Neeraj Chopra Gold: ನೀರಜ್ ಚೋಪ್ರಾಗೆ ಚಿನ್ನ; ಕೊಪ್ಪಳದಲ್ಲಿ ಹಿಂದೂಪರ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಇಂದು ಭಾರತೀಯ ಕ್ರೀಡಾಪ್ರೇಮಿಗಳು ಹುಗ್ಗಿ ಊಟ ಉಂಡು ಸಂಭ್ರಮಿಸುತ್ತಾರೆ.

Neeraj Chopra Gold: ನೀರಜ್ ಚೋಪ್ರಾಗೆ ಚಿನ್ನ; ಕೊಪ್ಪಳದಲ್ಲಿ ಹಿಂದೂಪರ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಕೊಪ್ಪಳದಲ್ಲಿ ಸಂಭ್ರಮಾಚರಣೆ
Follow us
TV9 Web
| Updated By: guruganesh bhat

Updated on: Aug 07, 2021 | 7:49 PM

ಕೊಪ್ಪಳ: ಒಲಿಂಪಿಕ್ಸ್ನಲ್ಲಿ ಜಾವಲೀನ್ ಎಸೆತದಲ್ಲಿ ನೀರಜ್ ಚೋಪ್ರಾ (Neeraj Chopra) ಚಿನ್ನದ ಪದಕ ಗಳಿಸಿರುವುದು ಭಾರತೀಯರೆಲ್ಲರ ಹರ್ಷಕ್ಕೆ ಕಾರಣವಾಗಿದೆ. ಇಂದು ಭಾರತೀಯ ಕ್ರೀಡಾಪ್ರೇಮಿಗಳು ಹುಗ್ಗಿ ಊಟ ಉಂಡು ಸಂಭ್ರಮಿಸುತ್ತಾರೆ. ಕೊಪ್ಪಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ನಗರದ ಅಶೋಕ ವೃತ್ತದಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಂಗಾರದ ಮನುಷ್ಯ ನೀರಜ್ ಚೋಪ್ರಾರ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು. ಇದೇ ಸ್ಥಳದಲ್ಲಿಯೇ ಹಿಂದೂಪರ ಕಾರ್ಯಕರ್ತರು ಸಹ ಘೋಷಣೆ ಕೂಗಿ ನೀರಜ್ ಚೋಪ್ರಾ ಗೆಲುವನ್ನು ಸಂಭ್ರಮಿಸಿದರು. ಜತೆಗೆ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿ ಭಾರತೀಯ ಹೆಮ್ಮೆಯ ಕ್ರೀಡಾಪಟುವಿನ ಗೆಲುವನ್ನು ಸಂಭ್ರಮಿಸಿದರು.

ಇಷ್ಟೊಂದು ದೊಡ್ಡ ಸಾಧನೆ ಮಾಡಿ, ಭಾರತೀಯರ ಪ್ರಶಂಸೆಗೆ ಪಾತ್ರರಾದ ಚಿನ್ನದ ಹುಡುಗ ನೀರಜ್ ಚೋಪ್ರಾ ಯಾರು? ಅವರ ಇತರ ಸಾಧನೆಗಳೇನು? ದೇಶಕ್ಕೆ, ಕ್ರೀಡೆಗೆ ಅವರ ಕೊಡುಗೆಗಳೇನು? ಇತ್ಯಾದಿಗಳ ಬಗ್ಗೆ ವಿವರಗಳನ್ನು ಇಲ್ಲಿ ನೀಡಲಾಗಿದೆ. ಬಂಗಾರ ತಂದವನ ಹಿನ್ನೆಲೆ ಏನು? ತಿಳಿದುಕೊಳ್ಳಿ.

ಭಾರತೀಯ ಸೇನೆಯ ಸುಬೇದಾರ್ ನೀರಜ್ ಚೋಪ್ರಾ ನೀರಜ್ ಚೋಪ್ರಾ ಹರ್ಯಾಣ ರಾಜ್ಯದ, ಪಾಣಿಪತ್ ಜಿಲ್ಲೆಯ, ಖಾಂಡ್ರಾ ಗ್ರಾಮದವರು. ಅವರು 1997ರ ಡಿಸೆಂಬರ್ 24 ರಂದು ಜನಿಸಿದರು. ತಮ್ಮ ಕಲಿಕೆಯನ್ನು ಚಂಡೀಗಡದಲ್ಲಿ ಪೂರೈಸಿದರು. ಬಳಿಕ, 2016 ರಲ್ಲಿ ಜೂನಿಯರ್ ಕಮಿಷನ್​ಡ್ ಅಧಿಕಾರಿಯಾಗಿ, ಸುಬೇದಾರ್ ರ್ಯಾಂಕ್​ನೊಂದಿಗೆ ಭಾರತೀಯ ಸೇನೆ ಸೇರಿಕೊಂಡರು. ಅಷ್ಟೇ ಅಲ್ಲದೆ, ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ನೀರಜ್ ಚೋಪ್ರಾ ಪಿಎಮ್ ಕೇರ್ಸ್ ನಿಧಿಗೆ 2 ಲಕ್ಷ ರೂಪಾಯಿಗಳ ಕೊಡುಗೆಯನ್ನೂ ನೀಡಿದ್ದರು.

ಚೋಪ್ರಾ ಗೆದ್ದ ಈ ಮೊದಲ ಪದಕಗಳಿವು ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನ ತಂದುಕೊಟ್ಟ ಚೋಪ್ರಾ, 2017ರ ಏಷ್ಯನ್ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಗೆದ್ದಿದ್ದರು. 2018ರ ಏಷ್ಯನ್ ಗೇಮ್ಸ್‌ನಲ್ಲಿ ಕೂಡ ಚಿನ್ನದ ಪದಕ ಗೆದ್ದಿದ್ದರು. ಚೋಪ್ರಾ 2018ರ ಕಾಮನ್​ವೆಲ್ತ್ ಗೇಮ್ಸ್​ನಲ್ಲೂ ಚಿನ್ನದ ಪದಕ ಪಡೆದಿದ್ದರು. ಅಥ್ಲೆಟಿಕ್ ಪಂದ್ಯವೊಂದರಲ್ಲಿ ಭಾರತೀಯ ಒಬ್ಬರಿಗೆ ಮೊತ್ತಮೊದಲ ಬಾರಿಗೆ ಒಲಿಂಪಿಕ್ ಚಿನ್ನದ ಪದಕ ಇಂದು ಲಭ್ಯವಾಗಿದೆ. ಅಭಿನವ್ ಬಿಂದ್ರಾ ಬಳಿಕ ವೈಯಕ್ತಿಕ ಸ್ಪರ್ಧೆಯೊಂದರಲ್ಲಿ ಎರಡನೇ ಬಾರಿಗೆ ಒಲಿಂಪಿಕ್ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಪಡೆದಿದ್ದಾರೆ.

ಇದನ್ನೂ ಓದಿ: 

Neeraj Chopra: ಚಿನ್ನದ ಹುಡುಗ ‘ಸುಬೇದಾರ್ ನೀರಜ್ ಚೋಪ್ರಾ’ ಬಗ್ಗೆ ನಿಮಗೆಷ್ಟು ಗೊತ್ತು?

Tokyo olympics: ಭಾರತದ ಬಂಗಾರದ ಮನುಷ್ಯ ನೀರಜ್! ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

(Neeraj Chopra wins Gold medal Celebration of Hindu and Congress activists in Koppal GGD)

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ