊಡೆದರೂ, ಎಲ್ಲಿಯೂ ಈ ಬಗ್ಗೆ ಹೇಳಿಕೊಳ್ಳುವುದಿಲ್ಲ. ಎಲ್ಲಾ ಸುಳ್ಳು ತಾನೊಬ್ಬ ಪ್ರಮಾಣಿಕ ರಾಜಕಾರಣಿ ಎಂಬಂತೆ ತೋರಿಸಿಕೊಳ್ಳುತ್ತಾರೆ. ಆದರೆ ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ (Sanganna karadi) ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ (Jal jeevan Mission Scheme) ಹಣ ಲೂಟಿಯಾಗುತ್ತಿದೆ. ಕಾಮಗಾರಿಯಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ (Corruption) ಭಾಗಿಯಾಗಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಬಹಿರಂಗವಾಗಿ ತಾವು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ಸಂಸದ ಸಂಗಣ್ಣ ಕರಡಿ ಅವರು ಹೇಳಿಕೆ ನೀಡಿದ್ದಾರೆ.

ಕಾರಟಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ ಅವರು ತಾವು ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಾಗಿ ಹೇಳಿಕೆ ನೀಡಿದ್ದಾರೆ. ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂಪಾಯಿ ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ನಾವೇನೂ ಹರಿಶ್ಚಂದ್ರರಲ್ಲ, ನ್ಯಾಯ ಅನ್ಯಾಯವನ್ನು ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡ್ತಾರೆ ಎಂದು ತಾವು ಮಾಡಿದ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:55 am, Sat, 2 December 23

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us